ಮುಖ್ಯಮಂತ್ರಿ ಕಚೇರಿ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಇಂದು (ಜು.02) 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಕಚೇರಿ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ
ಹೆಚ್.ಡಿ.ಕುಮಾರಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 03, 2023 | 1:34 PM

ಬೆಂಗಳೂರು: ಇಂದು (ಜು.02) 16ನೇ ವಿಧಾನಸಭೆಯ ಮೊದಲ ಅಧಿವೇಶನ (Legislature Session) ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ (Chief Minister Office) ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumarswamy) ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೇ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ ದುಡ್ಡು ಕೊಟ್ಟಿರುವವರು ಸಾಕ್ಷಿ ಕೊಡುತ್ತರಾ? ದುಡ್ಡು ಕೊಟ್ಟವರಿಗೆ ಕೆಲಸ ಆಗಬೇಕು ಹಾಗಾಗಿ ಯಾರು ಕೊಡಲ್ಲ ಎಂದು ವಾಗ್ದಾಳಿ ಮಾಡಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಒಬ್ಬ ಶಾಸಕನಾಗಿ ಸರ್ಕಾರದ ಲೋಪದೋಷ ಬಗ್ಗೆ ಚರ್ಚಿಸ್ತೇನೆ. ವಿಪಕ್ಷ ನಾಯಕನಾಗಿ ಈ ಸರ್ಕಾರವನ್ನು ಟೀಕಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಏನು ಭರವಸೆ ಕೊಟ್ರಿ? ಆ ಭರವಸೆಗಳನ್ನು ಯಾವ ರೀತಿ ಈಡೇರಿಸಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕರ್ನಾಟಕ ವಿರೋಧ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರನ್ನ ಕಳುಹಿಸಿದ ಬಿಜೆಪಿ ಹೈಕಮಾಂಡ್, ಯಾರಾಗ್ತಾರೆ ವಿಪಕ್ಷ ನಾಯಕ?

ಈ ಸರ್ಕಾರ ICUಗೆ ಹೋಗುವ ಕಾಲ ಬರುತ್ತೆ ಎಂದು ಅನಿಸುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದು ಹೇಳಿದರು. ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ನಿನ್ನೆ (ಜು.02) ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಬರುತ್ತಾರೆ ಗೊತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ಲೇವಡಿಯಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ