ಗುತ್ತಿಗೆದಾರರಿಗೆ 1 ರೂಪಾಯಿ ಕೊಟ್ಟಿಲ್ಲ, ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪ

ಗುತ್ತಿಗೆದಾರರ ಜೊತೆ ರೇಟ್ ಫಿಕ್ಸ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿರುವ ಬಸವರಾಜ ಬೊಮ್ಮಾಯಿ, ನಿಮ್ಮ ಗುತ್ತಿಗೆದಾರರಿಗೆ ನ್ಯಾಯ ಕೊಡಿಸುವಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರಿಗೆ ಸವಾಲು ಹಾಕಿದ್ದಾರೆ.

ಗುತ್ತಿಗೆದಾರರಿಗೆ 1 ರೂಪಾಯಿ ಕೊಟ್ಟಿಲ್ಲ, ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪ
ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯ
Follow us
Rakesh Nayak Manchi
|

Updated on: Jun 19, 2023 | 6:23 PM

ಬೆಂಗಳೂರು: ಹಲವು ಸಚಿವರು ತಮ್ಮ ಖಾತೆಗಳ ಕಾಮಗಾರಿಗಳನ್ನು ನಿಲ್ಲಿಸಿದ್ದಾರೆ. ಗುತ್ತಿಗೆದಾರರಿಗೆ 1 ರೂಪಾಯಿ ಕೊಟ್ಟಿಲ್ಲ, ಅವರ ಜೊತೆ ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪ ಮಾಡಿದ್ದಾರೆ. ಅಲ್ಲದೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಜೊತೆ ಸೇರಿಕೊಂಡು ಆರೋಪ ಮಾಡಿದ್ದ ಕೆಂಪಣ್ಣ (Kempanna) ಅವರೇ ಇದೀಗ ನಿಮ್ಮ ಗುತ್ತಿಗೆದಾರರಿಗೆ ನ್ಯಾಯ ಕೊಡಿಸಿ ಅಂತ ಸವಾಲು ಹಾಕಿದ್ದಾರೆ.

ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಅವಧಿ ಬಗ್ಗೆ ಅಪಸ್ವರ ಎದ್ದಿದೆ. ಯಾಕೆ ಈಗ ಮಾತನಾಡುತ್ತಿದ್ದಾರೆ? ಗಟ್ಟಿ ಇರುವ ಹಲ್ಲನ್ನು ಅಲ್ಲಾಡಿಸಿ ಅಲ್ಲಾಡಿಸಿ ಬೀಳಿಸುವಂತಾಗಿದೆ. ಸಿಎಂ ಬದಲಾವಣೆ ಅಂತಾ ಹೇಳಿ ತೆಗೆಯುವ ಪ್ರಯತ್ನ ನಡೆಯುತ್ತಿದೆ. ಭ್ರಮನಿರಸನ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ ಅಂತ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: CM Presser: ಅಕ್ಕಿ ಬದಲು ರಾಗಿ, ಜೋಳ ಸಹ ಕೊಡಲಾಗದ ಸ್ಥಿತಿ ರಾಜ್ಯದಲ್ಲಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಕೇಂದ್ರದ ಮೇಲೆ ಕಾಂಗ್ರೆಸ್​​ನವರು ಗೂಬೆ ಕೂರಿಸುವುದು ಸರಿಯಲ್ಲ: ಬೊಮ್ಮಾಯಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲ ವಿಚಾರದಲ್ಲೂ ಗೊಂದಲ ನಿರ್ಮಾಣವಾಗಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಅಂತ ಬೊಮ್ಮಾಯಿ ಆರೋಪಿಸಿದ್ದಾರೆ. ಆರ್ಥಿಕ ಹೊರೆ ಎಷ್ಟಿದೆ ಅಂತಾ ಗೊತ್ತಿಲ್ಲ, ಬಸ್ ವ್ಯವಸ್ಥೆ ಅಧ್ವಾನವಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿ ರಾಜ್ಯಕ್ಕೆ ಕೊಡಲಿದೆ. ಹೀಗಾಗಿ ಕೇಂದ್ರದ ಮೇಲೆ ಕಾಂಗ್ರೆಸ್​​ ನಾಯಕರು ಗೂಬೆ ಕೂರಿಸುವುದು ಸರಿಯಲ್ಲ ಎಂದರು.

ಮಾತು ತಪ್ಪಿದ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿದ ಸರ್ಕಾರ ಎಂದು ಹೇಳಿದ ಬೊಮ್ಮಾಯಿ, ಕಾಂಗ್ರೆಸ್​​ನವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಜನ ಬಾಯಿಗೆ ಬಂದಂತೆ ಉಗಿಯುತ್ತಿದ್ದಾರೆ. ಕಾಂಗ್ರೆಸ್​ಗೆ ಸರ್ಕಾರ ನಡೆಸುವ ಯೋಗ್ಯತೆ ಇಲ್ಲ ಎಂದರು. ಅಲ್ಲದೆ, ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ​ ರಾಜಕೀಯ ಪ್ರೇರಿತ ಪ್ರತಿಭಟನೆಗೆ ಮುಂದಾಗಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ