Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕಾಂಗ್ರೆಸ್​ ಸರ್ಕಾರದ ನೂರು ದಿನಗಳಲ್ಲಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಸರ್ಕಾರದ ವಿರುದ್ಧ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ರುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ಕಾಂಗ್ರೆಸ್​ ಸರ್ಕಾರ ತೋರಿಸಿಕೊಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಕಾಂಗ್ರೆಸ್​ ಸರ್ಕಾರದ ನೂರು ದಿನಗಳಲ್ಲಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 28, 2023 | 12:32 PM

ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ. ಕಾಂಗ್ರೆಸ್ ಸರ್ಕಾರ (Congress Government) ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ (Vidhansoudha) ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಸೆಂಚೂರಿ ಬಾರಿಸಿದ್ದು, ಈ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​​ ಮಾಡಿ ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹರಿಹಾಯ್ದಿದ್ದಾರೆ.

ಇನ್ನು ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರೆಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ. ಈ ಮಧ್ಯ ಗ್ಯಾರೆಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋನಿಯಗಾಂಧಿ ಶಿಕ್ಷಣ ನೀತಿ ಜಾರಿ ಮಾಡುವುದಕ್ಕೆ ಹೊರಟಿದದ್ದೀರಾ: ಸರ್ಕಾರಕ್ಕೆ ಬೊಮ್ಮಾಯಿ ಪ್ರಶ್ನೆ

ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ಸರ್ಕಾರ ವಿಫಲವಾಗಿದೆ. ನಮ್ಮ ಡ್ಯಾಂಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಕೊಲೆ ಸುಲಿಗೆ ಸಾಮಾನ್ಯವಾಗಿದೆ. ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌ ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ ಎಂದರು.

ಸರ್ಕಾರದ ವಿರುದ್ಧ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ರುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು