AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Portfolio Allocation: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?

ಕೊನೆಗೂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಕ್ಯಾಬಿನೆಟ್​ ಸಚಿವರಿಗೆ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಸಿಕ್ಕಿದೆ ಎನ್ನುವ ವಿವರ ಇಲ್ಲಿದೆ.

Karnataka Portfolio Allocation: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ?
ಸಿದ್ದರಾಮಯ್ಯ ಸಚಿವ ಸಂಪುಟ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:May 29, 2023 | 9:29 AM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ(portfolio allocation). ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4.  ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
  12. ಕೃಷ್ಣ ಬೈರೇಗೌಡ- ಕಂದಾಯ
  13. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  14. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  15. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  16. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  17. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  18. ಚಲುವರಾಯಸ್ವಾಮಿ- ಕೃಷಿ
  19. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  20. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  21. ಸಂತೋಷ ಲಾಡ್- ಕಾರ್ಮಿಕ
  22. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  23. ಆರ್.ಬಿ.ತಿಮ್ಮಾಪುರ- ಅಬಕಾರಿ
  24. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  25. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  26. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  27. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  28. ಕೆ.ಎನ್.ರಾಜಣ್ಣ: ಸಹಕಾರ
  29. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  30. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  31. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  32. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  33. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  34. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಸಚಿವರಿಗೆ ತಮಗೆ ಹಂಚಿಕೆಯಾಗಿದೆ ಎನ್ನಲಾದ ಖಾತೆಗಳ ಬಗ್ಗೆ ಸಮಾಧಾನವಿಲ್ಲ. ಖಾಸಗಿಯಾಗಿ ಈ ನಾಯಕರು ತಮ್ಮ ಅಸಮಾಧಾನವನ್ನು ತೋರ್ಪಡಿಸಿಕೊಂಡಿದ್ದು, ಬದಲಾವಣೆಗಾಗಿ ಒತ್ತಡ ತರುವ ಪ್ರಯತ್ನವನ್ನು ಮಾಡಿದ್ದರು ಎನ್ನಲಾಗಿದೆ. ಆದ್ರೆ, ಸಿದ್ದರಾಮಯ್ಯ ಅವರು ಸದ್ಯಕ್ಕೆ ಅಡ್ಜಸ್ಸ್​ ಮಾಡಿಕೊಳ್ಳಿ ಎಂದು ತಿಳಿ ಹೇಳಿದ್ದಾರೆ. ಇದರಿಂದ ರಾಮಲಿಂಗ ರೆಡ್ಡಿ ತೀವ್ರ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಂತಿಮವಾಗಿ ಅವರನ್ನು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್​ ಮನವೊಲಿಸಿದ್ದಾರೆ. ಅಲ್ಲದೇ ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಇಲಾಖೆ ನೀಡಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:45 am, Mon, 29 May 23