ಬೆಂಗಳೂರು: ಕೊವಿಡ್ ಲಸಿಕೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಸದ್ಯ ಚಾಲ್ತಿಯಲ್ಲಿರುವ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಸರಣಿ ಟ್ವೀಟ್ಗಳ ಮೂಲಕ ಟೀಕಿಸಿದ್ದಾರೆ. ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ! ಎಂದು ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ಸಿದ್ದರಾಮಯ್ಯಗೆ ಮಾತಿನ ಗುದ್ದು ಹಾಕಿದ್ದಾರೆ.
ಜನಹಿತದ ಲಾಕ್‌ಡೌನ್ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ. 1/9
— H D Kumaraswamy (@hd_kumaraswamy) May 19, 2021
ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆದೂರಾಲೋಚನೆಗಳೇ ಇಲ್ಲ. 7/9
— H D Kumaraswamy (@hd_kumaraswamy) May 19, 2021
ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ. 7/11
— H D Kumaraswamy (@hd_kumaraswamy) May 20, 2021
ನಿನ್ನೆ ಸಿಎಂ ಯಡಿಯೂರಪ್ಪ ಘೋಷಿಸಿರುವ ಲಾಕ್‌ಡೌನ್ ಪ್ಯಾಕೇಜ್ ಬಗ್ಗೆಯೂ ಟೀಕಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಜನಹಿತದ ಲಾಕ್‌ಡೌನ್ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Meghana Raj: 2 ತಿಂಗಳ ಹಸುಗೂಸಿಗೆ ಕೊವಿಡ್ ಬಂದಾಗ ಎದುರಾಗಿದ್ದ ಭಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಮೇಘನಾ ರಾಜ್
ರಾಜ್ಕುಮಾರ್ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್ ಕೊವಿಡ್ನಿಂದ ನಿಧನ (Former CM HD Kumaraswamy taunts Opposition leader Siddaramaiah on Covid Vaccine and lockdown)