AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Devegowda: ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಅದ್ದೂರಿ ಅನಾವರಣ: ಆದರೆ ಮಾಜಿ ಪಿಎಂ ದೇವೇಗೌಡರ ಕಡೆಗಣನೆ- ಜೆಡಿಎಸ್​ ಕಿಡಿಕಿಡಿ

Kempegowda statue: ಚುನಾವಣೆ ದೃಷ್ಟಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ. ಪ್ರಧಾನಿ ಮೋದಿಯನ್ನು ರಾಜ್ಯ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ. ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ, ನಮ್ಮೆಲ್ಲರ ಆರಾಧ್ಯದೈವ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರ್ಕಾರ ಮರೆತು ಅಪಮಾನಿಸಿದೆ - ಜೆಡಿಎಸ್​ ಟ್ವೀಟ್​

HD Devegowda: ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಅದ್ದೂರಿ ಅನಾವರಣ: ಆದರೆ ಮಾಜಿ ಪಿಎಂ ದೇವೇಗೌಡರ ಕಡೆಗಣನೆ- ಜೆಡಿಎಸ್​ ಕಿಡಿಕಿಡಿ
ನಾಡಪ್ರಭುಗಳ ಪ್ರತಿಮೆ ಸ್ಥಾಪನೆ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರಕಾರ
TV9 Web
| Updated By: ಸಾಧು ಶ್ರೀನಾಥ್​

Updated on:Nov 11, 2022 | 4:02 PM

Share

ಬೆಂಗಳೂರು: ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು (Kempegowda statue) ಅದ್ದೂರಿಯಾಗಿ ಅನಾವರಣ ಮಾಡಲಾಗಿದೆ. ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರೇ ಉದ್ಘಾಟನೆ ಮಾಡಿದ್ದಾರೆ. ಈ ಮಧ್ಯೆ, ಪ್ರತಿಮೆ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರನ್ನು (HD Deve gowda) ಆಹ್ವಾನಿಸದಿರುವುದ್ದಕ್ಕೆ ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್​ (JDS) ಆಕ್ರೋಶ ವ್ಯಕ್ತಪಡಿಸಿದೆ.

ಕೆಂಪೇಗೌಡರ ಬಳಿಕ ಬೆಂಗಳೂರು ಅಭಿವೃದ್ಧಿಗೆ ಕೊಡುಗೆ ನೀಡಿದ್ದು ದೇವೇಗೌಡರು. ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ H.D.ದೇವೇಗೌಡರು. ದೇವೇಗೌಡರನ್ನು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಪ್ರತಿಮೆ ಕಾಮಗಾರಿಗೆ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರವು ಪ್ರತಿಮೆ ಅನಾವರಣ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ? ಸ್ಥಳೀಯ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಪ್ರಧಾನಿಗಳೇ ಬರುತ್ತಾರೆ ಅಂದ್ರೆ ಹೆಮ್ಮೆಯ ಮಾಜಿ ಪ್ರಧಾನಿಯನ್ನೂ ಅಧಿಕೃತವಾಗಿ ಕರೆಯಲೇಬೇಕಿತ್ತು. ಬಿಜೆಪಿಯವರು ರಾಜಕೀಯಕ್ಕಾಗಿ ಮಾಜಿ ಪ್ರಧಾನಿ ಕಡೆಗಣಿಸಿದ್ದಾರೆ. ಇದು ಮಾಜಿ ಪ್ರಧಾನಿಗೆ ಮಾತ್ರವಲ್ಲ, ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೆ ಮಾಡಿದ ಅಪಮಾನ ಎಂದು ಸರಣಿ ಟ್ವೀಟ್​ ಮೂಲಕ ಜೆಡಿಎಸ್​ (Janata Dal-S) ಕಿಡಿಕಾರಿದೆ.

ಚುನಾವಣೆ ದೃಷ್ಟಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ. ಪ್ರಧಾನಿ ಮೋದಿಯನ್ನು ರಾಜ್ಯ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ. ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ. ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ, ನಮ್ಮೆಲ್ಲರ ಆರಾಧ್ಯದೈವ. ಬೆಂಗಳೂರು ನಗರ ನಮ್ಮೆಲ್ಲರದ್ದು, ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರ್ಕಾರ ಮರೆತು ಅಪಮಾನಿಸಿದೆ ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್​ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಕಾಯಕದ ಜೊತೆ ಜ್ಞಾನವೂ ಇರಬೇಕೆಂಬುದಕ್ಕೆ ಪ್ರಧಾನಿ ಮೋದಿ ಉದಾಹರಣೆ; ನಿರ್ಮಲಾನಂದನಾಥ ಸ್ವಾಮೀಜಿ ಬಣ್ಣನೆ

ಜೆಡಿಎಸ್​ ಟ್ವೀಟ್ ಸಾರಾಂಶ ಹೀಗಿದೆ:

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? 2/7

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.3/7

ರಾಜ್ಯ @BJP4Karnataka ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ.4/7

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ @narendramodi ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.5/7

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.6/7

ಕೆಂಪೇಗೌಡರು @BJP4India ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ.7/7

Published On - 3:57 pm, Fri, 11 November 22

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು