ಗ್ಯಾರಂಟಿ ಯೋಜನೆ ಜಾರಿಗೆ ಹಣಕಾಸು ಇಲಾಖೆ ವಿರೋಧ? ಸದ್ಯಕ್ಕೆ ಕಷ್ಟ ಎಂದ ಅಧಿಕಾರಿಗಳು

|

Updated on: May 31, 2023 | 5:00 PM

ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಮಾತ್ರ ವಿರೋಧ ವ್ಯಕ್ತಪಡಿಸಿದ್ದು, 1 ದಿನ ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ. 

ಗ್ಯಾರಂಟಿ ಯೋಜನೆ ಜಾರಿಗೆ ಹಣಕಾಸು ಇಲಾಖೆ ವಿರೋಧ? ಸದ್ಯಕ್ಕೆ ಕಷ್ಟ ಎಂದ ಅಧಿಕಾರಿಗಳು
ಸಚಿವರ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ
Follow us on

ಬೆಂಗಳೂರು: 5 ಗ್ಯಾರಂಟಿಗಳನ್ನೂ ಜಾರಿ ಮಾಡೋದು ಗ್ಯಾರಂಟಿ ಎಂದು ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಿಗದಿಯಾಗಿದೆ. ಈ ಮೊದಲು ಸಚಿವರ ಜತೆ ಸಿದ್ಧರಾಮಯ್ಯ ಸಭೆ ಮಾಡಿದ್ದು, ಸಿಎಂಗೆ ಸಚಿವರ ಪರಮಾಧಿಕಾರವೂ ಸಿಕ್ಕಿದೆ. ಆದರೆ ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಜತೆಗಿನ ಸಿಎಂ ಸಭೆಯಲ್ಲಿ  ಹಣಕಾಸು ಇಲಾಖೆ ವಿರೋಧಿಸಿದ್ದು, ಗ್ಯಾರಂಟಿ ಜಾರಿ‌ಗೆ ಅನುದಾನ ಹೊಂದಿಸುವುದು ಸದ್ಯಕ್ಕೆ ಕಷ್ಟ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಆದರೆ ಗ್ಯಾರಂಟಿ ಜಾರಿ ಮಾಡಲು ಸಭೆಯಲ್ಲಿ ಸಚಿವರು ಮಾತ್ರ ಪಟ್ಟು ಹಿಡಿದಿದ್ದು, ಹಣಕಾಸು ಇಲಾಖೆ ಅಧಿಕಾರಿಗಳು 1 ದಿನ ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ; ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ

ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಮತ್ತೊಂದು ಸುತ್ತಿನ ಸಭೆ 

ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸುವ ಮುನ್ನ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸುವ ನಿರೀಕ್ಷೆ ಇದೆ. ಈಗಾಗಲೇ ಅಧಿಕಾರಿಗಳ ಜತೆ ಸಿಎಂ ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಸರ್ಕಾರ ಘೋಷಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: 5 Guarantee: ಎಲ್ಲಾ ಯೋಜನೆಗಳಿಗೂ ಮಾನದಂಡ ಹಾಕಬೇಕಾಗಿದೆ, ಯಾರು ಅರ್ಹ ಅವರಿಗೆ ಯೋಜನೆಗಳು ಲಭಿಸುತ್ತವೆ- ಪ್ರಿಯಾಂಕ್​ ಖರ್ಗೆ

ಏತನ್ಮಧ್ಯೆ, ಯೋಜನೆಗಳ ಅನುಷ್ಠಾನ ವಿಳಂಬದ ಬಗ್ಗೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಪ್ರಶ್ನಿಸುತ್ತಿವೆ.

ಗ್ಯಾರಂಟಿಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದ ಸಿಎಂ

5 ಗ್ಯಾರಂಟಿಗಳನ್ನು ಜಾರಿ ಮಾಡುವುದು ಖಂಡಿತಾ ಎಂದು ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಿಗದಿಯಾಗಿದೆ. 5 ಗ್ಯಾರಂಟಿಗಳ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇಂದಿನ ಸಭೆಯಲ್ಲಿ ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿಲ್ಲ. ಇಂದಿನ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಚಿವರ ಜತೆ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೊಂದಲಕಾರಿ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ

ರಾಜ್ಯ ಸರ್ಕಾರದಿಂದ 5 ಗ್ಯಾರಂಟಿಗಳ ಜಾರಿ ವಿಚಾರವಾಗಿ ಗೊಂದಲಕಾರಿ ಹೇಳಿಕೆ ನೀಡದಂತೆ ಸಭೆಯಲ್ಲಿ ಸಚಿವರಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಅನಗತ್ಯ ಹೇಳಿಕೆಗಳಿಂದ ಗೊಂದಲ ಮೂಡುತ್ತಿದೆ. ಯಾವ ಸಚಿವರೂ ಅನಗತ್ಯವಾಗಿ ಹೇಳಿಕೆ ನೀಡಬೇಡಿ ಎಂದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:58 pm, Wed, 31 May 23