ಕೆ.ಎಸ್​ ಈಶ್ವರಪ್ಪ ಪರ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

ಸಂತೋಷ ಪ್ರಕರಣದಲ್ಲಿ ಮಹಾನಾಯಕನ ಹೆಸರು ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ನನಗೆ ಮಹಾ ನಾಯಕ, ದುರಂತ ನಾಯಕರೋ, ಯಾವ ಕಳ್ಳ ನಾಯಕರೋ ಗೊತ್ತಿಲ್ಲ. ಘಟನೆ ನಡೆದ ವಾಸ್ತವಾಂಶವನ್ನ ಜನರ ಮುಂದೆ ಸರ್ಕಾರ ಇಡಬೇಕು.

ಕೆ.ಎಸ್​ ಈಶ್ವರಪ್ಪ ಪರ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ ಡಿ. ಕುಮಾರಸ್ವಾಮಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 16, 2022 | 2:50 PM

ವಿಜಯಪುರ: ಸಿದ್ದರಾಮಯ್ಯ ಕಾಲದಲ್ಲಿ ಬೆಳಗಾವಿ ಜಿಲ್ಲೆಯ ಕುರುಬ ಸಮಾಜದ ಪ್ರಾಮಾಣಿಕ ಡಿವೈಎಸ್ಪಿ ಕಲ್ಲಪ್ಪ ಹಂಡೀಭಾಗ್ ಆತ್ಮಹತ್ಯೆ ಮಾಡಿಕೊಂಡರು. ಆಗ ಸಿದ್ದರಾಮಯ್ಯ ರಾಜೀನಾಮೆ ಕೊಟ್ರಾ? ಆಗಿನ ಗೃಹ ಸಚಿವರು ರಾಜೀನಾಮೆ ಕೊಟ್ಟರಾ? ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್​ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ, ಆದರೆ ಬಂಧನ ಯಾಕೆ ಆಗಬೇಕು ಎಂದು ಈಶ್ವರಪ್ಪ ಪರ, ಕಾಂಗ್ರೆಸ್ ವಿರುದ್ಧ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಕೃಷ್ಣಾ ನದಿ ತೀರದಲ್ಲಿ ಮಾಜಿ ಸಿಎಂ ಹೆಚ್​ ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಹಂಡೀಭಾಗ್ ಸರ್ಕಾರದ ನಡವಳಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆ ಚುನಾವಣೆ ಸಂದರ್ಭದಲ್ಲಿ ಈಗಾ ಮಾತನಾಡಲು ಇಶ್ಯೂ ಇಲ್ಲ. ಜನರ ಸಮಸ್ಯೆಗಳ ಇಶ್ಯೂ ಇಲ್ಲ. ರಾಜೀನಾಮೆ ಆಯ್ತು, ಈಗ ಬಂಧನಕ್ಕೆ ಹೋರಾಟ ಮಾಡುತ್ತಿದ್ದಾರೆ. ಇದರಿಂದ ಏನು ಉಪಯೋಗ ಇಲ್ಲ ನನಗೆ ಗೊತ್ತಿದೆ. ಈಗ ಸಂತೋಷ್ ಆತ್ಮಹತ್ಯೆ ವಿಷಯ ಇಟ್ಟುಕೊಂಡು ಹೊರಟಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನ ಎಲ್ಲಿಯವರೆಗೂ ತಡೆದುಕೊಳ್ಳುತ್ತಾರೆ.  ಎರಡೂ ಪಕ್ಷವನ್ನ ಜನ ತಿರಸ್ಕರಿಸೋ ಕಾಲ ಬಂದಿದೆ.

ಸಂತೋಷ ಪ್ರಕರಣದಲ್ಲಿ ಮಹಾನಾಯಕನ ಹೆಸರು ಪ್ರಸ್ತಾಪ ವಿಚಾರವಾಗಿ ಮಾತನಾಡಿದ್ದು, ನನಗೆ ಮಹಾ ನಾಯಕ, ದುರಂತ ನಾಯಕರೋ, ಯಾವ ಕಳ್ಳ ನಾಯಕರೋ ಗೊತ್ತಿಲ್ಲ. ಘಟನೆ ನಡೆದ ವಾಸ್ತವಾಂಶವನ್ನ ಜನರ ಮುಂದೆ ಸರ್ಕಾರ ಇಡಬೇಕು. ಇದರಲ್ಲಿ ಯಾರ ಪಾತ್ರ ಇದೆ, ಯಾಕೆ ಘಟನೆ ನಡೆಯಿತು ಅನ್ನೋದರ ತನಿಖೆ ಆಗಬೇಕು. ಈಶ್ವರಪ್ಪ ಪರ್ಸೆಟೆಂಜ್ ಹೆಸರಲ್ಲಿ ಬೀದಿಗಿಳಿದವರು, ಅವತ್ಯಾಕೆ ಇಳಿಯಲಿಲ್ಲ. ಧರ್ಮ ಧರ್ಮಗಳ ನಡುವೆ ಸಂಘರ್ಷ ಆದಾಗ, ಇದೇ ಕಾಂಗ್ರೆಸ್ ಮೌನಕ್ಕೆ ಶರಣಾಗಿದ್ದು ಯಾಕೆ? ಸರ್ವಜನಾಂಗದ ಶಾಂತಿಯ ತೋಟವನ್ನ ಹಾಳು ಮಾಡುವಾಗ ಎಲ್ಲಿ ಹೋಗಿದ್ದರು. ಈಗ ಈಶ್ವರಪ್ಪ ಅವರ ಪರ್ಸೆಂಟೇಜ್ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:

Unsung Hero: ನಾಪತ್ತೆಯಾಗಿದ್ದ ಮಗುವನ್ನು ರಕ್ಷಿಸಿ ರಾತ್ರೋರಾತ್ರಿ ಪ್ರಸಿದ್ಧಳಾದ ಶಾಲಾ ಬಾಲಕಿ

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಪಕ್ಕಾ?-ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಚುನಾವಣಾ ತಂತ್ರಜ್ಞ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ