ವಿಪಕ್ಷ ನಾಯಕರ ಜೊತೆ ಒಳ ಒಪ್ಪಂದ: ಶಾಸಕ ಯತ್ನಾಳ್​ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಳಒಪ್ಪಂದ ಎಲ್ಲರಿಗೂ ಗೊತ್ತಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ವಿಪಕ್ಷ ನಾಯಕರ ಜೊತೆ ಯತ್ನಾಳ್​​​ ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಆರೋಪ ಮಾಡಿದ್ದಾರೆ.

ವಿಜಯಪುರ: ಚುನಾವಣೆ ಸಂದರ್ಭದಲ್ಲಿ ವಿಪಕ್ಷ ನಾಯಕರ ಜೊತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್​ ಯತ್ನಾಳ್​ ಒಳಒಪ್ಪಂದ ಎಲ್ಲರಿಗೂ ಗೊತ್ತಿದೆ. ಅವರು​ ದೊಡ್ಡ ನಾಯಕರಾಗುತ್ತಾರೆ ಎಂದುಕೊಂಡಿದ್ವಿ, ಆದರೆ ಆಗಲ್ಲ. ನನ್ನ ಸೋಲಿಸಲು ನಿರಾಣಿ ಹಣಕೊಟ್ಟಿದ್ದಾರೆಂದು ಹೇಳುತ್ತಾ ಬಂದರು. ಯತ್ನಾಳ್​ ಹೇಳಿಕೆಯಿಂದ ಕಾರ್ಯಕರ್ತರಿಗೆ ಗೊಂದಲ ಉಂಟಾಯ್ತು ಎಂದಿದ್ದಾರೆ.

ನಾಲ್ಕು ವರ್ಷಗಳ ಕಾಲ ಪಾಲಿಕೆ ಚುನಾವಣೆ ನಡೆಯದಂತೆ ಮಾಡಿದರು. ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸರಿಯಾಗಿ ಹೋಗಲಿಲ್ಲ. 2ಎ ಮೀಸಲಾತಿ ಹೋರಾಟದಲ್ಲೂ ಯತ್ನಾಳ್​ ಸಮಸ್ಯೆ ಮಾಡಿದರು. ಒಟ್ಟಾಗಿ ಹೋರಾಟ ಮಾಡುವ ಮನೋಭಾವ ಯತ್ನಾಳ್​ಗೆ ಬರಲಿಲ್ಲ. ಎಲ್ಲವನ್ನೂ ಮರೆತು ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕಿದೆ. ಇದನ್ನು ರಾಜಿ ಎಂದರೂ ಅಡ್ಡಿಯಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ ಡಿ ಕುಮಾರಸ್ವಾಮಿಗೆ ಮಾಡಲು ಕೆಲಸವಿಲ್ಲ, ಸರ್ಕಾರದ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡುತ್ತಾ ಕಾಲಹರಣ ಮಾಡುತ್ತಾರೆ: ದಿನೇಶ್ ಗುಂಡೂರಾವ್

ಘಟನೆಗೆ ನೇರ ಕಾರಣ ಯತ್ನಾಳ್

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ನೇರ ಕಾರಣ ಯತ್ನಾಳ್​. ವಿಜಯಪುರದಲ್ಲಿ ನಡೆದ ಸಭೆಗೆ ಉದ್ದೇಶ ಪೂರ್ವಕವಾಗಿ ಬರಲಿಲ್ಲ. ಜಿಗಜಿಣಗಿ ಮತ್ತೆ ಆಯ್ಕೆ ಮಾಡಬೇಕೆಂದು ಜೊಲ್ಲೆ ಹೇಳಿದ್ದು ತಪ್ಪಾ ಎಂದು ಪ್ರಶ್ನಿಸಿದ್ದಾರೆ. ಶಾಸಕ​ ಯತ್ನಾಳ್​ ತಮ್ಮ ಬೆಂಬಲಿಗರಿಂದ ಗಲಾಟೆ ಮಾಡಿಸಿದರು. ಜೆಡಿಎಸ್​​ನಲ್ಲಿದ್ದಾಗ ಟೋಪಿ ಹಾಕಿ ನಮಾಜ್ ಮಾಡಿದ್ದು ಯಾರು ಎಂದರು.

ಅಟಲ್ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾಗಿದ್ದೆ ಎಂದು ಹೇಳ್ತಿದ್ದಾರೆ. ಅಣ್ವಸ್ತ್ರ ವಿಚಾರದಲ್ಲಿ ಕಾಂಗ್ರೆಸ್ ಸೇರಲು ಯತ್ನಾಳ್​​ ಮುಂದಾಗಿದ್ದರು. ವಾಜಪೇಯಿ ಬಿಟ್ಟು ಕಾಂಗ್ರೆಸ್​ ಸೇರಲು ಯತ್ನಾಳ್​​ ಮುಂದಾಗಿದ್ದರು. ಆಗ ಯತ್ನಾಳ್​ರನ್ನು ಅನಂತಕುಮಾರ್​ ತಡೆದಿದ್ದನ್ನು ಮರೆಯಬಾರದು. ಸ್ಟಾರ್ ಪ್ರಚಾರಕರಾಗಿದ್ದ ಯತ್ನಾಳ್​​ ಎಷ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಹೈಕಮಾಂಡ್​ಗೆ 2,500 ಕೋಟಿ ಕೊಟ್ಟರೆ ಸಿಎಂ ಆಗುತ್ತಾರೆ ಎಂದಿದ್ದರು.

ಇದನ್ನೂ ಓದಿ: ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ ಟೀಕೆ

ಯತ್ನಾಳ್​ ಹೇಳಿಕೆಯಿಂದ ನಮಗೆ ದೊಡ್ಡ ಮಟ್ಟದ ಹಿನ್ನಡೆಯಾಯ್ತು. ಬೊಮ್ಮಾಯಿ ಸಿಎಂ ಆಗಿದ್ದಾಗ ಬ್ಲ್ಯಾಕ್​ಮೇಲ್​ ಮಾಡುತ್ತಾ ಬಂದರು. ನಿಮ್ಮ ಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಜನರು ಹೆಚ್ಚಿದ್ದಾರೆ. ನಿಮ್ಮನ್ನು ಸೋಲಿಸುತ್ತೇನೆಂದು ಹೇಳುತ್ತಾ ಕೆಲಸ ಮಾಡಿಸಿಕೊಂಡರು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು

ರಾಜ್ಯ ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿಗಳನ್ನು ಈಡೇರಿಸಬೇಕು. ಈಗಾಗಲೇ ಕೇಂದ್ರ ಸರ್ಕಾರ ತಲಾ ಐದು ಕೆಜಿ ಅಕ್ಕಿ ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಒಟ್ಟಾರೆ 15 ಕೆಜಿ ಅಕ್ಕಿಯನ್ನು ನೀಡಬೇಕು. ಅಕ್ಕಿ ವಿತರಣೆ ಮಾಡದಿದ್ರೆ ಸರ್ಕಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೂ ನಾವು ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us