ಸಚಿವ ಶ್ರೀರಾಮುಲು ಅನ್ನು ಪೆದ್ದ ಎಂದ ಮಾಜಿ ಸಿಎಂ ಸಿದ್ದರಾಮಯ್ಯ: ಏಕವಚನದಲ್ಲೇ ವಾಗ್ದಾಳಿ

ಸಚಿವ ಶ್ರೀರಾಮುಲು ಅಂತಾ ಒಬ್ಬ ಪೆದ್ದ ಇದ್ದಾನೆ. ಬರೀ ಭಾಷಣ ಮಾಡಿದ್ದೇ ಮಾಡಿದ್ದು ಎಂದು ಏಕವಚನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 02, 2023 | 4:22 PM

ಮೈಸೂರು: ಸಚಿವ ಶ್ರೀರಾಮುಲು (Sriramulu) ಅಂತಾ ಒಬ್ಬ ಪೆದ್ದ ಇದ್ದಾನೆ ಎಂದು ಏಕವಚನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಬರೀ ಭಾಷಣ ಮಾಡಿದ್ದೇ ಮಾಡಿದ್ದು. ಬಿಜೆಪಿ ಡೋಂಗಿಗಳು ಪರಿಶಿಷ್ಟ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ. ಮೀಸಲಾತಿ ಹೆಸರಿನಲ್ಲಿ ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿದ್ದಾರೆ. ಮುಸ್ಲಿಮರ ಮೀಸಲಾತಿ ಕಿತ್ತು ಲಿಂಗಾಯತ, ಒಕ್ಕಲಿಗರಿಗೆ ಕೊಟ್ಟಿದ್ದಾರೆ. ಮುಸ್ಲಿಮರ ಮೀಸಲಾತಿ ಕಿತ್ತು ಲಿಂಗಾಯತರಿಗೆ ಕೊಟ್ಟಿದ್ದು ನ್ಯಾಯನಾ ಎಂದು ಪ್ರಶ್ನಿಸಿದರು. ಲಿಂಗಾಯತ, ಒಕ್ಕಲಿಗರ ಮೀಸಲಾತಿ ಹೆಚ್ಚಿಸಿದ್ದಕ್ಕೆ ವಿರೋಧ ಇಲ್ಲ. ಆದರೆ ಮುಸ್ಲಿಮರ ಮೀಸಲಾತಿ ರದ್ದು ಮಾಡಿದ್ದು ತಪ್ಪು. 9ನೇ ಶೆಡ್ಯೂಲ್​ಗೆ ಇದು ಸೇರದಿದರೆ ಅದಕ್ಕೆ ಕಾನೂನಿನ ರಕ್ಷಣೆ ಸಿಗಲ್ಲ. ಬಿಜೆಪಿಗೆ ಮಾನ ಮಾರ್ಯದೆ ಇಲ್ಲ, ಬಕ್ರಾ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಹಿಂದುಳಿದವರು ಕಾಂಗ್ರೆಸ್​​ನಲ್ಲಿ ಟಿಕೆಟ್ ಸಿಗದಿದ್ದರೆ ಬಿಜೆಪಿಗೆ ಹೋಗುತ್ತಾರೆ. ಅಂತಹ ಹಿಂದುಳಿದ ನಾಯಕರಿಗೆ ಮಾನ ಮರ್ಯಾದೆ ಇದ್ಯಾ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಮೀಸಲಾತಿ ಕುರಿತು ಬಿಜೆಪಿ ಗೊಂದಲ ನಿರ್ಮಾಣ ಮಾಡಿದೆ. ಮುಸಲ್ಮಾನರಿಗೆ ಭಾರತೀಯ ಜನತಾ ಪಕ್ಷ ಮೋಸ ಮಾಡಿದೆ.

ಇದನ್ನೂ ಓದಿ: ಬಿಎಲ್​​ ಸಂತೋಷ್​​ ಭಾಷಣ ಮಾಡುತ್ತಿದ್ದಾಗಲೇ ಎಂಟ್ರಿ ಕೊಟ್ಟ ಪೊಲೀಸ್​: ಕಾರ್ಯಕ್ರಮ ಮುಕ್ತಾಯಗೊಳಿಸುವಂತೆ ಸೂಚನೆ

ತರಾತುರಿಯಲ್ಲಿ ಒಳ ಮೀಸಲಾತಿ ಜಾರಿ: ತನ್ವೀರ್ ಸೇಠ್ 

ಶಾಸಕ ತನ್ವೀರ್ ಸೇಠ್ ಮಾತನಾಡಿ, ಇದು ಕಾನೂನು ರೀತಿಯಲ್ಲಿ ಆಗಬೇಕು ಎಂದು ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ರಾಜಭವನ ಚಲೋ ನಡೆಸಿದೆ ವಿಧಾನ ಸೌಧ ಒಳಗೆ ಧರಣಿ ಮಾಡಿದೆ. ಸರ್ಕಾರಕ್ಕೆ ಸಾಕಷ್ಟು ಸಲಹೆ ನೀಡಿದೆ. ಆದರೆ ಇದನ್ನು ಕಾನೂನು ಬದ್ದವಾಗಿ ಮಾಡಿಲ್ಲ. ಇದು ಕೇವಲ ಭಾಷಣಗಳಲ್ಲಿ ಮಾತ್ರ ಮಾಡಿದ್ದಾರೆ. ಇದಕ್ಕೆ ಒಂದು ಮಸೂದೆ ತಂದು ತರಾತುರಿಯಲ್ಲಿ ಮಂಡನೆ ಮಾಡಿದ್ದಾರೆ. ಬಜೆಟ್ ಅಧಿವೇಶನದ ವೇಳೆ ಕರ್ನಾಟಕ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಆಗಿಲ್ಲ. ಇದು ಸಂಸತ್ ಅಲ್ಲಿ ಬಂದಿದಿ ಎಂದರು.

ಇದನ್ನೂ ಓದಿ: HD Kumaraswamy: ಹಾಸನ ಜೆಡಿಎಸ್ ಟಿಕೆಟ್ ಯಾರಿಗೆ ಎಂಬ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಜಾತ್ಯಾತೀತದ ಮೇಲೆ ಬಿಜೆಪಿ ಅವರಿಗೆ ನಂಬಿಕೆ ಇಲ್ಲ‌

ಕ್ಯಾಟಗರಿ 2ಬಿ ಅಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ಮಾಡಿದ್ದರು. ಒಂದು ಜನಾಂಗ ಮತ್ತೊಂದು ಜನಾಂಗದ ನಡುವೆ ಗೊಂದಲ ಸೃಷ್ಟಿ ಮಾಡಿ ಚುನಾವಣೆಗಾಗಿ ಮಾಡಿದ್ದಾರೆ. ಸುಪ್ರಿಂನಿಂದ ಶೇ 50 ರಷ್ಟು ಮೀಸಲಾತಿ ಮೀರಬಾರದು ಎಂಬ ಆದೇಶ ಇದೆ. ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ಮಾಡಿದ್ದಾರೆ. ದಲಿತರಿಗೆ ಜಾಸ್ತಿ ಮಾಡಿದ್ದೇವೆ ಎಂಬುದನ್ನು ಯಾಕೆ ಉಲ್ಲೇಖ ಮಾಡಿಲ್ಲ‌. ಮುಸ್ಸಿಂ ಸಮಯದಾಯ ನ್ಯಾಯಾಲಯದಲ್ಲಿ ಮೊಕದ್ದಮೆ ಹಾಕಿದ್ದೇವೆ. ಜಾತ್ಯಾತೀತದ ಮೇಲೆ ಬಿಜೆಪಿ ಅವರಿಗೆ ನಂಬಿಕೆ ಇಲ್ಲ‌. ಸಂವಿಧಾನ ಬದಲಾವಣೆ ಮಾಡಬೇಕು ಎನ್ನುತ್ತಾರೆ. ಈ ರಾಷ್ಟ್ರದ ಸಂವಿಧಾನ ಉಳಿಸಬೇಕು ಎಂಬುದು ಕಾಂಗ್ರೆಸ್ ಆಶಯ, ಅದಕ್ಕಾಗಿ ಈ ಧರಣಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್​​​ ಶಾಸಕ ಯತೀಂದ್ರ ವಾಗ್ದಾಳಿ

ಕಾಂಗ್ರೆಸ್​​​ ಶಾಸಕ ಯತೀಂದ್ರ ಮಾತನಾಡಿ, ಮೀಸಲಾತಿ ತೆಗೆಯುವ ದುರುದ್ದೇಶದಿಂದ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ಚುನಾವಣೆ ಲಾಭ ಪಡೆಯಲು ಮೀಸಲಾತಿ ಹೆಚ್ಚಳ ಬಗ್ಗೆ ಘೋಷಿಸಿದ್ದಾರೆ. ಬಿಜೆಪಿ ಸರ್ಕಾರದ ಈ ನೀತಿ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಚುನಾವಣಾ ಗಿಮಿಕ್ ಮಾಡುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:21 pm, Sun, 2 April 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ