ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕಾಗಿ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಎಎಪಿ

ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಕಳೆದ ಚುನಾವಣೆಗಳಲ್ಲಿ ಎಎಪಿ ಇದನ್ನು ಸಾಧಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪಕ್ಷದಿಂದ ಪದೇ ಪದೇ ವಿನಂತಿ ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿ

ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕಾಗಿ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಎಎಪಿ
ಎಎಪಿ ಸುದ್ದಿಗೋಷ್ಠಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 06, 2023 | 7:35 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ವಾರಗಳು ಬಾಕಿ ಇರುವಾಗ, ಆಮ್ ಆದ್ಮಿ ಪಕ್ಷವು (AAP) ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ರಾಜ್ಯ ಹೈಕೋರ್ಟ್‌ಗೆ (Karnataka High court) ಅರ್ಜಿ ಸಲ್ಲಿಸಿದ್ದು, ವಿಳಂಬ ಮಾಡುತ್ತಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಾಗುತ್ತಿದೆ ಎಂದು ಹೇಳಿದೆ. ಎಎಪಿ ಕರ್ನಾಟಕ ಸಂಚಾಲಕ ಪೃಥ್ವಿ ರೆಡ್ಡಿ ಸಲ್ಲಿಸಿದ ಅರ್ಜಿಯಲ್ಲಿ, ಪಕ್ಷವು ರಾಷ್ಟ್ರೀಯ ಪಕ್ಷವಾಗಲು ಎಲ್ಲಾ ಮಾನದಂಡಗಳನ್ನು ಪೂರೈಸುತ್ತದೆ, ಆದರೆ ಭಾರತೀಯ ಚುನಾವಣಾ ಆಯೋಗವು (ECI) ಸ್ಥಾನಮಾನವನ್ನು ನಿರಾಕರಿಸಿದೆ ಎಂದು ಹೇಳುತ್ತದೆ.

ಇಸಿಐ ಮಾರ್ಗಸೂಚಿಗಳ ಪ್ರಕಾರ ಸಾರ್ವತ್ರಿಕ ಚುನಾವಣೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಲಭಿಸಿದ ಮಾನ್ಯ ಮತಗಳಲ್ಲಿ ಕನಿಷ್ಠ ಶೇಕಡಾ 6 ರಷ್ಟು ಮತಗಳನ್ನು ಪಡೆದುಕೊಂಡರೆ ಮತ್ತು ಲೋಕಸಭೆಯಲ್ಲಿ ಕನಿಷ್ಠ ನಾಲ್ಕು ಸ್ಥಾನಗಳನ್ನು ಗೆದ್ದರೆ ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಬಹುದು. ಅಥವಾ ಕನಿಷ್ಠ ಮೂರು ವಿಭಿನ್ನ ರಾಜ್ಯಗಳಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಲೋಕಸಭೆ ಸ್ಥಾನಗಳಲ್ಲಿ ಕನಿಷ್ಠ 2 ಪ್ರತಿಶತವನ್ನು ಗೆದ್ದರೆ ಅಥವಾ ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡರೆ ಅದಕ್ಕೆ ರಾಷ್ಟ್ರೀಯ ಪಕ್ಷವೆಂಬ ಸ್ಥಾನಮಾನ ಸಿಗುತ್ತದೆ.

ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಕಳೆದ ಚುನಾವಣೆಗಳಲ್ಲಿ ಎಎಪಿ ಇದನ್ನು ಸಾಧಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪಕ್ಷದಿಂದ ಪದೇ ಪದೇ ವಿನಂತಿ ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನಿಗದಿತ ಕಾಲಮಿತಿಯೊಳಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಎಎಪಿ ಘೋಷಿಸಿದೆ. ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುವುದು ರಾಜ್ಯದಾದ್ಯಂತ ಪ್ರಚಾರ ಮತ್ತು ಬೆಂಬಲವನ್ನು ಕ್ರೋಢೀಕರಿಸಲು ಸಹಾಯ ಮಾಡುತ್ತದೆ ಎಂದು ಪಕ್ಷ ಹೇಳುತ್ತದೆ.

ಕಳೆದ ವಾರ, ಕರ್ನಾಟಕ ಚುನಾವಣೆಯ ದಿನಾಂಕಗಳನ್ನು ಘೋಷಿಸುವಾಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಟ್ಟದ ರಾಜಕೀಯ ಸಂಘಟನೆಯ ಸ್ಥಾನಮಾನವು ಪರಿಶೀಲನೆಯಲ್ಲಿದೆ ಎಂದು ಹೇಳಿದ್ದರು.

ಇದನ್ನೂ ಓದಿAK Antony: ಅನಿಲ್ ಆಂಟನಿಯ ನಿರ್ಧಾರ ತಪ್ಪು, ಇದರಿಂದ ನನಗೆ ತುಂಬಾ ನೋವಾಗಿದೆ: ಎಕೆ ಆಂಟನಿ ಪ್ರತಿಕ್ರಿಯ

ನಿಯಮಗಳ ಪ್ರಕಾರ ಎಎಪಿಗೆ ರಾಷ್ಟ್ರೀಯ ಸ್ಥಾನಮಾನ ಸಿಗಬೇಕೇ ಅಥವಾ ಬೇಡವೇ ಎಂದು ನೀವು ಕೇಳಿದರೆ 10 ನೇ ತರಗತಿಯ ವಿದ್ಯಾರ್ಥಿ ಕೂಡ ನಿಮಗೆ ಉತ್ತರವನ್ನು ನೀಡುತ್ತಾನೆ ಎಂದು ಎಎಪಿ ರಾಜ್ಯಸಭಾ ಸಂಸದ ಮತ್ತು ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ಚುನಾವಣಾ ಆಯೋಗ ಏನು ಮಾಡುತ್ತಿದೆ ಎಂಬುದು ಗೊತ್ತಿದೆ. ಎಎಪಿಗೆ ತಕ್ಷಣವೇ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡುವಂತೆ ನಾನು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇನೆ. ಕರ್ನಾಟಕ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಅರ್ಹವಾಗಿರುವ ಎಲ್ಲಾ ಸೌಲಭ್ಯಗಳನ್ನು  ನಾವು ಪಡೆಯುವಂತಾಗಬೇಕು  ಎಂದು ಸಿಂಗ್ ಹೇಳಿದರು.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆ

ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಮಾನ್ಯತೆ ಕೋರಿ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ. ಆಮ್ ಆದ್ಮಿ ಪಕ್ಷದ ಮನವಿ ಪರಿಶೀಲಿಸಿ ಏ.13ರೊಳಗೆ ಈ ಬಗ್ಗೆ ನಿರ್ಧರಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Thu, 6 April 23