6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್

ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮಾಜಿ ಶಾಸಕ ಬಣಕಾರ್ ತಿಳಿಸಿದ್ದಾರೆ.

6 ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ನೀಡ್ಬೇಕಿತ್ತು, ನ.11ರಂದು ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡ್ತೇನೆ ಎಂದ ಮಾಜಿ ಶಾಸಕ ಬಣಕಾರ್
ub banakar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 09, 2022 | 7:00 PM

ಬೆಂಗಳೂರು: ಮಾಜಿ ಶಾಸಕ ಯು.ಬಿ.ಬಣಕಾರ್ (U B Banakar) ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ. . ಬಿಜೆಪಿ ಸದಸ್ಯತ್ವ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಬಣಕಾರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಬಿಜೆಪಿ ಶಾಕ್ ಕೊಟ್ಟಿದ್ದಾರೆ ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ನ.9) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಯಾರೇ ಮನವೊಲಿಸಿದರೂ ​ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಸಮಸ್ಯೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೂ ಗೊತ್ತಿದೆ. ಸಿಎಂ ಬೊಮ್ಮಾಯಿ ನಿವಾಸಕ್ಕೆ ಹೋದರೆ ಬಹಳ ಬ್ಯುಸಿ ಇರುತ್ತಾರೆ. ಈಗ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ಬಿಎಸ್​ವೈ ಸಿಎಂ ಆಗಬೇಕೆಂದು ಬಿ.ಸಿ.ಪಾಟೀಲ್​ಗೆ ಸಹಕಾರ ಕೊಟ್ಟೆ. ಹಿರೇಕೆರೂರಲ್ಲಿ ಬಿ.ಸಿ.ಪಾಟೀಲ್​ರನ್ನು ಗೆಲ್ಲಿಸುವ ಕೆಲಸ ಮಾಡಿದ್ದೇನೆ. ಆದರೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತೆ ಎಂದು ದೂರವಿಡುವ ಪ್ರಯತ್ನಿಸಿದರು. ಕಾರ್ಯಕರ್ತರ ಜೊತೆ ಚರ್ಚಿಸಿಯೇ ತೀರ್ಮಾನ ಕೈಗೊಂಡಿದ್ದೇನೆ ಎಂದು ಹೇಳಿದರು.

ಯಡಿಯೂರಪ್ಪನವರ ಆಪ್ತ, ಮಾಜಿ ಶಾಸಕ ಬಿಜೆಪಿಗೆ ಗುಡ್​ ಬೈ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಇಬ್ಬರು ನಾಯಕರಿದ್ದೆವು. ಇಬ್ಬರೂ ನಾಯಕರು ಒಟ್ಟಿಗೆ ಹೋಗಲು ಆಗಲಿಲ್ಲ. ಬಿಎಸ್​ವೈ ನಮ್ಮಿಬ್ಬರನ್ನು ಪಕ್ಷದ ಎರಡು ಕಣ್ಣುಗಳು ಎಂದಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ್​ರಿಂದ ನನಗೆ ಕಿರುಕುಳ ಇತ್ತು. ಹಾಗಾಗಿ ನಾನು ಬಿಜೆಪಿ ಬಿಡುವ ನಿರ್ಧಾರವನ್ನು ಮಾಡಿದ್ದೇನೆ. ಕಾರ್ಯಕರ್ತರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬೇರೆಯವರಾಗಿದ್ದರೆ 4-5 ತಿಂಗಳ ಹಿಂದೆಯೇ ಪಕ್ಷ ಬಿಡುತ್ತಿದ್ದರು. ನ.11ರಂದು ನನ್ನ ಮುಂದಿನ ನಡೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು.

2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್​​ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನದಿಂದ ಬಿ.ಸಿ.ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಬಣಕರ್ ಅವರಿಗೆ ಬಿಜೆಪಿ ಟಿಕೆಟ್ ಸಿಗುವುದು ಸಾಧ್ಯತೆಗಳು ಕಡಿಮೆ. ಇದರಿಂದ ಬಣಕಾರ್ ತಮ್ಮ ಮುಂದಿನ ರಾಜಕೀಯ ನಡೆಗಾಗಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Published On - 6:59 pm, Wed, 9 November 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ