ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ಐಆರ್, ಏನಿದು ಪ್ರಕರಣ?
ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.
ಮೈಸೂರು, (ಡಿಸೆಂಬರ್ 27): ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ. ಮೈಸೂರಿನ (Mysuru) ದೇವರಾಜ ಪೊಲೀಸ್ ಠಾಣೆಯಲ್ಲಿ 1860ರ IPC ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ(ಡಿಸೆಂಬರ್ 27) ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದರು.
ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್
ಪ್ರತಾಪ್ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು ನೀಡಿದ್ದರು. ಅದಂತೆ ಇದೀಗ ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿಯಲ್ಲಿ ಭಾಗವಹಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ನನ್ನ ಭಯೋತ್ಪಾದಕ ಅಂತ ಬಿಂಬಿಸುವ ಪ್ರಯತ್ನ ಕಾಂಗ್ರೆಸಿಗರು ಮಾಡಿದರು. ಮುಸ್ಲಿಮರೆಲ್ಲಾ ಭಯೋತ್ಪಾದಕರು ಅನ್ನೋ ರೀತಿ ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ಸಂಸತ್ ವಿಚಾರದಲ್ಲಿ ನಾನು ಸ್ಪಷ್ಟನೆ ಕೊಟ್ಟ ಬೆನ್ನಲ್ಲೆ ಪ್ರತಾಪ್ ಸಿಂಹ ಸಹೋದರ ಮರಗಳ್ಳ ಅಂತಾ ಕಾಂಗ್ರೆಸ್ ನವರು ಪೋಸ್ಟ್ ಮಾಡಿದ್ದರು ಎಂದು ಟೀಕಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ