ಬಿಜೆಪಿ ಬಿಟ್ಟು ಜೆಡಿಎಸ್​ ಸೇರಿದ್ದ ನಾಯಕ ಈಗ ಕಾಂಗ್ರೆಸ್​ ಸೇರುತ್ತಾರಾ? ಡಿಕೆ ಶಿವಕುಮಾರ್​ ಭೇಟಿ ಹಿಂದಿನ ರಹಸ್ಯವೇನು?

ಮುಂಬರುವ ಲೋಕಸಭಾ ಚುನಾವನೆಗಾಗಿ ಈಗಿನಿಂದಲೇ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸಿದ್ದು, ಹೆಚ್ಚಿನ ಸ್ಥಾನ ಗೆಲ್ಲುಲು ಆಪರೇಷನ್ ಹಸ್ತದ ಮೊರೆ ಹೋಗಿದೆ. ಈಗಾಗಲೇ ಬಿಜೆಪಿಯ ಕೆಲ ಶಾಸಕರಿಗೆ ಗಾಳ ಹಾಕಿದೆ. ಇದರ ಮಧ್ಯೆ ಬಿಜೆಪಿ ತೊರೆದು ಜೆಡಿಎಸ್​​ ಸೇರಿದ್ದ ಮಾಜಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur Manjunatha) ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸುದ್ದಿ ಹಬ್ಬಿದೆ.

ಬಿಜೆಪಿ ಬಿಟ್ಟು ಜೆಡಿಎಸ್​ ಸೇರಿದ್ದ ನಾಯಕ ಈಗ ಕಾಂಗ್ರೆಸ್​ ಸೇರುತ್ತಾರಾ? ಡಿಕೆ ಶಿವಕುಮಾರ್​ ಭೇಟಿ ಹಿಂದಿನ ರಹಸ್ಯವೇನು?
ಆಯನೂರು ಮಂಜನಾಥ್, ಡಿಕೆ ಶಿವಕುಮಾರ್​
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 20, 2023 | 4:50 PM

ಬೆಂಗಳೂರು, (ಆಗಸ್ಟ್ 20); ಕಾಂಗ್ರೆಸ್​​ನ ಆಪರೇಷನ್ ಹಸ್ತದ (Congress Operation Hasta) ಗುಮ್ಮ ಬಿಜೆಪಿಯಲ್ಲಿ (BJP) ಬಿರುಗಾಳಿ ಎಬ್ಬಿಸಿದೆ. ಒಂದ್ಕಡೆ ಆಪರೇಷನ್ ಹಸ್ತದ ವಿಚಾರ ಭಾರಿ ಸದ್ದು ಮಾಡುತ್ತಿರುವಾಗಲೇ ಬಿಜೆಪಿ ತೊರೆದು ಜೆಡಿಎಸ್ (JDS)​ ಸೇರಿದ್ದ ಆಯನೂರು ಮಂಜುನಾಥ್ (Ayanur Manjunatha) ಅವರನ್ನು ಕಾಂಗ್ರೆಸ್ ಆಪರೇಷನ್ ಮಾಡಿತಾ ಎನ್ನುವ ಪ್ರಶ್ನೆ ಹುಟ್ಟಿದೆ. ಅದಕ್ಕೆ ಕಾರಣ ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ. ಹೌದು… ಸದ್ಯ ಇದೊಂದು ಫೋಟೋ ಭಾರಿ ಸಂಚಲನ ಮೂಡಿಸುತ್ತಿದ್ದು, ಆಪರೇಷನ್ ಹಸ್ತಕ್ಕೆ ಇಂಬು ಕೊಡುವಂತಿದೆ.

ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಕಾಂಗ್ರೆಸ್​ಗೆ ಸೇರ್ತಾರಾ ಅನ್ನೋ ಪ್ರಶ್ನೆ ಮೂಡಿಸಿದೆ. ಆಯನೂರು ಮಂಜುನಾಥ್ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಸದಾಶಿವನಗರದ ಡಿಕೆಶಿ ನಿವಾಸಕ್ಕೆ ಆಗಮಿಸಿದ್ದ ಆಯನೂರು ಮಂಜುನಾತ್, ಡಿಕೆಶಿ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ. ಅಸಲಿಗೆ ಬಿಜೆಪಿ ಪರಿಷತ್ ಸದಸ್ಯರಾಗಿದ್ರು. ಆದ್ರೆ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ನೀಡದ್ದಕ್ಕೆ ಅಸಮಾಧಾನಗೊಂಡು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿ ಶಿವಮೊಗ್ಗ ನಗರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲುಕಂಡಿದ್ದರು. ಆದ್ರೆ, ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿದೆ. ಇದಕ್ಕೆ ಇಂಬು ಕೊಡುವಂತೆ ಡಿಸಿಎಂ ಡಿಕೆಶಿ ಭೇಟಿಯಾಗಿರೋದು ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಅಸಮಾಧಾನಿತ ಶಾಸಕ ಸೋಮಶೇಖರ್​ ಮನತಣಿಸಲು ಬಿಜೆಪಿ ಸರ್ಕಸ್‌, ಬೆಂಬಲಿಗರಿಗೆ ‘ಸಮಸ್ಯೆ’ ಕೊಡ್ತಿದ್ದ ಇಬ್ಬರಿಗೆ ಪಕ್ಷದಿಂದ ಗೇಟ್‌ಪಾಸ್‌!

ಆಯನೂರು ಮಂಜುನಾಥ್ ಹೇಳುವುದೇನು?

ಬೆಂಗಳೂರಿನಲ್ಲಿ ಡಿಸಿಎಂ ಭೇಟಿಯಾಗಿರು ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆಯನೂರು ಮಂಜುನಾಥ್, ಈ ಹಿಂದೆಯೇ ನಾನು ಬಿಜೆಪಿ ಪಕ್ಷವನ್ನು ಬಿಡಬೇಕು ಎಂದು ತೀರ್ಮಾನಿಸಿದ್ದೆ. ಆದರೆ, ಆಗ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಅವಕಾಶವಿರಲಿಲ್ಲ. ಆ ಸಂದರ್ಭದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವಕಾಶ ನೀಡಿದ್ದರಿಂದ ಜೆಡಿಎಸ್ ಸೇರ್ಪಡೆಗೊಂಡಿದ್ದೆ. ಈ ಸಂದರ್ಭದಲ್ಲಿ ಸಹಜವಾಗಿಯೇ ಶಿವಮೊಗ್ಗ ರಾಜಕಾರಣದ ಬಗ್ಗೆ ಚರ್ಚೆಯಾಯಿತು. ಪಕ್ಷ ಸೇರ್ಪಡೆ ಬಗ್ಗೆ ಅಧ್ಯಕ್ಷರ ಜೊತೆ ಒಂದು ಹಂತದ ಮಾತುಕತೆಯಾಗಿದೆ. ನಾನು ವಿಧಾನ ಪರಿಷತ್ ಆಕಾಂಕ್ಷಿಯಾಗಿದ್ದೇನೆ, ಆದರೆ ಪಕ್ಷ ಸೇರ್ಪಡೆಯಾಗುವಾಗ ಯಾವುದೇ ಷರತ್ತನ್ನು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಈ ಕುರಿತು ಮುಂದಿನ ಬೆಳವಣಿಗೆಯ ಬಗ್ಗೆ ಕಾದು ನೋಡೋಣ ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ವೇಳೆ ಪಕ್ಷಾಂತರ ಕುರಿತು ಮಾತನಾಡಿದ ಅವರು, ಯಡಿಯೂರಪ್ಪರವರು ನಮ್ಮ ಹಿರಿಯ ನಾಯಕರು. ನನ್ನ ರಾಜಕೀಯ ಬದುಕಿನಲ್ಲಿ ಅವರ ಪಾತ್ರ ಬಹುದೊಡ್ಡದಿದೆ. ರಾಜಕಾರಣಿಯಾಗಿ ಮುಂದಿನ ಚುನಾವಣಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಚುನಾವಣೆ ಒಂದು ರೀತಿ ಯುದ್ಧವಿದ್ದಂತೆ ಅದನ್ನು ಗಮನದಲ್ಲಿಟ್ಟುಕೊಂಡೇ ಪಕ್ಷ ಬದಲಿದುತ್ತಿದ್ದೇನೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:48 pm, Sun, 20 August 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ