ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಬೆಂಬಲಿಗರ ಆರೋಪ

| Updated By: Rakesh Nayak Manchi

Updated on: Jul 25, 2023 | 9:47 PM

ವಿನಾ ಕಾರಣ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ ಎಂಬ ಆರೋಪ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಇಂದು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹರಹಾಕಿದ್ದಾರೆ.

ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಬೆಂಬಲಿಗರ ಆರೋಪ
ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ ಕೆ ಸುಧಾಕರ್ ಬೆಂಬಲಿರ ಆಕ್ರೋಶ
Follow us on

ಚಿಕ್ಕಬಳ್ಳಾಫುರ, ಜುಲೈ 25: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ವಿನಾ ಕಾರಣ ಅಧಿಕಾರಿಗಳ ವರ್ಗಾವಣೆ ಮಾಡಿ ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಬೆಂಬಲಿಗರು ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಬಲಿಗರು, ಪ್ರದೀಪ್ ಈಶ್ವರ್ ಹಿಟ್ಲರ್ ಆಡಳಿತ ನಡೆಸುತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿ ರಾಜ್ಯದ ಜನರ ಗಮನ ಸೆಳೆದಿದ್ದರು. ಇದೀಗ ಇವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸುಧಾಕರ್ ಬೆಂಬಲಿಗರು, ಬೆಂಗಳೂರಿನಲ್ಲಿರುವ ತಮ್ಮ ಪರಿಶ್ರಮ ನೀಟ್ ಅಕಾಡೆಮಿಯ ಕಟ್ಟಡದಲ್ಲಿ ಕ್ಷೇತ್ರದ ಅಧಿಕಾರಿಗಳ ಸಭೆ ನಡೆಸಿದ್ದಾರೆ ಹಾಗೂ ವಿನಾ ಕಾರಣ ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆ ಮಾಡುವುದರ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Assembly Session; ಕನ್ನಡ ಶಾಲೆಗಳ ಕ್ಲಾಸ್ ರೂಮುಗಳನ್ನು ಸಬಲೀಕರಿಸಿದರೆ ಬಹಳಷ್ಟು ಬದಲಾವಣೆಯಾಗಲಿದೆ: ಪ್ರದೀಪ್ ಈಶ್ವರ್

ಬಾಷಣದ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಸತ್ಯ ಹರಿಶ್ಚಂದ್ರ ಕಥೆಗಳನ್ನು ಹೇಳುತ್ತಾರೆ. ಆದರೆ ಪ್ರಾಯೋಗಿಕವಾಗಿ ಗಿಮೀಕ್ ರಾಜಕಾರಣ ಮಾಡುತ್ತಿದ್ದಾರೆ. ಶಾಸಕ ದ್ವೀಮುಖ ನೀತಿಯನ್ನು ಜನರೇ ಬಹಿರಂಗ ಮಾಡುತ್ತಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ನಗರಸಭೆಯ ಮಾಜಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಹಲವು ಮುಖಂಡರು ಇದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Tue, 25 July 23