ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್​ಕೆ ಪಾಟೀಲ್

ಸದನದಲ್ಲಿ ಯಾವಾಗಲೂ ವಿರೋಧ ಪಕ್ಷದ ನಾಯಕರು ಇದ್ದೇ ಇರುತ್ತಿದ್ದರು. ಆದರೆ ಇತಿಹಾಸದಲ್ಲಿ ಮೊದಲ ಬಾರಿ ವಿರೋಧ ಪಕ್ಷದ ನಾಯಕನಿಲ್ಲದೇ ರಾಜ್ಯಪಾಲರ ಭಾಷಣ ಮಾಡಿದ್ದಾರೆ ಇದು ದುರ್ದೈವ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್​ ಹೇಳಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ: ಇದು ದುರ್ದೈವ ಎಂದ ಸಚಿವ ಹೆಚ್​ಕೆ ಪಾಟೀಲ್
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Jul 03, 2023 | 3:28 PM

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದ್ದು, ಇದು ದುರ್ದೈವ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (HK Patil)​ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸದನದಲ್ಲಿ ಯಾವಾಗಲೂ ವಿಪಕ್ಷ ನಾಯಕರು ಇದ್ದೇ ಇರುತ್ತಿದ್ದರು. ವಿರೋಧ ಪಕ್ಷದ ನಾಯಕನಿಲ್ಲದೇ ರಾಜ್ಯಪಾಲರ ಭಾಷಣ ಮಾಡಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲ ಎಂದರು.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯ ವಿಚಾರ ಇರಬಹುದು. ಆದರೆ ಸದನದ ಘನತೆ ಮತ್ತು ಸಂಸ್ಕೃತಿ, ಪರಂಪರೆಗೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೂ ಸೃಷ್ಟಿಯಾಗ್ತಾರಾ ಅಜಿತ್​ ಪವಾರ್? ಹೆಚ್​ ಡಿ ಕುಮಾರಸ್ವಾಮಿ ಮಾತಿನ ಮರ್ಮವೇನು?

ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಕಾಂಗ್ರೆಸ್​ ಪ್ರಶ್ನೆ

ಇತ್ತೀಚೆಗೆ ಕಾಂಗ್ರೆಸ್​ ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಪ್ರಕಟಣೆ ನೀಡುವ ಮೂಲಕ ವ್ಯಂಗ್ಯವಾಡಿತ್ತು. ಅದೇ ರೀತಿಯಾಗಿ ಇಂದು ಕೂಡ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಬಿಜೆಪಿ ಕಾಲೆಳೆದಿದೆ.

ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳು ಆಯ್ತು. ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು. ಡಿಯರ್​ ಬಿಜೆಪಿ ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ ಎಂದು ಕಿಡಿಕಾರಿದೆ.

ಗ್ಯಾರಂಟಿಗಳ ಅನುಷ್ಠಾನ ಬಗೆಗಿನ ಬದ್ಧತೆ ರಾಜ್ಯಪಾಲರು ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತೆ. ಇದನ್ನು ರಾಜ್ಯಪಾಲ ಗೆಹ್ಲೋಟ್​ ಭಾಷಣದ ಮೂಲಕ ತಿಳಿಸಿದ್ದಾರೆ. ಸರ್ಕಾರದ ಜನಪರವಾದ ಕಾಳಜಿ ಬಗ್ಗೆ ರಾಜ್ಯಪಾಲರು ಹೇಳಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂದೇಶ ನೀಡಿದ್ದೇವೆ ಎಂದರು.

ಇದನ್ನೂ ಓದಿ: ಮಂಡ್ಯದ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಪೈಪೋಟಿ: ಚುನಾವಣೆಗೆ ದಿನಾಂಕ ನಿಗದಿ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಬೇಕಾದ ಕರ್ತವ್ಯ ಆ ಹೆಜ್ಜೆಗಳ ಸೂಕ್ಷ್ಮ ಪರಿಚಯವನ್ನು ರಾಜ್ಯಪಾಲರು ಮಾಡಿದ್ದಾರೆ. ಪ್ರವಾಸೋದ್ಯಮ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಕ್ಕೂ ಮಹತ್ವ ಕೊಟ್ಟಿದ್ದಾರೆ. ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುವಂತಹ ಕಾರ್ಯಕ್ರಮ ಕೊಡುವ ಭರವಸೆಯನ್ನು ರಾಜ್ಯಪಾಲರ ಭಾಷಣದ ಮೂಲಕ ನೀಡಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ