ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಘೋಷಣೆ ಸಾಧ್ಯತೆ

| Updated By: ರಶ್ಮಿ ಕಲ್ಲಕಟ್ಟ

Updated on: Jun 21, 2022 | 2:05 PM

ಟಿಎಂಸಿಯಲ್ಲಿ ಮಮತಾ ಜೀ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿರೋಧ ಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ...

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಘೋಷಣೆ ಸಾಧ್ಯತೆ
ಯಶವಂತ್ ಸಿನ್ಹಾ
Image Credit source: Deccanherald
Follow us on

ದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ (Presidential polls) ವಿರೋಧ ಪಕ್ಷಗಳ  ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ(Yashwant Sinha) ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಊಹಾಪೋಹಕ್ಕೆ ಪುಷ್ಠಿ ನೀಡುವಂತೆ ಮಂಗಳವಾರ ಬೆಳಗ್ಗೆ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ. “ಟಿಎಂಸಿಯಲ್ಲಿ ಮಮತಾ ಜೀ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿರೋಧ ಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ಅವರು ಈ ಹೆಜ್ಜೆಯನ್ನು ಅನುಮೋದಿಸುತ್ತಾರೆ ಎಂದು ನನಗೆ ಖಾತ್ರಿಯಿದೆ ”ಎಂದು 84ರ ಹರೆಯದ ಸಿನ್ಹಾ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಿನ್ಹಾ ಅವರಲ್ಲಿ ಹಿಂದೂಸ್ತಾನ್ ಟೈಮ್ಸ್ ಕೇಳಿದಾಗ ತಮ್ಮ ಟ್ವೀಟ್‌ ಬಗ್ಗೆ ಹೆಚ್ಚಿಗೆ ಹೇಳಲು ಬಯಸುವುದಿಲ್ಲ ಎಂದು ಹೇಳಿದರು. ಆದರೆ, ಅವರನ್ನು ವಿಪಕ್ಷಗಳ ಆಯ್ಕೆ ಎಂದು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸಿವೆ. ಭಾರತದ ಹಣಕಾಸು ಮತ್ತು ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿರುವ ಯಶವಂತ್ ಸಿನ್ಹಾ ಅವರು ತೃಣಮೂಲ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿದ್ದಾರೆ. 2018ರಲ್ಲಿ ಅವರು ಬಿಜೆಪಿ ತೊರೆದಿದ್ದರು. ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶನಗೊಳ್ಳಲು ನಿರಾಕರಿಸಿದ ಒಂದು ದಿನದ ನಂತರ, ಮಂಗಳವಾರದಂದು ಶರದ್ ಪವಾರ್ ಅವರ ನಿವಾಸದಲ್ಲಿ ವಿಪಕ್ಷ ನಾಯಕರು ರಾಷ್ಟ್ರಪತಿ ಚುನಾವಣೆಯ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿರುವ ಹೊತ್ತಲ್ಲೇ ಸಿನ್ಹಾ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ಹಿಂದೆ, ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿಪಕ್ಷಗಳ ಮನವಿ ನಿರಾಕರಿಸಿದ್ದರು.

ಸೋಮವಾರ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷದ ನಾಯಕರು ಚರ್ಚಿಸಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.

ಇದನ್ನೂ ಓದಿ
ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಲು ನಿರಾಕರಿಸಿದ ಫಾರೂಕ್ ಅಬ್ದುಲ್ಲಾ
ರಾಷ್ಟ್ರಪತಿ ಚುನಾವಣೆಗೆ ಹೆಚ್.ಡಿ. ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ: ಹೆಚ್​​.ಡಿ ಕುಮಾರಸ್ವಾಮಿ ಸ್ಪಷ್ಟನೆ
Presidential Poll 2022: ಮೊದಲ ದಿನ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, 1 ತಿರಸ್ಕೃತ
ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ನನ್ನ ಸೇವೆಯನ್ನು ಮುಂದುವರಿಸಲು ಸಂತೋಷವಾಗಿದೆ: ಶರದ್ ಪವಾರ್

ಏತನ್ಮಧ್ಯೆ, ಅಜೆಂಡಾದಲ್ಲಿ ಒಂದು ವಾರದಲ್ಲಿ ಇದು ಎರಡನೇ ವಿಪಕ್ಷ ಸಭೆಯಾಗಿದೆ. ಕಳೆದ ವಾರ 22 ಬಿಜೆಪಿಯೇತರ ನಾಯಕರನ್ನು ಆಹ್ವಾನಿಸಿದ ನಂತರ ಮಾತುಕತೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿದ್ದರು. ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆಸಲು ಶರದ್ ಪವಾರ್ ಅವರ ಎನ್‌ಸಿಪಿ, ತೃಣಮೂಲ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಜೂನ್ 15 ರಂದು ಸಭೆ ನಡೆಸಿದ್ದವು.

ಮಂಗಳವಾರದ ಸಭೆಯಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರನ್ನೂ ಆಹ್ವಾನಿಸಲಾಗಿದೆ. “ಮುಂಬರುವ ರಾಷ್ಟ್ರಪತಿ ಚುನಾವಣೆಗಳ ಕುರಿತು ಚರ್ಚಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬ್ಯಾರಿಸ್ಟರ್ ಅಸಾದುದ್ದೀನ್ ಓವೈಸಿಯನ್ನು ಸಭೆಗೆ ಆಹ್ವಾನಿಸಿದ್ದಾರೆ. ಓವೈಸಿ ಅವರು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಪವಾರ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.ಸಭೆಯಲ್ಲಿ ಎಐಎಂಐಎಂ ಪ್ರತಿನಿಧಿಸಲು ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ ಅವರನ್ನು ನಿಯೋಜಿಸಿದ್ದಾರೆ” ಎಂದು ಎಐಎಂಐಎಂ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ವಾರ, ತನಗೆ ಆಹ್ವಾನ ಬಂದಿಲ್ಲ ಹಾಗಾಗಿ ಕಾಂಗ್ರೆಸ್ ಸಭೆಯಲ್ಲಿ ಹಾಜರಾಗಿಲ್ಲ ಎಂದಿದ್ದರು ಓವೈಸಿ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:25 pm, Tue, 21 June 22