Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಕಾಂಗ್ರೆಸ್​ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ

ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ. ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ಮಾಡಿದ್ದಾರೆ.

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಕೆ: ಕಾಂಗ್ರೆಸ್​ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2023 | 2:58 PM

ಶಿವಮೊಗ್ಗ ಆಗಸ್ಟ್​ 07: ಕಾಂಗ್ರೆಸ್ ಬಂದ ಬಳಿಕ ಕೃಷಿ ಸಮ್ಮಾನ್ ಯೋಜನೆ ತೆಗೆದಿದ್ದಾರೆ. ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಶಾಪಕ್ಕೆ ಇಷ್ಟು ಬೇಗ ಗುರಿಯಾಗಬಾರದು. ಸರಿಪಡಿಸದಿದ್ದರೆ ಬಹಳ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ, ಭ್ರಷ್ಟಾಚಾರ ನಡೆಯುತ್ತಿದೆ

ಎಸ್​ಸಿ, ಎಸ್​ಟಿಗೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಸುತ್ತಿದ್ದಾರೆ. ಈ ಹಿಂದೆಯೂ ವರ್ಗಾವಣೆಯಲ್ಲಿ ಕೆಲ ನ್ಯೂನ್ಯತೆ ಸರಿಪಡಿಸುತ್ತಿದ್ದೇವು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಲಂಚಕೋರತನದ ಬಗ್ಗೆ ಇಡೀ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿಯಾಗಬಾರದು ಎಂದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ

ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿಯಾಗಿದೆ

ಎಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಖರ್ಗೆ ಅವರ ಹೆಸರನ್ನೇ ಹೇಳಿಲ್ಲ. ನನ್ನ ವಿರುದ್ಧ ಕಾಂಗ್ರೆಸ್​ನವರು ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಆರಗ ಜ್ಞಾನೇಂದ್ರ ವಿರುದ್ಧ ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘ ದೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನ ಹೇಳಿಕೆ ಆರೋಪ ಹಿನ್ನೆಲೆ ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದಿಂದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಮೈಸೂರಿನ ದೇವರಾಜ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ವಿವಿಧ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ದೇವರಾಜ ಪೋಲಿಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಕುತೂಹಲ ಮೂಡಿಸಿದ ಬೊಮ್ಮಾಯಿ ದಿಲ್ಲಿ ಪ್ರವಾಸ

ರಾಷ್ಟ್ರಮಟ್ಟದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿ, ಅವರ ಬಣ್ಣ ಕುರಿತು ಕೀಳಾಗಿ ಮಾತನಾಡಿರುವುದು ಖಂಡನೀಯ. ಇದು ದಲಿತ ಸಮುದಾಯಕ್ಕೆ ಮಾಡಿರುವ ಅಪಮಾನ.

ಇದು ಬಿಜೆಪಿ ಅವರ ಮನಸ್ಥಿತಿ ತೋರಿಸಿದೆ. ಈ ಕೂಡಲೇ ಆರಗ ಜ್ಞಾನೇಂದ್ರ ಅವರ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಬೇಕು. ಅವರನ್ನ ಬಂಧಿಸಿ, ಈ ಕೂಡಲೇ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆ ಕೇಳಬೇಕು. ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಆಗ್ರಹಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ