AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದವರನ್ನು ಮೋಸ ಮಾಡಲು ಆಗಲ್ಲ ಅಮಿತ್ ಶಾ ಜೀ, ಅಪರೇಷನ್ ಕಮಲಕ್ಕೆ ಯಾವ ಎಟಿಎಂನಿಂದ ಬಂತು? ಹೆಚ್​​ಡಿಕೆ ವಾಗ್ದಾಳಿ

ಭೂತದ ಬಾಯಲ್ಲಿ ಭಗವದ್ಗೀತೆ ಎಂದರೆ ಹೀಗೆಯೇ. ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ ಅಮಿತ್​ ಶಾ ಅವರೇ? ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ಮಂಡ್ಯದವರನ್ನು ಮೋಸ ಮಾಡಲು ಆಗಲ್ಲ ಅಮಿತ್ ಶಾ ಜೀ, ಅಪರೇಷನ್ ಕಮಲಕ್ಕೆ ಯಾವ ಎಟಿಎಂನಿಂದ ಬಂತು? ಹೆಚ್​​ಡಿಕೆ ವಾಗ್ದಾಳಿ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ Image Credit source: The Print
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 30, 2022 | 7:22 PM

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit shah) ರಾಜ್ಯ ಪ್ರವಾಸದಲ್ಲಿದ್ದು, ಇಂದು (ಡಿ.30) ರಂದು ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ಗೆಜ್ಜಲಗೆರೆಯಲ್ಲಿ (Gezjalagere) ಮೆಗಾ ಡೇರಿ ಉದ್ಘಾಟಿಸಿದರು. ನಂತರ ಭಾಷಣದಲ್ಲಿ ಜೆಡಿಎಸ್ (JDS) ​ಅಧಿಕಾರಕ್ಕೆ ಬಂದರೇ ಒಂದು ಕುಟುಂಬಕ್ಕೆ ಎಟಿಎಂ ಆಗುತ್ತದೆ ಎಂದು ವಾಗ್ದಾಳಿ ಮಾಡಿದ್ದರು. ಇದಕ್ಕೆ ಸರಣಿ ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) “ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಂಡ್ಯದಲ್ಲಿ ಎಟಿಎಂ ಬಗ್ಗೆ ಮಾತನಾಡಿದ್ದಾರೆ. ಭೂತದ ಬಾಯಲ್ಲಿ ಭಗವದ್ಗೀತೆ ಎಂದರೆ ಹೀಗೆಯೇ. ಸುಳ್ಳು ಹೇಳುವುದಕ್ಕೆ ಸಂಕೋಚ ಬೇಡವೇ? ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ಭಾರತೀಯ ಜನತಾ ಪಕ್ಷದ ಎಟಿಎಂ ಆಗಿದೆ. ಇದು ಸುಳ್ಳಾ?” ಎಂದು ಪ್ರಶ್ನೆ ಮಾಡಿದ್ದಾರೆ.

ಮಂಡ್ಯದವರನ್ನು ಮೋಸ ಮಾಡಲು ಆಗುವುದಿಲ್ಲ ಅಮಿತ್ ಶಾ

ಮುಂದುವರೆದು “ಕೇಂದ್ರದ ಗೌರವಾನ್ವಿತ ಗೃಹ ಮಂತ್ರಿ ಅಮಿತ್ ಶಾ ಅವರು ಮಂಡ್ಯ ಜನರಿಗೆ ಮಂಕುಬೂದಿ ಎರಚಲು ವಿಫಲ ಪ್ರಯತ್ನ ನಡೆಸಿದ್ದಾರೆ. ಅವರ ಪಕ್ಷದ ಕೆಲ ನಾಯಕರು ಹೊಡೆಯುತ್ತಿರುವ ಅಪಪ್ರಚಾರದ ಜಾಗಟೆಗೆ ಡ್ರಮ್ಮು ಬಾರಿಸುವ ಕೆಲಸ ಮಾಡಿದ್ದಾರೆ. ಮಂಡ್ಯದವರನ್ನು ಮೋಸ ಮಾಡಲು ಆಗುವುದಿಲ್ಲ ಅಮಿತ್ ಶಾ ಜೀ!!”, ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ:  ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ

ಹಾಗೇ “ಯಾರಿಗೆ ಯಾವುದು ಎಟಿಎಂ? ಎನ್ನುವುದು ಕರ್ನಾಟಕಕ್ಕೆ ಗೊತ್ತು. 40% ಕಮೀಷನ್ ಯಾರ ಎಟಿಎಂಗೆ ಹೋಯಿತು? ಪಿಎಸ್​ಐ ಹಗರಣ ಯಾರ ಎಟಿಎಂ? ಕೋವಿಡ್ ಸಾವುಗಳ ಮೇಲೆ ದೋಚಿದ ಹಣ ಯಾವ ಹುಂಡಿಗೆ ಹೋಯಿತು? ಅಪರೇಷನ್ ಕಮಲಕ್ಕೆ ಯಾವ ಎಟಿಎಂನಿಂದ ಬಂತು?”, ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ “ಇವತ್ತು ದೇವರಾಯನ ದುರ್ಗದ ಐಬಿಯಲ್ಲಿ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೂ 40% ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಅಮಿತ್ ಶಾ ಸಾಹೇಬರು ಇದಕ್ಕೆ ಉತ್ತರ ಕೊಡುತ್ತಾರೆಯೇ? ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಮಾಡಿದ್ದು ಎಂದರೆ ಕಮೀಷನ್ ವಿಕಾಸ! ಶಾಸಕರ ಖರೀದಿ ವಿಕಾಸ!!”, ಎಂದು ವ್ಯಂಗ್ಯವಾಡಿದರು.

“ಬಿಜೆಪಿ ಎಂದರೆ ಎಟಿಎಂಗಳ ನ್ಯಾಷನಲ್ ಟೀಮ್. ಸತ್ಯ ಹೀಗಿದ್ದರೂ ಮಂಡ್ಯದಲ್ಲಿ ಬಂದು ಎಟಿಎಂ ಎಂದು ಟಮ್ ಟಮ್ ಹೊಡೆದರೆ ಯಾರು ನಂಬುತ್ತಾರೆ ಬಿಜೆಪಿ ನಾಯಕರೇ? ರಾಮ ಮಂದಿರ ಕಟ್ಟಿದ್ದಿರಿ ಎನ್ನುತ್ತೀರಿ. ಇದು ಬಿಜೆಪಿಯೊಂದರ ಸಾಧನೆಯೇ? ಇದಕ್ಕೆ ಭಾರತೀಯರೆಲ್ಲರ ಕಾಣಿಕೆ ಇಲ್ಲವೇ? ನೀವೊಬ್ಬರೇ ಕ್ರೆಡಿಟ್ ಹೊಡೆದುಕೊಳ್ಳಬೇಡಿ. ಒಂದೆಡೆ ದೆವಾಲಯಗಳನ್ನು ಉದ್ಧಾರ ಮಾಡುತ್ತೇವೆ ಎನ್ನುತ್ತೀರಿ, ಇನ್ನೊಂದೆಡೆ ಅದೇ ದೇವರನ್ನು ನಾಚಿಕೆ ಇಲ್ಲದೆ ರಾಜಕೀಯಕ್ಕೆ ಬಳಸಿಕೊಳ್ಳುತ್ತೀರಿ!! ಎಂದು ಟಾಂಗ್​ ನೀಡಿದರು.

ಇದನ್ನೂ ಓದಿ:  2ಸಿ, 2ಡಿಯವರಿಗೆ ಸದ್ಯಕ್ಕಿಂತ ಶೇಕಡಾ ನಾಲ್ಕರಷ್ಟು ಹೆಚ್ಚು ಮೀಸಲಾತಿ ಸಿಗಲಿದೆ: ಮುರುಗೇಶ್ ನಿರಾಣಿ

“ಪಂಚರತ್ನ ರಥಯಾತ್ರೆಯ ಯಶಸ್ಸು ನಿಮ್ಮ ಕಣ್ಣಿಗೂ ಬಿದ್ದಿರಬಹುದು, ಇಲ್ಲವೇ ಯಾರಾದರೂ ಭಟ್ಟಂಗಿಗಳು ನಿಮ್ಮ ಕಿವಿ ಊದಿರಬಹುದು. ಅದಕ್ಕೆ ಮಂಡ್ಯಕ್ಕೆ ಬಂದು ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದೀರಿ. ನೀವು ಮಂಡ್ಯದಲ್ಲಿ ಮುಗ್ಗರಿಸುತ್ತಿರಿ. ಅಮಿತ್ ಶಾ ಅವರೇ ಅತಿಯಾದ ಅಮಿತೋತ್ಸಾಹ ಒಳ್ಳೆಯದಲ್ಲ”, ಕುಹಕವಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:21 pm, Fri, 30 December 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ