AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಚುನಾವಣೋತ್ತರ ಗಲಭೆ; ಕರ್ನಾಟಕ ಮೂಲದ ನಿವೃತ್ತ ನ್ಯಾ. ಮಂಜುಳಾ ಚೆಲ್ಲೂರ್ ನೇತೃತ್ವದಲ್ಲಿ​ ಎಸ್​ಐಟಿ ತನಿಖೆ

ಮಂಜುಳಾ ಚೆಲ್ಲೂರ್ ನೇತೃತ್ವದಲ್ಲಿ ಎಸ್​ಐಟಿ ತಂಡ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಯ ತನಿಖೆ ನಡೆಸಲಿದೆ. ಈ ಮೊದಲು ಆಗಸ್ಟ್ 19ರಂದು ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆದೇಶ ನೀಡಿತ್ತು.

ಪಶ್ಚಿಮ ಬಂಗಾಳ ಚುನಾವಣೋತ್ತರ ಗಲಭೆ; ಕರ್ನಾಟಕ ಮೂಲದ ನಿವೃತ್ತ ನ್ಯಾ. ಮಂಜುಳಾ ಚೆಲ್ಲೂರ್ ನೇತೃತ್ವದಲ್ಲಿ​ ಎಸ್​ಐಟಿ ತನಿಖೆ
ಕೊಲ್ಕತ್ತಾ ಹೈಕೋರ್ಟ್
TV9 Web
| Updated By: ಸುಷ್ಮಾ ಚಕ್ರೆ|

Updated on:Sep 03, 2021 | 4:47 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೇ- ಜೂನ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಭಾರೀ ಹಿಂಸಾಚಾರಗಳು ನಡೆದು, ಹಲವು ಜನರು ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಕೊಲ್ಕತ್ತಾ ಹೈಕೋರ್ಟ್​ ಎಸ್​ಐಟಿಗೆ ಒಪ್ಪಿಸಿದೆ. ಈ ಎಸ್​ಐಟಿ ತಂಡದ ನೇತೃತ್ವವನ್ನು ಕರ್ನಾಟಕ ಮೂಲದವರಾದ ಕೊಲ್ಕತ್ತಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮಂಉಳಾ ಚೆಲ್ಲೂರ್ ವಹಿಸಿಕೊಳ್ಳಲಿದ್ದಾರೆ.

ಮಂಜುಳಾ ಚೆಲ್ಲೂರ್ ನೇತೃತ್ವದಲ್ಲಿ ಎಸ್​ಐಟಿ ತಂಡ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಯ ತನಿಖೆ ನಡೆಸಲಿದೆ. ಈ ಮೊದಲು ಆಗಸ್ಟ್ 19ರಂದು ಕೊಲ್ಕತ್ತಾ ಹೈಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆದೇಶ ನೀಡಿತ್ತು. ಇದಾದ ಬಳಿಕ ಕೋರ್ಟ್​ ಎಸ್​ಐಟಿಯನ್ನು ರಚಿಸಿತ್ತು. ಈ ಎಸ್​ಐಟಿ ಮೂಲಕ ಪಶ್ಚಿಮ ಬಂಗಾಳದ ಪೊಲೀಸರು ತನಿಖೆ ನಡೆಸಬೇಕೆಂದು ಸೂಚಿಸಿತ್ತು. ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಎಲ್ಲ ಕ್ರಿಮಿನಲ್ ಪ್ರಕರಣಗಳ ತನಿಖೆಗಳನ್ನೂ ನಡೆಸುವಂತೆ ಕೋರ್ಟ್​ ಸೂಚಿಸಿತ್ತು.

ಪಶ್ಚಿಮ ಬಂಗಾಳ ಚುನಾವಣೋತ್ತರ ಗಲಭೆ ಪ್ರಕರಣದ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಎಸ್​ಐಟಿ ಮತ್ತು ಸಿಬಿಐಗೆ 6 ವಾರಗಳ ಸಮಯಾವಕಾಶ ನೀಡಲಾಗಿದೆ. ಚುನಾವಣೋತ್ತರ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಇದುವರೆಗೂ ಸಿಬಿಐ ಈ ಪ್ರಕರಣದಲ್ಲಿ 34 ಎಫ್​ಐಆರ್​ಗಳನ್ನು ದಾಖಲಿಸಿದೆ. ಅಲ್ಲದೆ, ಈ ಪ್ರಕರಣದ ತನಿಖೆಯಲ್ಲಿ ಎಸ್​ಐಟಿ ತಂಡಕ್ಕೆ ಸಹಕರಿಸಲು ಪಶ್ಚಿಮ ಬಂಗಾಳ ಸರ್ಕಾರ 10 ಐಪಿಎಸ್​ ಅಧಿಕಾರಿಗಳನ್ನು ನೇಮಕ ಮಾಡಿದೆ.

ಕಳೆದ ಮೇ- ಜೂನ್ ತಿಂಗಳಲ್ಲಿ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತೃಣಮೂಲದ ಭಾರೀ ಗೆಲುವು  ಸಾಧಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಅತ್ಯಂತ ಘೋರ ಕೊಲೆ, ಅತ್ಯಾಚಾರ ಮತ್ತು ಅತ್ಯಾಚಾರ ಯತ್ನದ ಪ್ರಕರಣಗಳು ನಡೆದಿದ್ದವು. ಇನ್ನು, ಚುನಾವಣೆಯ ನಂತರದ ಹಿಂಸಾಚಾರದ ದೂರುಗಳನ್ನು ಪರಿಶೀಲಿಸಲು ನ್ಯಾಯಾಲಯವು ಆದೇಶಿಸಿದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) 15,000 ಸಂತ್ರಸ್ತರನ್ನು ಒಳಗೊಂಡಂತೆ 1979 ದೂರುಗಳನ್ನು ಸ್ವೀಕರಿಸಿತ್ತು. ಚುನಾವಣೋತ್ತರ ಗಲಭೆಯಲ್ಲಿ ಬಿಜೆಪಿಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಟಿಎಂಸಿ ನಾಯಕರು ಕೂಡ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಗಲಭೆಯ ಬಗ್ಗೆ ವರದಿ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್​ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೊಲ್ಕತ್ತಾ ಹೈಕೋರ್ಟ್​ಗೆ ಜುಲೈ 13ರಂದು ಮಾನವ ಹಕ್ಕುಗಳ ಆಯೋಗ ವರದಿ ಸಲ್ಲಿಸಿತ್ತು. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಗಲಭೆಯ ಕುರಿತು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ಮಾನವ ಹಕ್ಕುಗಳ ಆಯೋಗ (NHRC), ಕಳೆದ ಕೆಲವು ತಿಂಗಳಿನಿಂದ ಪಶ್ಚಿಮ ಬಂಗಾಳದಲ್ಲಿ ಸಾವಿರಾರು ಜನರ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ದೌರ್ಜನ್ಯ, ಬೆದರಿಕೆ ಹಾಕುವ ಕೆಲಸಗಳು ನಡೆದಿವೆ. ಇದಕ್ಕೆ ಸರ್ಕಾರವೇ ಹೊಣೆ ಎಂದಿತ್ತು.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ 2ರಿಂದ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿತ್ತು. ಬೈಕ್, ಕಾರುಗಳನ್ನು ರಸ್ತೆಯಲ್ಲಿ ಸುಟ್ಟುಹಾಕಿ ಗಲಭೆ ಉಂಟು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಾಕಷ್ಟು ಜನರು ಪ್ರಾಣವನ್ನೂ ಕಳೆದುಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿತ್ತು. ಬಿಜೆಪಿ ಕೇವಲ 77 ಸ್ಥಾನಗಳಲ್ಲಿ ಗೆಲುವು ಕಂಡು ಹೀನಾಯ ಸೋಲು ಅನುಭವಿಸಿತ್ತು.

ಇದನ್ನೂ ಓದಿ: West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

(Former Calcutta High Court Judge Manjula Chellur to head SIT in West Bengal post-Election violence cases)

Published On - 4:46 pm, Fri, 3 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ