ಬೆಳಗಾವಿ: ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ (KR Ramesh Kumar) ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್ ಕುಮಾರ್ (KR Ramesh Kumar) ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಅತಿವೃಷ್ಟಿ ಬಗ್ಗೆ ಸದನದಲ್ಲಿ ನಿಯಮ 69ರಡಿ ಚರ್ಚೆ ನಡೆಯುತ್ತಿದ್ದ ವೇಳೆ, ಅತ್ಯಾಚಾರ ಆದಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ರಮೇಶ್ ಕುಮಾರ್ (KR Ramesh Kumar) ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನಮಗೆ ಇರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ವಿಷಾದಿಸುವೆ. ದೇಶದ ಮಹಿಳೆಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ. ಮುಕ್ತ ಮನಸ್ಸಿನಿಂದ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ವಿಧಾನಸಭೆಯಲ್ಲಿ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ರಮೇಶ್ ಕುಮಾರ್ಗೆ ಮಾತನಾಡಲು ಸೂಚಿಸಿದ ಸ್ಪೀಕರ್
ಹೆಣ್ಣಿಗೆ ಅಪಮಾನಿಸುವ, ಲಘುವಾಗಿ ಮಾತಾಡುವ ಉದ್ದೇಶ ಇಲ್ಲ. ವಿಷಾದ ವ್ಯಕ್ತಪಡಿಸಲು ನನಗೆ ಯಾವುದೇ ರೀತಿಯ ಪ್ರತಿಷ್ಠೆ ಇಲ್ಲ. ಗ್ರಹಚಾರಕ್ಕೆ ಸ್ಪೀಕರ್ ನನ್ನ ಹೆಸರು ಹೇಳಿದಾಗ ಪ್ರತಿಕ್ರಿಯಿಸಿದ್ದೆ. ಹೆಸರಾಂತ ಇಂಗ್ಲಿಷ್ ಚಿಂತಕರ ಹೇಳಿಕೆಯನ್ನು ಉಲ್ಲೇಖಿಸಿದ್ದೆ ಅಷ್ಟೇ. ಈ ವಿಚಾರಕ್ಕೆ ಇಲ್ಲಿಗೇ ಅಂತ್ಯ ಹಾಡಿ ಕಲಾಪ ಮುಂದುವರಿಸೋಣ. ಇನ್ನು ಈ ವಿಚಾರವಾಗಿ ಕಲಾಪ ಹಾಳು ಮಾಡುವುದು ಬೇಡ. ಹೀಗಾಗಿ ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತಿದ್ದೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.
I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!
— K. R. Ramesh Kumar (@KRRameshKumar1) December 16, 2021
ಗುರುವಾರ ಸದನದಲ್ಲಿ ಹೇಳಿದ್ದೇನು?
ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಈ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕರು. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ 6 ಗಂಟೆಯವರೆಗೆ ಸಮಯ ಕೊಡುತ್ತೇನೆ ಎಂದು ಸ್ಪೀಕರ್ ಹೇಳಿದ್ದರು.
‘ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನನಗೆ ಸದನದ ಬ್ಯುಸಿನೆಸ್ ನಡೆಯುವುದು ಮುಖ್ಯ. ಇದು ನಿಮ್ಮದೇ ಸದನ, ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್ದ ಸಿಚುಯೇಷನ್ ಅನ್ನೋ ರೀತಿ ಆಗಿದೆ ರಮೇಶ್ ಕುಮಾರ್ ಅವರೇ’ ಎಂದು ಹೇಳಿದರು. ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಎದ್ದುನಿಂತು ಪ್ರತಿಕ್ರಿಯಿಸಿದ ರಮೇಶ್ಕುಮಾರ್, ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದರು. ಶಾಸಕ ರಮೇಶ್ ಕುಮಾರ್ ಮಾತಿಗೆ ಸ್ಪೀಕರ್ ಕಾಗೇರಿ ನಕ್ಕರು.
Congress Party disapproves the exchange of highly objectionable & insensitive banter between Karnataka Assembly Speaker & Sr. Congress MLA in the House.
Speaker as custodian & Sr legislators are expected to be role models & should desist from such unacceptable behaviour.
— Randeep Singh Surjewala (@rssurjewala) December 17, 2021
ಸದನದಲ್ಲಿ ರಮೇಶ್ ಕುಮಾರ್ ಹೇಳಿಕೆಗೆ ಸುರ್ಜೆವಾಲ ಅಸಮಾಧಾನ
ಕರ್ನಾಟಕ ವಿಧಾನಸಭೆ ಸ್ಪೀಕರ್ ಮತ್ತು ವರಿಷ್ಠರ ನಡುವಿನ ಮಾತು ಅತ್ಯಂತ ಆಕ್ಷೇಪಾರ್ಹ. ಸಂವೇದನಾಶೀಲ ರಹಿತ ಸಂವಾದವನ್ನು ಕಾಂಗ್ರೆಸ್ ಪಕ್ಷವು ಒಪ್ಪುವುದಿಲ್ಲ. ಸ್ಪೀಕರ್ ಮತ್ತು ಹಿರಿಯ ಶಾಸಕರು ಮಾದರಿಯಾಗಬೇಕು. ಸ್ವೀಕಾರಾರ್ಹವಲ್ಲದ ನಡವಳಿಕೆಯನ್ನು ತಪ್ಪಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲ ಟ್ವೀಟ್ ಮಾಡಿ ರಮೇಶ್ ಕುಮಾರ್ ಹೇಳಿಕೆಗೆ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ:
ನಾವು ಬೀಫ್ ರಪ್ತು ಮಾಡಿದರೆ ಲಾಭ ಆಗುತ್ತಲ್ವಾ: ಗೋಹತ್ಯೆ ಬಗ್ಗೆ ವಿಧಾನಸಭೆಯಲ್ಲಿ ರಮೇಶ್ ಕುಮಾರ್ ಮಾತು
ಸುದ್ದಿ ವಿಶ್ಲೇಷಣೆ | ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಕಾಂಗ್ರೆಸ್ ಶಾಸಕರನ್ನು ವಿಚಲಿತಗೊಳಿಸಿದ ಡಿ.ಕೆ. ಶಿವಕುಮಾರ್
ರಮೇಶ್ ಕುಮಾರ್ ಹೇಳಿಕೆ ಖಂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ:
Published On - 11:21 am, Fri, 17 December 21