ಬೆಂಗಳೂರು: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ(portfolio allocation). ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
#KarnatakaCabinet portfolio allocation | CM Siddaramaiah keeps Finance, Deputy CM DK Shivakumar gets Major & Medium Irrigation and Bengaluru City Development, HK Patil gets Law & Parliamentary Affairs, Legislation, Tourism and Dinesh Gundu Rao gets Health & Family Welfare,… pic.twitter.com/LZT1QWMeXV
— ANI (@ANI) May 29, 2023
ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಸಚಿವರಿಗೆ ತಮಗೆ ಹಂಚಿಕೆಯಾಗಿದೆ ಎನ್ನಲಾದ ಖಾತೆಗಳ ಬಗ್ಗೆ ಸಮಾಧಾನವಿಲ್ಲ. ಖಾಸಗಿಯಾಗಿ ಈ ನಾಯಕರು ತಮ್ಮ ಅಸಮಾಧಾನವನ್ನು ತೋರ್ಪಡಿಸಿಕೊಂಡಿದ್ದು, ಬದಲಾವಣೆಗಾಗಿ ಒತ್ತಡ ತರುವ ಪ್ರಯತ್ನವನ್ನು ಮಾಡಿದ್ದರು ಎನ್ನಲಾಗಿದೆ. ಆದ್ರೆ, ಸಿದ್ದರಾಮಯ್ಯ ಅವರು ಸದ್ಯಕ್ಕೆ ಅಡ್ಜಸ್ಸ್ ಮಾಡಿಕೊಳ್ಳಿ ಎಂದು ತಿಳಿ ಹೇಳಿದ್ದಾರೆ. ಇದರಿಂದ ರಾಮಲಿಂಗ ರೆಡ್ಡಿ ತೀವ್ರ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅಂತಿಮವಾಗಿ ಅವರನ್ನು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಮನವೊಲಿಸಿದ್ದಾರೆ. ಅಲ್ಲದೇ ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಇಲಾಖೆ ನೀಡಲಾಗಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:45 am, Mon, 29 May 23