AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗುರುತು ಚೀಟಿ ಸೃಷ್ಟಿ ಕೇಸ್​​: ಸಿಬಿಐ ತನಿಖೆಗೆ ಆಗ್ರಹಿಸಿದ ಮಾಜಿ ಸಚಿವ ಸುರೇಶ್ ಕುಮಾರ್

ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣವನ್ನು ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್​ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೈರತಿ ಸುರೇಶ್ ವಿಚಾರಣೆಯೂ ನಡೆಯಬೇಕು ಎಂದು ಹೇಳಿದ್ದಾರೆ.

ಅಕ್ರಮ ಗುರುತು ಚೀಟಿ ಸೃಷ್ಟಿ ಕೇಸ್​​: ಸಿಬಿಐ ತನಿಖೆಗೆ ಆಗ್ರಹಿಸಿದ ಮಾಜಿ ಸಚಿವ ಸುರೇಶ್ ಕುಮಾರ್
ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪತ್ರಿಕಾಗೋಷ್ಠಿ
ಗಂಗಾಧರ​ ಬ. ಸಾಬೋಜಿ
|

Updated on: Oct 25, 2023 | 4:11 PM

Share

ಬೆಂಗಳೂರು, ಅಕ್ಟೋಬರ್​​ 25: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣ (fake voter ID case) ವನ್ನು ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್​ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಸಿದ್ಧಪಡಿಸಿದ ನಕಲಿ ಆಧಾರ್ ಕಾರ್ಡ್‍ಗಳನ್ನು ರದ್ದುಪಡಿಸಬೇಕು. ಅಪರಾಧಿಗಳು ತಪ್ಪಿಸಿಕೊಳ್ಳಲು ಬಿಡಬಾರದು. ಇದು ಕೇವಲ ರಾಜಕೀಯದ ಪ್ರಶ್ನೆಯಲ್ಲ. ಸಮಾಜದ ಅಳಿವು ಉಳಿವಿನ ಪ್ರಶ್ನೆ ಎಂದು ಹೇಳಿದ್ದಾರೆ.

ಜನ್ಮ ದೃಢೀಕರಣ ಪತ್ರವನ್ನೂ ನೀಡದೆ ಆಧಾರ್ ಕಾರ್ಡ್ ಮಾಡಲಾಗಿದೆ ಎಂದರೆ, ಇವರ ಅಟ್ಟಹಾಸ, ಅಹಂಕಾರ ಎಷ್ಟಿರಬೇಕು ಎಂದು ಪ್ರಶ್ನಿಸಿದರು. ಇದನ್ನೂ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಗೆಲುವಿಗಾಗಿ ಮಾಡಿಸಿದ್ದಾರೆ. ಇದರ ಕುರಿತು ಚುನಾವಣಾ ಆಯೋಗಕ್ಕೂ ದೂರು ಕೊಡಲಿದ್ದೇವೆ. ಆಧಾರ್ ಕಾರ್ಡ್, ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಕೋರಲಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಅಂತ ಇದ್ದರೆ ಅದು ಕುಮಾರಸ್ವಾಮಿ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರದಲ್ಲಿ ತಮ್ಮ ಗಾಂಭೀರ್ಯತೆ ತೋರಿಸಲಿ. ಭೈರತಿ ಸುರೇಶ್ ವಿಚಾರಣೆಯೂ ನಡೆಯಬೇಕು. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ನ ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್‍ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು. ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಲಾಗಿತ್ತು ಎಂದರು.

ಇದನ್ನೂ ಓದಿ: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಭೈರತಿ ಸುರೇಶ್ ಆಪ್ತರಿಗೆ ನೋಟಿಸ್ ಕೊಟ್ಟು ಸುಮ್ಮನಾದ್ರಾ ಪೊಲೀಸ್?

ಸೆಕ್ಷನ್ 420 ಸೇರಿ ಹಲವು ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಾಗಿದೆ. ಈ ಅಪರಾಧವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ. ಆಧಾರ್ ಕಾರ್ಡ್ ನಕಲಿ ಸೃಷ್ಟಿಯು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಮಹಾನ್ ಅಪರಾಧ. ಆರೋಪಿಗಳು ಶಾಸಕ- ಸಚಿವ ಭೈರತಿ ಸುರೇಶ್ ಅವರು ನಿಕಟವರ್ತಿಗಳು ಎಂದು ಆರೋಪಿಸಿದರು. ಮೌನೇಶ್ ಸ್ಕೂಟರ್ ರೈಡ್ ಮಾಡುತ್ತಿದ್ದು, ಭೈರತಿ ಸುರೇಶ್ ಅವರು ಹಿಂದೆ ಕುಳಿತ ಫೋಟೋವನ್ನು ಪ್ರದರ್ಶಿಸಿದರು.

ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಕೂಡ ರಾಷ್ಟ್ರೀಯ ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯದ ಬಗ್ಗೆ ಯಾವುದೇ ಕಾಂಗ್ರೆಸ್ ನಾಯಕರು ಮಾತನಾಡಿಲ್ಲ. ಭೈರತಿ ಸುರೇಶ್ ಅವರು ಸಿಎಂಗೆ ಹತ್ತಿರದವರೆಂದು ಎಲ್ಲರೂ ಮಾತನಾಡುತ್ತಾರೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮಾತನಾಡಿ, ಭಾರತದಲ್ಲಿ ಪೌರತ್ವ ಗುರುತುಚೀಟಿ ಇಲ್ಲ. ಅದಕ್ಕೆ ಹತ್ತಿರದ ಹೋಲಿಕೆಯ ಕಾರ್ಡ್ ಆಧಾರ್ ಕಾರ್ಡ್. ಇದರ ಮೂಲಕ ಹಲವಾರು ಸೌಲಭ್ಯ ಪಡೆಯಬಹುದು. ಬಾಂಗ್ಲಾದೇಶದಿಂದ ಬಂದ ನಿವಾಸಿಗಳು ಅತ್ಯಂತ ಸುಲಭವಾಗಿ ಇಂಥ ನಕಲಿ ಗುರುತಿನ ಚೀಟಿ ಪಡೆಯುವಂತಾಗಿದೆ ಎಂದು ಆಕ್ಷೇಪಿಸಿದರು.

ಭಾರತೀಯ ನಿವಾಸಿಗಳು ಕೆಲವು ಸಂದರ್ಭಗಳಲ್ಲಿ ಕೋರ್ಟಿಗೆ ಹೋಗಿ, ಪುರಾವೆ ನೀಡಿ ಅತ್ಯಂತ ಕಷ್ಟದಿಂದ ಆಧಾರ್ ಕಾರ್ಡ್ ಮಾಡಿಸುತ್ತಾರೆ. ಆದರೆ, ಇಲ್ಲಿ ಬೇರೆ ದೇಶದವರು ಸಲೀಸಾಗಿ ನಕಲಿ ಆಧಾರ್ ಕಾರ್ಡ್ ಮಾಡಿಸುತ್ತಿದ್ದಾರೆ. ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಸರಕಾರ ಇದರ ಹಿಂದಿನ ಜಾಲವನ್ನು ಭೇದಿಸಿ ಪೂರ್ಣ ಜಾಲವನ್ನು ಬಂಧಿಸಲು ಸೂಚಿಸಬೇಕು. ಚುನಾವಣಾ ಆಯೋಗವು ಇಂಥ ಮತದಾರರ ನಕಲಿ ಗುರುತುಚೀಟಿ ಕುರಿತಂತೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು