ಕುಮಾರಸ್ವಾಮಿ ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 05, 2023 | 10:43 PM

ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಖಂಡನೀಯ. ಕೂಡಲೇ ಕ್ಷಮೆ ಕೇಳುಬೇಕು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿ ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ
ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ
Follow us on

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ (Brahmins) ಸಮುದಾಯದ ಪ್ರಲ್ಹಾದ್​ ಜೋಶಿ (Pralhad Joshi) ಅವರನ್ನು ಮುಖ್ಯಮಂತ್ರಿ ಮಾಡುವ ಚರ್ಚೆ ಆಗಿದೆ. ಬಾಕಿ 8 ಮಂದ ಉಪಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ (HD Kumaraswamy) ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಅವರ ಈ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಈ ಕುರಿತಾಗಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಅವರು ಪ್ರತಿಕ್ರಿಯೆ ನೀಡಿದ್ದು, ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಖಂಡನೀಯ ಕೂಡಲೇ ಹೆಚ್​.ಡಿ. ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ವಿರುದ್ಧ ಹೆಚ್.ಎಸ್.ಸಚ್ಚಿದಾನಂದಮೂರ್ತಿ ವಾಗ್ದಾಳಿ 

ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ವಾಗ್ಧಾಳಿ ನಡೆಸಿರುವ ಹೆಚ್.ಎಸ್.ಸಚ್ಚಿದಾನಂದಮೂರ್ತಿ ಕುಮಾರಸ್ವಾಮಿ ಅವರು ಪ್ರಹ್ಲಾದ ಜೋಶಿರವರನ್ನು ಮಹಾರಾಷ್ಟ್ರ ಮೂಲದ ಪೇಶ್ವಾಗಳು ಅಥವಾ ದೇಶಸ್ತ ಬ್ರಾಹ್ಮಣರು ಎಂದು ಸೂಕ್ತ ಮಾಹಿತಿ ಇಲ್ಲದೆ ತಮ್ಮ ಹಳೆಯ ಚಾಳಿಯಂತೆ ಯಥಾ ಪ್ರಕಾರ ನಾಲಿಗೆ ಹರಿಬಿಟ್ಟಿರುವುದು ಕ್ಷುಲ್ಲಕ ರಾಜಕಾರಣದ ಪರಮಾವಧಿ. ಪ್ರಹ್ಲಾದ ಜೋಶಿ ಅವರು ಯಾವುದೇ ಪೇಶ್ವೆಗಳಾಗಲಿ ಅಥವಾ ದೇಶಸ್ತ ಬ್ರಾಹ್ಮಣರಲ್ಲ. ಈ ದೇಶದ ಸ್ವತಂತ್ರಕ್ಕಾಗಿ ಬ್ರಾಹ್ಮಣರ ಕೊಡುಗೆ ಅಪಾರ ಎಂದರು.

ಇದನ್ನೂ ಓದಿ: ತಾಜ್ ವೆಸ್ಟ್ ಎಂಡ್ ಬಗ್ಗೆ ಇನ್ನೂ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ ಎಂದ ಬಿಜೆಪಿ ನಾಯಕ, ಸಿಡಿ ಯಾತ್ರೆ ಮಾಡಲಿ ಎಂದ ಎಚ್​ಡಿಕೆ

ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಚಂದ್ರಶೇಖರ್ ಆಜಾದ್, ಮಂಗಲ್ ಪಾಂಡೆ, ಮದನ್ ಲಾಲ್ ಧಿಂಗ್ರ, ವೀರ ಸಾವರ್ಕರ್ ಸೇರಿದಂತೆ ಇನ್ನೂ ಹಲವು ಬ್ರಾಹ್ಮಣರು ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಅರ್ಪಣೆ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಮುಂದಿನ ಮುಖ್ಯಮಂತ್ರಿಗಳ ಆಯ್ಕೆ ಬಿಜೆಪಿ ಪಕ್ಷಕ್ಕೆ ಬಿಟ್ಟ ವಿಚಾರ. ಬಿಜೆಪಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಕುಮಾರಸ್ವಾಮಿಯವರು ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಬಿಜೆಪಿ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಕುಮಾರಸ್ವಾಮಿ ಹೆಂಗೆ ಅಂದ್ರೆ ಬುಸ್…ಬುಸ್…ಎಂದ ಜಮೀರ್ ಅಹಮದ್​ಗೆ ಜೆಡಿಎಸ್ ಸರಣಿ ಟ್ವೀಟ್ ಏಟು

ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕು

ಜಾತ್ಯಾತೀತ ಜನತಾದಳ ಎಂದು ಹೆಸರಿಟ್ಟುಕೊಂಡು ಜಾತಿ ರಾಜಕಾರಣ ಮಾಡುತ್ತಿರುವುದು ನೀವು. ಬ್ರಾಹ್ಮಣ ಸಮುದಾಯದ ಒಳಪಂಗಡಗಳ ನಡುವೆಯೇ ಮನಸ್ಥಾಪ ಸೃಷ್ಟಿಸುವ ನಿಮ್ಮ ಉದ್ದೇಶ ಈಡೇರುವುದಿಲ್ಲ. ಬ್ರಾಹ್ಮಣರು ಪ್ರಜ್ಞಾವಂತರು, ಸೂಕ್ಷ್ಮ ಸಂವೇದನೆ ಉಳ್ಳ ವಿಚಾರವಂತರು, ಅವರ ಸಮಸ್ಯೆಗಳೇನಿದ್ದರೂ ಅವರೇ ಬಗೆಹರಿಸಿಕೊಳ್ಳುತ್ತಾರೆ. ಈ ಬಗ್ಗೆ ಕುಮಾರಸ್ವಾಮಿ ಅವರು ವಕಾಲತ್ತು ವಹಿಸುವುದಾಗಲಿ, ಲಘುವಾಗಿ ಮಾತನಾಡುವ ಅಗತ್ಯವಾಗಲಿ ಇಲ್ಲ. ಈ ವಿಚಾರದಲ್ಲಿ ಕುಮಾರಸ್ವಾಮಿ ಅವರು ಯಶಸ್ವಿಯಾಗುವುದು ಇಲ್ಲ ಎಂದು ತಿರುಗೇಟು ನೀಡಿದರು. ಈ ಕೂಡಲೇ ಕುಮಾರಸ್ವಾಮಿಯವರು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:43 pm, Sun, 5 February 23