ಹರೀಶ್ ಪೂಂಜ ವಿರುದ್ಧ ಎಫ್​ಐಆರ್: ಕಾಂಗ್ರೆಸ್ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಕಿಡಿ, ಸ್ಪೀಕರ್​ಗೆ ದೂರು ಎಂದ ಬಿಜೆಪಿ ನಾಯಕ

| Updated By: ಗಣಪತಿ ಶರ್ಮ

Updated on: Oct 19, 2023 | 6:26 PM

ಸಮಸ್ಯೆ ಬಂದಾಗ ಜನ ಶಾಸಕರನ್ನು ಕೇಳುವುದನ್ನು ಕೇಳುವುದು ಸಾಮಾನ್ಯ. ಕಾಂಗ್ರೆಸ್​ನವರು ಕೆಟ್ಟ ಕೆಲಸ ಮಾಡಬಾರದು. ಪೂಂಜಾ ವಿರುದ್ಧ ಎಫ್​ಐಆರ್ ದಾಖಲಿಸಿರುವ ವಿಚಾರವಾಗಿ ಸ್ಪೀಕರ್​ಗೆ ದೂರು ನೀಡುತ್ತೇವೆ ಎಂದು ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಹರೀಶ್ ಪೂಂಜ ವಿರುದ್ಧ ಎಫ್​ಐಆರ್: ಕಾಂಗ್ರೆಸ್ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಕಿಡಿ, ಸ್ಪೀಕರ್​ಗೆ ದೂರು ಎಂದ ಬಿಜೆಪಿ ನಾಯಕ
ಕೋಟ ಶ್ರೀನಿವಾಸ್ ಪೂಜಾರಿ
Follow us on

ಬೆಂಗಳೂರು, ಅಕ್ಟೋಬರ್ 19: ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ್ತೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ವಿರುದ್ಧ ಎಫ್​ಐಆರ್ ದಾಖಲಿಸಿದ್ದಕ್ಕೆ ಬಿಜೆಪಿ ಎಂಎಲ್​​ಸಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಸರ್ಕಾರ ಬಿಜೆಪಿ ನಾಯಕರನ್ನು ಗುರಿಯಾಗಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವೇಚ್ಛಾಚಾರಿಯಾಗಿ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್​​ನವರು ಕೆಟ್ಟ ಕೆಲಸ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಬಡವನ ಮನೆ ತೆರವುಗೊಳಿಸಬೇಡಿ ಎಂದು ಹರೀಶ್ ಪೂಂಜಾ ಹೇಳಿದ್ದರು. ಸರ್ವೆ ಮಾಡಿ ಅರಣ್ಯ ಪ್ರದೇಶ ಎಂದು ಕಂಡು ಬಂದರೆ ತೆರವುಗೊಳಿಸಿ. ನಾನು ಕೂಡ ಸಹಕಾರ ನೀಡುವೆ ಎಂದು ಹರೀಶ್ ಪೂಂಜಾ ಹೇಳಿದ್ದರು. ಬಡಕುಟುಂಬವನ್ನು ಹೊರಹಾಕಬೇಡಿ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್ ದಾಖಲು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆ ಬಂದಾಗ ಜನ ಶಾಸಕರನ್ನು ಕೇಳುವುದನ್ನು ಕೇಳುವುದು ಸಾಮಾನ್ಯ. ಕಾಂಗ್ರೆಸ್​ನವರು ಕೆಟ್ಟ ಕೆಲಸ ಮಾಡಬಾರದು. ಪೂಂಜಾ ವಿರುದ್ಧ ಎಫ್​ಐಆರ್ ದಾಖಲಿಸಿರುವ ವಿಚಾರವಾಗಿ ಸ್ಪೀಕರ್​ಗೆ ದೂರು ನೀಡುತ್ತೇವೆ ಎಂದು ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ಸಮ್ಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಿವಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕೆಂಬುದು ಬಿಜೆಪಿ ಆಗ್ರಹ. 2011ರಲ್ಲಿ ತನಿಖೆಗೆ ಅನುಮತಿ ನೀಡಿದ ಕಾರಣ ಬಿಎಸ್‌ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಪ್ರಜಾಪ್ರಭುತ್ವದಲ್ಲಿ‌ ಆರೋಪಗಳು ಬಂದಾಗ ರಾಜೀನಾಮೆ ಅನಿವಾರ್ಯ. ಕಾನೂನಿನ ಚೌಕಟ್ಟಿನ‌ ವ್ಯವಸ್ಥೆಯಲ್ಲಿ ರಾಜೀನಾಮೆ ನೀಡುವುದು ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?

ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್ ದಾಖಲಾಗಿದ್ದೇಕೆ?

ಬೆಳ್ತಂಗಡಿಯ ಕಳೆಂಜ ಗ್ರಾಮದ ವ್ಯಕ್ತಿಯೋರ್ವರು ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡುತ್ತಿದ್ದರು. ಅರಣ್ಯ ಇಲಾಖೆಯು ಮನೆ ತೆರವುಗೊಳಿಸಲು ಮುಂದಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನೆ ಕಟ್ಟಿದವರ ಪರ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಹೀಗಾಗಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಕೆ.ಕೆ.ಜಯಪ್ರಕಾಶ್ ನೀಡಿದ ದೂರು ಆಧರಿಸಿ ಹರೀಶ್ ಪೂಂಜ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ