AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಏಕವಚನ ಪ್ರಯೋಗ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಸರಣಿ ಟ್ವೀಟ್​ ಮೂಲಕ ಹರಿಯಾದ್ದಿದ್ದಾರೆ. ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ ಎಂದು ವ್ಯಂಗ್ಯವಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಏಕವಚನ ಪ್ರಯೋಗ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್​​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ
ಅನಿಲ್​ ಕಲ್ಕೆರೆ
| Edited By: ವಿವೇಕ ಬಿರಾದಾರ|

Updated on: Jan 29, 2024 | 12:26 PM

Share

ಬೆಂಗಳೂರು, ಜನವರಿ 29: ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್​ ಮೂಲಕ ಹರಿಯಾದ್ದಿದ್ದಾರೆ. “ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ” ಎಂದು ಹ್ಯಾಷ್​ಟ್ಯಾಗ್​ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​)ನಲ್ಲಿ ಪೋಸ್ಟ್​​​ ಹಾಕಿದ್ದಾರೆ.

“ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ..” ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ?” ಎರಡನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ, ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ವಿಚಾರ: ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

“ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು. ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ?” ಎಂದು ವಾಗ್ದಾಳಿ ಮಾಡಿದ್ದಾರೆ.

“ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು.. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು?” ಎಂದು ಕಿಡಿಕಾರಿದ್ದಾರೆ.

“ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ; ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ