AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ತೊಂದರೆಯೇ ಹೆಚ್ಚು, ಬಿಜೆಪಿಗೆ ಹೆಚ್​ಡಿಕೆ ಟ್ವೀಟ್​​ ಏಟು

ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ಹರದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ ಎಂದು ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ತೊಂದರೆಯೇ ಹೆಚ್ಚು, ಬಿಜೆಪಿಗೆ ಹೆಚ್​ಡಿಕೆ ಟ್ವೀಟ್​​ ಏಟು
ಹೆಚ್​ ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on: Mar 12, 2023 | 3:10 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಮಾ.12) ಮಂಡ್ಯದ ಮದ್ದೂರಿನಲ್ಲಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇಯನ್ನು (Bengaluru-Mysore Express Way) ಉದ್ಘಾಟಿಸಿದರು. ಈ ಎಕ್ಸಪ್ರೆಸ್​ವೇ ವಿಚಾರವಾಗಿ ವಿಪಕ್ಷಗಳು ಕ್ರೆಡಿಟ್​ ವಾರ್​ ಶುರು ಮಾಡಿಕೊಂಡಿದ್ದವು. ಈಗ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಸರಣಿ ಟ್ವೀಟ್​ ಮಾಡುವ ಮೂಲಕ ಬಿಜೆಪಿಯ (BJP) ವಿರುದ್ಧ ಹರಿಹಾಯ್ದಿದ್ದಾರೆ. “ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ಹರದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ, ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ” ಎಂದು ವಾಗ್ದಾಳಿ ಮಾಡಿದ್ದಾರೆ.

ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.

ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ; ಕೆಳಗಿನ ಅಂಶಗಳನ್ನು ಗಮನಿಸೋಣ.

1. ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ ಎಂದು ಪ್ರಶ್ನಿಸಿದ್ದಾರೆ.

2. ಮಧ್ಯಮ, ಸಣ್ಣಗಾತ್ರದ ಹೊಟೇಲು, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ. 6000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ‌ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ