AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ಗೆ ಫುಲ್ ಡಿಮ್ಯಾಂಡ್, 8 ನಾಯಕರಿಂದ ಹೆಸರು ನೋಂದಣೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲು ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಅದರಲ್ಲೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ಗಾಗಿ ಬೇಡಿಕೆ ಹೆಚ್ಚಾಗಿದೆ. ಬರೋಬ್ಬರಿ 8 ಜನ ನಾಯಕರು ತಮಗೆ ಟಿಕೆಟ್​ ನೀಡಬೇಕೆಂದು ವೀಕ್ಷಕರ ಬಳಿ ಹೆಸರು ನೋಂದಣಿ ಮಾಡಿದ್ದಾರೆ. ಹಾಗಾದ್ರೆ, ಯಾರೆಲ್ಲ ಹೆಸರು ನೋಂದಾಯಿಸಿದ್ದಾರೆ ಎನ್ನುವ ವಿವರ ಇಲ್ಲಿದೆ.​

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ಗೆ ಫುಲ್ ಡಿಮ್ಯಾಂಡ್, 8 ನಾಯಕರಿಂದ ಹೆಸರು ನೋಂದಣೆ
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 12, 2023 | 5:52 PM

Share

ಮೈಸೂರು, (ನವೆಂಬರ್ 12): ಲೋಕಸಭಾ ಚುನಾವಣೆಗೆ (Loksabha Elections 2024) ಮೂರು ಪಕ್ಷಗಳಲ್ಲಿ ತಂತ್ರ-ರಣತಂತ್ರಗಳೇ ರೆಡಿಯಾಗುತ್ತಿವೆ. ಅದರಲ್ಲೂ ಕಾಂಗ್ರೆಸ್​ ವಿರೋಧ ಪಕ್ಷಗಳಿಗಿಂತ ಒಂದೆಜ್ಜೆ ಮುಂದೆ ಇದ್ದು, ಈಗಾಗಲೇ ಸಂಭವ್ಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಇದಕ್ಕೆ ಈ ಹಿಂದೆಯೇ 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿದ್ದು, ಒಂದೊಂದು ಕ್ಷೇತ್ರದಿಂದ ಸೂಕ್ತ ಮೂರ್ನಾಲ್ಕು ಅಭ್ಯರ್ಥಿಗಳ ಹೆಸರುಗಳನ್ನು ತರುವಂತೆ ಸೂಚಿಸಲಾಗಿದೆ. ಆದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಸಭಾ (mysore kodagu lok sabha)ಕ್ಷೇತ್ರ ಟಿಕೆಟ್​ಗಾಗಿ ಫುಲ್ ಡಿಮ್ಯಾಂಡ್ ಶುರುವಾಗಿದೆ.

ಹೌದು…ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಬರೋಬ್ಬರಿ 14 ಜನರಿಂದ ಟಿಕೆಟ್ ಗಾಗಿ ಹೆಸರು ನೋಂದಣಿ ಮಾಡಿಸಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕ, ಸಚಿವ ಬೈರತಿ ಸುರೇಶ್ ಬಳಿ ಟಿಕೆಟ್ ಆಕಾಂಕ್ಷಿಗಳು ತಮ್ಮ ಹೆಸರು ನೊಂದಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಕ್ಸಸ್ ನಂತರ ಟಿಕೆಟ್ ಗಾಗಿ ಬೇಡಿಕೆ ಹೆಚ್ಚಾಗಿದೆ.

ಇದನ್ನೂ ಓದಿ: ಸದಾನಂದಗೌಡ ನಿವೃತ್ತಿ: ಬೆಂಗಳೂರು ಉತ್ತರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಇಲ್ಲಿವೆ ಕೆಲ ಹೆಸರುಗಳು

ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜೆ.ಜೆ.ಆನಂದ್, ಡಾ.ಸುಶ್ರುತ್ ಗೌಡ, ವರುಣ ಮಹೇಶ್, ಹಿರಿಯ ವಕೀಲ ಚಂದ್ರಮೌಳಿ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ಗಾಗಿ ಹೆಸರು ನೋಂದಾಯಿಸಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರ ಹೆಸರು ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

ಯಾಕಂದ್ರೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟು ಕೊಟ್ಟಿದ್ದರಿಂದ ಅವರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಚರ್ಚೆಗಳು ಶುರುವಾಗಿವೆ. ಕ್ಷೇತ್ರ ತ್ಯಾಗ ಮಾಡಿಕೊಟ್ಟಿದ್ದರಿಂದ ಯತೀಂದ್ರ ಅವರಿಗೆ ಮೈಸೂರು-ಕೊಡಗು ಲೋಕಸಭಾ ಟಿಕೆಟ್​ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು ಯತೀಂದ್ರ ಸಹ ಹೈಕಮಾಂಡ್ ಒಪ್ಪಿದರೆ ಸ್ಪರ್ಧಿಸುವ ಮೂಲಕ ಈಗಾಗಲೇ ರೆಡಿ ಎನ್ನುವ ಸಂದೇಶ ಕೊಟ್ಟಾಗಿದೆ. ಇದರ ಮಧ್ಯೆ ಹಲವರ ಹೆಸರುಗಳು ಓಡಾಡುತ್ತಿದ್ದ, ಅಂತಿಮವಾಗಿ ಕಾಂಗ್ರೆಸ್ ಟಿಕೆಟ್ ಯಾರ ಪಾಲಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಈ ಬಾರಿ ಕರ್ನಾಟಕದಲ್ಲಿ ನರೇಂದ್ರ ಮೋದಿ ವರ್ಚಸ್ಸು ಅಷ್ಟಾಗಿ ಇಲ್ಲ. ಅಲ್ಲದೇ ಆಡಳಿತ ವಿರೋಧಿ ಅಲೆ ಇದೆ. ಮುಖ್ಯವಾಗಿ ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳು, ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿರುವುದರಿಂದ ಅಭ್ಯರ್ಥಿಗಳು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಲೋಕಸಭಾ ಕಾಂಗ್ರೆಸ್​ ಟಿಕೆಟ್​ಗಾಗಿ ನಾಯಕರು ಪೈಪೋಟಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Sun, 12 November 23