ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಜಿ ಸ್ಪೀಕರ್​ ಕಾಗೇರಿ ಹೇಳಿಕೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್​ಗಾಗಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಮತ್ತು ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಸ್ಪರ್ಧೆ ಏರ್ಪಡುವ ಲಕ್ಷಣ ಗೋಚರಿಸುತ್ತಿದೆ. ಒಂದೆಡೆ, ಅನಂತಕುಮಾರ್ ಹೆಗಡೆ ವಿವಾದಿತ ಹೇಳಿಕೆಗಳ ಮೂಲಕ ಪ್ರರಚಾರ ತಂತ್ರ ಹೂಡಿದ್ದರೆ, ಇನ್ನೊಂದೆಡೆ ಕಾಗೇರಿ, ಬಿಜೆಪಿಗೆ ಮತ ಹಾಕಿದರೆ ರಾಮನಿಗೆ, ಮೋದಿಗೆ ಮತ ಹಾಕಿದಂತೆ ಎಂದಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ರಾಮನಿಗೆ ನೀಡಿದಂತೆ: ಲೋಕಸಭಾ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಜಿ ಸ್ಪೀಕರ್​ ಕಾಗೇರಿ ಹೇಳಿಕೆ
ವಿಶ್ವೇಶ್ವರ ಹೆಗಡೆ ಕಾಗೇರಿ
Follow us
TV9 Web
| Updated By: Ganapathi Sharma

Updated on: Feb 07, 2024 | 10:13 AM

ಕಾರವಾರ, ಫೆಬ್ರವರಿ: ಬಿಜೆಪಿ ನಾಯಕ, ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಇದೀಗ ಲೋಕಸಭಾ ಚುನಾವಣೆಗೆ (Lok Sabha Elections) ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿ (BJP) ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಲ್ಲಿ ಚುನಾವಣೆ ಆರಂಭಕ್ಕೂ ಮುನ್ನ ರಾಮನ ಹೆಸರಿನಲ್ಲಿ ಪ್ರಚಾರ ಆರಂಭಿಸಿರುವ ಕಾಗೇರಿ, ಬಿಜೆಪಿಗೆ ನೀವು ಮತ ಹಾಕಿದರೆ ಅದು ರಾಮನಿಗೆ ಹಾಗೂ ಪ್ರಧಾನಿ ಮೋದಿಗೆ ಮತ ಹಾಕಿದಂತೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯರ್ತರಿಗೆ ಕರೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಚೇರಿಯಲ್ಲಿ ಮಾತನಾಡಿದ ಅವರು, ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಮಲದ ಹೂ. ವ್ಯಕ್ತಿ ಯಾರು ಎಂಬುದನ್ನು ವರಿಷ್ಠರು ಸೂಕ್ತ ಸಮಯದಲ್ಲಿ ಘೋಷಣೆ ಮಾಡುತ್ತಾರೆ. ಕಳೆದ ಬಾರಿಗಿಂತಲೂ ದಾಖಲೆ ಮತಗಳಿಂದ ಈ ಬಾರಿ ನಮ್ಮ ಬಿಜೆಪಿ ಗೆಲ್ಲಲಿದೆ. ಕಳೆದ ಬಾರಿ 4 ಲಕ್ಷ 80 ಸಾವಿರ ಮತಗಳ ಅಂತರದಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಇನ್ನೊಂದು ದಾಖಲೆಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನಮ್ಮ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿಗೆ ಮತ ಹಾಕಿದ್ರೆ ಅದು ರಾಮನಿಗೆ ಮತ ನೀಡಿದಂತೆ. ಬಿಜೆಪಿಗೆ ಮತ ಚಲಾಯಿಸಿದರೆ ಅದು ನರೇಂದ್ರ ಮೋದಿಗೆ ಮತ ಹಾಕಿದಂತೆ. ಜತೆಗೆ, ದೇಶದ ಐಕ್ಯತೆಗೆ ಮತ ನೀಡಿದಂತೆ. ಈ ಸಂದೇಶವನ್ನು ಜನರಿಗೆ ತಲುಪಿಸೋಣ, ಅವರಲ್ಲಿ ಜಾಗೃತಿ ಮೂಡಿಸೋಣ. ಎಲ್ಲರೂ ಮತದಾನ ಮಾಡುವಂತೆ ನಾವು ಮಾಡೋಣ ಎಂದು ಕಾರ್ಯರ್ತರು ಹಾಗೂ ಮುಖಂಡರಿಗೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅನಂತಕುಮಾರ್ ಹೆಗಡೆ ಹಾಲಿ ಸಂಸದರಾಗಿದ್ದಾರೆ. ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದಿದ್ದ ಹೆಗಡೆ ಇತ್ತೀಚೆಗೆ ಸಕ್ರಿಯರಾಗಿ ರಾಜಕೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾದ ಮಂಗನ ಕಾಯಿಲೆ; 14 ದಿನಗಳಲ್ಲಿ 37 ಜನರಿಗೆ ಸೋಂಕು, 3 ಮಂಗಗಳ ಸಾವು

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹೆಗಡೆ ವಾಗ್ದಾಳಿ ನಡೆಸಿದ್ದು ವಿವಾದಕ್ಕೆ ಗ್ರಾಸವಾಗಿತ್ತು. ಆ ನಂತರವೂ ಕೆಲವು ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ. ಈ ಮಧ್ಯೆ, ವಿಧಾನಸಭೆ ಚುನಾವಣೆ ಸೋಲಿನ ನಂತರ ತುಸು ಮೌನಕ್ಕೆ ಶರಣಾಗಿದ್ದ ಕಾಗೇರಿಯೂ ಇದೀಗ ರಾಜಕೀಯ ಚಟುವಟಿಕೆ ಬಿರುಸುಗೊಳಿಸಿರುವುದು ಉತ್ತರ ಕನ್ನಡ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್