ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ

ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್​ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ ಮಾಡಿದ್ದಾರೆ.

ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ: ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಆರೋಪ
ಮಾಜಿ ಸಚಿವ ಬಿ.ಸಿ.ನಾಗೇಶ್​
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 16, 2023 | 3:17 PM

ತುಮಕೂರು: ಸುಪ್ರೀಂಕೋರ್ಟ್​​ನಲ್ಲಿ ಹಿಜಾಬ್ ಪ್ರಕರಣ ಇದ್ದರೂ ಮತ್ತು ಮುಸ್ಲಿಮರ ಮತ ಬ್ಯಾಂಕ್ ಭದ್ರಗೊಳಿಸಲು ಪಠ್ಯಕ್ಕೆ ಕೈಹಾಕಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಆರೋಪ ಮಾಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್​ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ ಪಠ್ಯದಲ್ಲಿ ಏನು ಬದಲಾವಣೆ ಮಾಡಬೇಕು ಅಂತಾ ಪರಿಶೀಲನೆ ಮಾಡುತ್ತೇವೆ ಅಂತಾ ಹೇಳದೇ ಹೀಗೆ ಮಾಡುತ್ತಿದ್ದಾರೆ. ಅವರು ಬುದ್ದಿಜೀವಿ ಹಾಗೂ ಅನುಭವಿ ರಾಜಕಾರಣಿ ಹೀಗೆ ಮಾಡುತ್ತಾರೆ ಅಂತಾ ಗೊತ್ತಿರಲಿಲ್ಲ. ಅವರಿಗೆ ಇದು ಬಿಜೆಪಿ ಸರ್ಕಾರ ತಂದಿದ್ದು,ಹಾಗಾಗಿ ಇದನ್ನು ತೆಗೆಯಬೇಕು ಎಂಬುವುದು ಅಷ್ಟೇ ಅವರ ಮುಂದಿದೆ. ಎಪಿಎಮ್​​ಸಿ ಕಾಯ್ದೆ ಕೂಡ ರೈತರ ಬಳಿ ಚರ್ಚಿಸಿ ಮುಂದುವರೆಯಬೇಕಿತ್ತು ಆದರೆ ಸಿಎಂ ಹಾಗೆ ಮಾಡಿಲ್ಲ ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಅವರಿಂದ ಅಧಿಕಾರ ಪಡೆದ ಅತಿರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ದ್ವೇಷದ ರಾಜಕಾರಣ ಎಂದ ಬಿಸಿ ನಾಗೇಶ್

ಸಿದ್ದರಾಮಯ್ಯನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಹಂಕಾರದ ರಾಜಕೀಯ ಮಾಡುತ್ತಿದ್ದಾರೆ. ಇವರು ಜನಪ್ರತಿನಿಧಿಗಳು ಅಂತಾ ಅನಿಸಿಲ್ಲ. ಇವರು ಕರ್ನಾಟಕದ ಓನರ್ಸ್ ರೀತಿಯಲ್ಲಿ ಆಡುತ್ತಿದ್ದಾರೆ. ಕಂಪನಿಯಲ್ಲಿ ಓನರ್ಸ್ ಹೇಗೆ ವರ್ತಿಸುತ್ತಾರೋ ಹಾಗೇ ಕೆಲವು ಮಂತ್ರಿಗಳು ವರ್ತಿಸುತ್ತಿದ್ದಾರೆ. ಏಕವಚನದಲ್ಲಿ ಮಾತಾಡೋದು, ಎಲ್ಲಾ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದಾರೆ.

ಅಭಿವೃದ್ಧಿ ಬಿಟ್ಟು ಪಾರ್ಲಿಮೆಂಟ್ ಚುನಾವಣೆಗೆ ಮುಸಲ್ಮಾನರ ಮತಗಳಿಗಾಗಿ ಈ ಕೆಲಸಕ್ಕೆ ಮುಂದಾಗಿದ್ದಾರೆ. ಇದುವರೆಗೂ ಕೇಸರಿಕರಣ ಆಗಿದೆ ಅಂದರು ಎಲ್ಲಿ ಆಗಿದೆ. ಮುಸಲ್ಮಾನರಿಗೆ ಖುಷಿ ಸಿಗಲು ಹೆಡ್ಗೆವಾರ್, ಸೂಲಿಬೆಲೆ ಹಾಗೂ ಸಾವರ್ಕಯ ಪಠ್ಯ ಬದಲಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದನ್ನು ಕಾಂಗ್ರೆಸ್​​ ಖಂಡಿಸುತ್ತೆ, ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಹಸುಗಳನ್ನ ಕಡಿಯುತ್ತೇವೆ ಅಂತಾರೆ ಇದೆಲ್ಲಾ ಹಿಂದು ವಿರೋದಿ ಹೇಳಿಕೆಗಳು. ಜನಪರ ಕಾರ್ಯಕ್ರಮಗಳನ್ನ ಘೊಷಣೆ ಮಾಡಿದ್ದಾರೆ ಅವೆಲ್ಲಾ ಮಾಡುತ್ತಿದ್ದಾರಾ? ಮಕ್ಕಳಿಗೆ ಪುಸ್ತಕ, ಯೂನಿಫಾರ್ಮ್​ಗಳನ್ನ ಕಳಿಸುತ್ತಿದ್ದಾರೆ. ವಿದ್ಯುತ್ ಬಗ್ಗೆ ಗಮನ ಹರಿಸಿಲ್ಲ‌. ಇದೆಲ್ಲವೂ ಕರೆಸಿ ಯಾರ ಬಳಿಯೂ ಚರ್ಚಿಸಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ