ದೇವೇಗೌಡರು ನನ್ನ ಗುರುಗಳು, ನಾನವರ ಶಿಷ್ಯ ಎಂದ ಮಾಜಿ ಸಚಿವ ವಿ ಸೋಮಣ್ಣ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ಅವರು ನನ್ನ ಗುರುಗಳು ಎಂದು ಹೇಳಿದ್ದಾರೆ.

Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Jan 05, 2024 | 10:39 PM

ಬೆಂಗಳೂರು, ಜನವರಿ 05: ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನು ಮಾಜಿ ಸಚಿವ ವಿ ಸೋಮಣ್ಣ (V Somanna) ಇಂದು ನಗರದ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು. ಸೋಮಣ್ಣ ಮತ್ತು ದೇವೇಗೌಡರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ದೇವೇಗೌಡರು ನನ್ನ ಗುರುಗಳು ಎಂದ ವಿ.ಸೋಮಣ್ಣ

ಭೇಟಿ ಬಳಿಕ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ದೇವೇಗೌಡರನ್ನ ಭೇಟಿಯಾಗಿದ್ದಕ್ಕೆ ಸಂತೋಷವಾಗಿದೆ. ದೇವೇಗೌಡರ ತಂತ್ರಗಾರಿಕೆ ಕಲಿಯಬೇಕು. ನಾನು ಸೋತಬಳಿಕ ನನಗೆ ಕರೆ ಮಾಡಿ ಮಾತಾಡಿದ್ದರು. ಅವರು ನನ್ನ ಗುರುಗಳು. ನಾನು ಅವರ ಶಿಷ್ಯ. 1983ರಲ್ಲಿ ನಾನು ರಾಜಕೀಯ ಬಂದಾಗ ಅವರ ಅನುಯಾಯಿ ಆಗಿದ್ದೆ   ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಸಹೋದರ ವಿರುದ್ಧದ ಪ್ರಕರಣ: ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗವೆಂದ ಕುಮಾರಸ್ವಾಮಿ

ನಾನು H.D.ದೇವೇಗೌಡರಿಂದ ಸಾಕಷ್ಟು ಕಲಿತಿದ್ದೇನೆ. ಅವರಿಗೆ ವಯಸ್ಸಾಗಿರಬಹುದು, ಅಗಾಧ ಜ್ಞಾನ ಇದೆ. ಸುಮಾರು 1 ಗಂಟೆರ ಕಾಲ ಮಾತುಕತೆ ನಡೆಸಿದ್ದೇನೆ. ಅವರು ಕೆಲ ವಿಚಾರಗಳನ್ನ ಹೇಳಿದ್ದಾರೆ ಎಂದರು.

ಈಗ ಏನೂ ಹೇಳುವ ವಾತಾವರಣವಿಲ್ಲ

ತುಮಕೂರು ಲೋಕಸಭಾ ಕ್ಷೇತ್ರದ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಈಗ ಏನೂ ಹೇಳುವ ವಾತಾವರಣವಿಲ್ಲ. ಜ.15 ಅಥವಾ 16ರ ಬಳಿಕ ಗೊತ್ತಾಗುತ್ತೆ. ಸುಮ್ಮನೆ ಬುರುಡೆ ಹೊಡೆದರೆ ಆಗಲ್ಲ ಎಂದು ಹೇಳಿದ್ದಾರೆ.

ರಾಜ್ಯ BJP ನಾಯಕರ ಮೇಲೆ ಅಸಮಾಧಾನ

ರಾಜ್ಯ BJP ನಾಯಕರ ಮೇಲೆ ಅಸಮಾಧಾನ ವಿಚಾರವಾಗಿ ಮಾತನಾಡಿ, ಈ ಕುರಿತು ಮಾತನಾಡಿ ಬಗೆಹರಿಸುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಮೈತ್ರಿಯಿಂದ ಜನತೆ ಬಹಳ ಖುಷಿಯಿಂದ ಇದ್ದಾರೆ ಎಂದರು.

ದೇಶಕ್ಕೆ ಮೋದಿಯಂತವರು ಬೇಕು: ಹೆಚ್​ಡಿ ರೇವಣ್ಣ

ಹೆಚ್​ಡಿ ರೇವಣ್ಣ ಪ್ರತಿಕ್ರಿಯಿಸಿದ್ದು, ಸೋಮಣ್ಣ ಹಿರಿಯರು ನಮ್ಮಲ್ಲೇ ಇದ್ದವರು. ಇಂದು ದೇವೇಗೌಡರ ಬಹಳ ದಿನಗಳ ನಂತರ ಭೇಟಿಯಾದರು. ಹಳೆಯ ವಿಚಾರಗಳನ್ನ ಮೆಲುಕು ಹಾಕಿದರು ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರು ಸೇಡಿನ ರಾಜಕಾರಣ ಮಾಡಿ ತುಳಿಯಲು ಹೊರಟಿದ್ದಾರೆ: ಶ್ರೀಕಾಂತ್ ಪ್ರಕರಣ ಉಲ್ಲೇಖಿಸಿ ದೇವೇಗೌಡ ವಾಗ್ದಾಳಿ

ಸೋಮಣ್ಣಗೆ ತುಮಕೂರು ಲೋಕಸಭಾ ಟಿಕೆಟ್ ಬಿಟ್ಟು ಕೊಡುವ ವಿಚಾರವಾಗಿ ಮಾತನಾಡಿ, ಆ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿ ಮೋದಿ ಅವರ ಭೇಟಿಯ ವೇಳೆ ನಮ್ಮ ಕುಟುಂಬವನ್ನ ಬಹಳ ಗೌರವದಿಂದ ನಡೆಸಿಕೊಂಡರು. ನಾವು ಎಂದಿಗೂ ಅದನ್ನ ಮರೆಯುವುದಿಲ್ಲ. ದೇಶಕ್ಕೆ ಮೋದಿಯಂತವರು ಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?