ಇಬ್ರಾಹಿಂ ಉಚ್ಚಾಟನೆ, ಹೆಚ್​ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ: ದೇವೇಗೌಡ ಘೋಷಣೆ

ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ ನಾನ್ಯಾಕೆ ಪಕ್ಷ ಬಿಟ್ಟು ಹೋಗಲಿ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ತಾತ್ಕಾಲಿಕವಾಗಿ ನೂತಕ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕೋರ್ ಕಮಿಸಿ ಸಭೆ ಬಳಿಕ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇಬ್ರಾಹಿಂ ಉಚ್ಚಾಟನೆ, ಹೆಚ್​ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ: ದೇವೇಗೌಡ ಘೋಷಣೆ
ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 19, 2023 | 1:52 PM

ಬೆಂಗಳೂರು ಅ.19: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ (CM Ibrahim) ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ತಾತ್ಕಾಲಿಕವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಹೇಳಿದರು. ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ನೇತೃತ್ವದಲ್ಲಿ ಇಂದು (ಅ.19) ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಕ್ಷದ ಜವಾಬ್ದಾರಿ ಸ್ಥಾನವನ್ನು ನಾವು ಮಾರ್ಪಾಡು ಮಾಡಬೇಕಿದೆ ಎಂದರು.

ಕೆಲವು ಘಟಕಗಳ ಜೊತೆ ಚರ್ಚಿಸಿ ಒಂದು ನಿರ್ಣಯ ಮಾಡಿದ್ದೇವೆ. ಪಕ್ಷದ ನಿಯಮಾವಳಿ ಕೂಡ ಇದೆ. ಇಬ್ರಾಹಿಂ ಹೇಳಿಕೆಗಳನ್ನು ನಾನು ಪ್ರಸ್ತಾಪ ಮಾಡಲು ಹೋಗಲ್ಲ. ನಾವು ಬಿಜೆಪಿ ಜೊತೆ ಹೋಗುವ ಸನ್ನಿವೇಶ ಸೃಷ್ಟಿಸಿದ್ದು ಯಾರು ? ನಾವು ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಭಾಗಿಯಾಗಿಲ್ಲ. ಲೋಕಸಭಾ ಚುನಾವಣೆ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ ಅಷ್ಟೇ. ಇದರಿಂದ ಜೆಡಿಎಸ್​ ಸಿದ್ಧಾಂತ ಅಥವಾ ನಾಯಕರಿಗೆ ಯಾವುದೇ ಸಮಸ್ಯೆಯಿಲ್ಲ. ಮುಸ್ಲಿಂ ನಾಯಕರನ್ನು ನಮ್ಮ ಪಕ್ಷದಲ್ಲಿ ಕಡೆಗಣನೆ ಮಾಡಿಲ್ಲ. ಪಕ್ಷ ಉಳಿಸಿಕೊಳ್ಳಬೇಕಾಗಿರುವುದರಿಂದ ಮೈತ್ರಿಮಾಡಿಕೊಂಡಿದ್ದೇವೆ ಎಂದರು.

ಇದನ್ನೂ ಓದಿ: ನಾನು ಪಕ್ಷದ ಚುನಾಯಿತ ಅಧ್ಯಕ್ಷ, ನನ್ನ ಆಯ್ಕೆಗೆ ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ವೋಟು ಮಾಡಿದ್ದಾರೆ: ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ

18 ಶಾಸಕರು, ಪಕ್ಷದ ಪದಾಧಿಕಾರಿಗಳ ಅಭಿಪ್ರಾಯ ಪಡೆದಿದ್ದೇವೆ. ಪಕ್ಷ ಸಂಘಟನೆ ದೃಷ್ಟಿಯಿಂದ ದಸರಾ ನಂತರ ಹಲವಾರು ನಿರ್ಣಯ ಕೈಗೊಳ್ಳಲಾಗುವುದು. ಇಂದು ನಡೆದ ಸಭೆಯಲ್ಲಿ ಜೆಡಿಎಸ್​​ನ 19 ಶಾಸಕರ ಪೈಕಿ 18 ಶಾಸಕರು ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಸಭೆಗೆ ಆಗಮಿಸಿ ಸಲಹೆ ನೀಡಿದರು ಎಂದು ತಿಳಿಸಿದರು.

ಮೈತ್ರಿ ವಿಚಾರವಾಗಿ ಎಲ್ಲರ ಬಳಿ ಸಮಾಲೋಚನೆ ಮಾಡಲಾಗಿದೆ. ಚುನಾವಣೆ ಬಳಿಕ 19 ಜನ ಶಾಸಕರು, ಅಧ್ಯಕ್ಷರನ್ನ ಒಳಗೊಂಡಂತೆ ಎರಡು ಮೀಟಿಂಗ್ ಮಾಡಲಾಗಿತ್ತು. ಅದರ ಬಗ್ಗೆ ವಿವರ ಕೊಡುವ ಅವಶ್ಯಕತೆ ಇಲ್ಲ. ಕೇರಳ, ಮಹಾರಾಷ್ಟ್ರ ಅನೇಕ ಕಡೆ ನಮ್ಮ ಯುನಿಟ್ ಇದೆ. ಕೇರಳದಲ್ಲಿ ಸರ್ಕಾರದಲ್ಲಿ ನಮ್ಮ ಪಕ್ಷದ ಶಾಸಕರು ಇದ್ದಾರೆ. ಬಿಜೆಪಿ ಜೊತೆ ಹೋಗುವ ಸನ್ನಿವೇಶ ಹೇಗಿತ್ತು ಅನ್ನೋದನ್ನ ಕೇರಳ ಯುನಿಟ್​​ಗೆ ತಿಳಿಸಲಾಯ್ತು. ಕೇರಳದ ಎಡ ಪಂಥೀಯ ಪಕ್ಷದ ಜೊತೆ ಕೆಲಸ ಮಾಡಿರುವ ಶಾಸಕರ ಬಳಿಯೂ ಒಪ್ಪಿಗೆ ಪಡೆಯಲಾಗಿದೆ. ಮುಸ್ಲಿಂರಿಗೆ ಅನಾಹುತ ಆಗುತ್ತೆ ಅಂತ ಹೇಳಿಕೊಳ್ಳಬಹುದು. ನಾನು ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಟ್ಟು ಹೋಗಲ್ಲ ಅಂತ ನಮ್ಮ ಪಕ್ಷದ ಪ್ರಣಾಳಿಕೆ ರೆಡಿ ಮಾಡಿದ ಫರೂಕ್ ಅವರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:14 pm, Thu, 19 October 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್