ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ: ಬದುಕಿಗೆ ಗ್ಯಾರಂಟಿ ಕೊಡಿ ಎಂದು ಕಾಂಗ್ರೆಸ್​ ಸರ್ಕಾರ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್​​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ: ಬದುಕಿಗೆ ಗ್ಯಾರಂಟಿ ಕೊಡಿ ಎಂದು ಕಾಂಗ್ರೆಸ್​ ಸರ್ಕಾರ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Sep 11, 2023 | 12:03 PM

ಬೆಂಗಳೂರು ಸೆ.11: ರಾಜ್ಯ ಸರ್ಕಾರ (Karnataka Government) ಐದು ಗ್ಯಾರೆಂಟಿಗಳನ್ನು ಒಂದೊಂದಾಗಿಯೇ ಜಾರಿ ಮಾಡುತ್ತಿದೆ. ಶಕ್ತಿ ಯೋಜನೆ (Shakti Yojane) ಜಾರಿ ನಂತರ ಖಾಸಗಿ ಸಾರಿಗೆ ಮಾಲಿಕರು ಮತ್ತು ಚಾಲಕರಿಗೆ ಭಾರಿ ಹೊಡೆತ ಬಿದ್ದಿದ್ದು, ನಾವು ನಷ್ಟದಲ್ಲಿವೆ ಎಂದು ಖಾಸಗಿ ಸಾರಿಗೆ ಒಕ್ಕೂಟ (Private Vehicle Association) ಇಂದು (ಸೆ.11) ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್​ ಮಾಡಿ ರಾಜ್ಯ ಕಾಂಗ್ರೆಸ್​ ಸರಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಬದುಕಿಗೆ ಗ್ಯಾರಂಟಿ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ಈ ಬಂದ್​ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಮುಷ್ಕರ; ಹೇಗಿದೆ ಎಫೆಕ್ಟ್? ಮೆಜೆಸ್ಟಿಕ್​ನಲ್ಲಿ ಹೇಗಿದೆ ಸಂಚಾರ?

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್​​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು ಎಂದು ಹೇಳಿದರು.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು