ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ. ಈ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. 

ಬೆಳ್ಳಂ ಬೆಳಿಗ್ಗೆ ಜೋಶಿ ಮನೆಗೆ ಈಶ್ವರಪ್ಪ ಭೇಟಿ, ಹಾಸ್ಯ ಚಟಾಕಿ ಹಾರಿಸಿದ ಕೇಂದ್ರ ಸಚಿವ
ಕೆಎಸ್​ ಈಶ್ವರಪ್ಪ
Follow us
| Updated By: ವಿವೇಕ ಬಿರಾದಾರ

Updated on: Dec 30, 2023 | 12:07 PM

ಹುಬ್ಬಳ್ಳಿ, ಡಿಸೆಂಬರ್​ 30: ಇತ್ತೀಚಿಗೆ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಘೋಷಣೆ ಆಗುವಕ್ಕಿಂತಲೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ ಕೆಎಸ್​ ಈಶ್ವರಪ್ಪ ಅವರು ಹಾವೇರಿ ಲೋಕಸಭಾ (Lokasabha Election) ಕ್ಷೇತ್ರದ ಪುತ್ರ ಕಾಂತೇಶ್​ ಅವರಿಗೆ ಟಿಕೆಟ್ ನೀಡಬೇಕು ಎಂದು ಬಹಿರಂಗವಾಗಿಯೇ ಹೇಳಿದ್ದರು. ಈ ಮೂಲಕ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಣ ತೊಟ್ಟಿದ್ದಾರೆ. ​

ಹೀಗಾಗಿ ಕೆಎಸ್​ ಈಶ್ವರಪ್ಪ ಕೇಂದ್ರ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೀಗ ಧಿಡೀರನೆ ಹುಬ್ಬಳ್ಳಿಯ ಮಯೂರಾ ಎಸ್ಟೇಟ್​ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಕೆ ಎಸ್​ ಈಶ್ವರಪ್ಪ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್​ ಈಶ್ವರಪ್ಪ ಭೇಟಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಬಿಜೆಪಿ ಲೀಡರ್​​ ಲೆಸ್, ಜೆಡಿಎಸ್​​ ಪೀಪಲ್​ ಲೆಸ್: ಸಚಿವ ಪ್ರಿಯಾಂಕ್ ಖರ್ಗೆಗೆ ಕೆಎಸ್​ ಈಶ್ವರಪ್ಪ ತಿರುಗೇಟು

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ನಾವಿಬ್ಬರೂ ಒಂದೇ ಪಕ್ಷದವರು ಏನಿಲ್ಲ ಬಿಡಿ. ಈಶ್ವರಪ್ಪ ಬಂದರೇ ಸುದ್ದಿ ಸಿಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಭೇಟಿ ವೇಳೆ ಕೆಎಸ್​ ಈಶ್ವರಪ್ಪ ಪ್ರಹ್ಲಾದ್ ಜೋಶಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆಗ ಪ್ರಹ್ಲಾದ್ ಜೋಶಿ ನಯವಾಗಿ ತಿರಸ್ಕರಿದರು.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರಧಾನಿ ಮೋದಿ ಮತ್ತು ಚುನಾವಣಾ ಚಾಣಕ್ಯ ಅಮಿತ್​ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಹ್ಲಾದ್​ ಜೋಶಿ ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಶುಕ್ರವಾರ ದಾವಣಗೆರೆ ಪ್ರವಾಸ ಮುಗಿಸಿ ಪ್ರಹ್ಲಾದ್​ ಜೋಶಿ ಹುಬ್ಬಳ್ಳಿಗೆ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್