ಆಕ್ಷೇಪಣೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಕುಷ್ಟಗಿ ಸಮಾವೇಶದಲ್ಲಿ ಜಾಣ ನಡೆ

ಪಕ್ಷದಲ್ಲಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೋದಲ್ಲೆಲ್ಲಾ ಅಭ್ಯರ್ಥಿ ಘೋಷಣೆ ಮಾಡುವುದನ್ನು ಕೈ ಬಿಟ್ಟ ಜಾಣ ನಡೆ ಇಟ್ಟಿದ್ದಾರೆ.

ಆಕ್ಷೇಪಣೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಕುಷ್ಟಗಿ ಸಮಾವೇಶದಲ್ಲಿ ಜಾಣ ನಡೆ
ಸಿದ್ದರಾಮಯ್ಯ
Edited By:

Updated on: Dec 16, 2022 | 4:32 PM

ಕೊಪ್ಪಳ: ಇತ್ತೀಚೆಗಷ್ಟೇ ಕೊಪ್ಪಳದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ(Siddaramaiah) ಜಿಲ್ಲೆಯ ಈ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದರು. ಆದ್ರೆ, ಹೈಕಮಾಂಡ್ ಟಿಕೆಟ್​ ಹಂಚಿಕೆ ಮೊದಲೇ ಅಭ್ಯರ್ಥಿ ಹೆಸರು ಘೋಷಿಸುವುದು ಎಷ್ಟು ಸೂಕ್ತ ಎಂದು ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದ್ದವು. ಇದರಿಂದ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ, ಇಂದು(ಡಿಸೆ.ಬರ್ 16) ಕುಷ್ಟಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಜಾಣ ನಡೆ ಇಟ್ಟಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆಯನ್ನೇ ಟಾರ್ಗೆಟ್ ಮಾಡಿದ ಬಿಜೆಪಿ ಮತ್ತು ಕಾಂಗ್ರೆಸ್; ಜಿಲ್ಲೆಯಲ್ಲಿ ಎರಡೂ ಪಕ್ಷಗಳ ರಾಜಕೀಯ ಚದುರಂಗದಾಟ

ಹೌದು…ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ ಜನ್ಮದಿನ ಆಚರಣೆ ನಿಮಿತ್ತ ಇಂದು(ಡಿಸೆಂಬರ್ 16) ಆಯೋಜಿಸಿದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಮರೇಗೌಡ ನಿಮ್ಮ ಜೊತೆಗೆ ಇರ್ತಾರೆ ಅನ್ನೋ ಮೂಲಕ ಜಾಣ ನಡೆ ಇಟ್ಟಿದ್ದಾರೆ. ಈ ಮೂಲಕ ಹೋದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಕೈಬಿಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಹೋದಲ್ಲೆಲ್ಲಾ ಬಹಿರಂಗವಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದ್ದರು. ಇತ್ತೀಚೆಗೆ ಕೊಪ್ಪಳದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಹಿರಂಗವಾಗಿಯೇ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದರು.

ಈ ಹಿಂದೆ ಅಮರೇಗೌಡರನ್ನ ಗೆಲ್ಲಿಸುವಂತೆ ಕರೆ ಕೊಟ್ಟಿದ್ದ ಸಿದ್ದು
ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ್ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಬಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದು ಹೇಳಿದ್ದರು. ಇದು ಕಾಂಗ್ರೆಸ್​ನಲ್ಲೇ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಬಹಿರಂಗವಾಗಿಯೇ ಕುಷ್ಟಗಿಯಲ್ಲಿ ಅಮರೇಗೌಡ ಅವರನ್ನು ಗೆಲ್ಲಿಸುವಂತೆ ಹೇಳಿದ್ದರು. ಆದ್ರೆ, ಇದೀಗ ಕುಷ್ಟಗಿಯಲ್ಲಿ ಅಮರೇಗೌಡ ಅವರ ಕಾರ್ಯಕ್ರದಲ್ಲೇ ಸಿದ್ದರಾಮಯ್ಯ ಅವರ ತಮ್ಮ ಭಾಷಣದಲ್ಲಿ, ಅವರನ್ನು ಗೆಲ್ಲಿಸಿ, ಇವರನ್ನ ಗೆಲ್ಲಿಸಿ ಎಂದು ಹೇಳದೇ ಜಾಣ ನಡೆ ಇಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:32 pm, Fri, 16 December 22