AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ

ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಜೆಡಿಎಸ್​ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿ FIR; ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು; ಜಿಟಿ ದೇವೇಗೌಡ
ಜಿ ಟಿ ದೇವೇಗೌಡ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2023 | 3:18 PM

Share

ಮೈಸೂರು, ಸೆ.08: ಜೆಡಿಎಸ್​ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಎಫ್​ಐಆರ್​ (FIR) ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್​ (JDS) ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ (GT Devegowda)ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ ಎಂದರು.

ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ

ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಹೆಚ್​ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆಪ್ಟೆಂಬರ್​ 10ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣ; ನ್ಯಾಯಾಲಯದ ತೀರ್ಪು ಸಂತಸ ನೀಡಿದೆ, ಇದು ಎಲ್ಲ ರಾಜಕೀಯ ಧುರೀಣರಿಗೆ ಪಾಠವಾಗಬೇಕು: ಎ ಮಂಜು

ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು, ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಮೈಸೂರಿನಲ್ಲಿ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ