Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್

ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದೆ.

ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್
ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ಜೊತೆ ಸಚಿವ ಎಂ.ಬಿ ಪಾಟೀಲ್ ಸಭೆ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 01, 2023 | 4:28 PM

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ (Foxconn) 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡಗಳ ಭೇಟಿ ಬಳಿಕ ಅವರು ಮಾತನಾಡಿದರು.

ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ. ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದರು.

ಕಂಪನಿಯು ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?

ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡುವುದಾಗಿಯೂ ಅವರು ತಿಳಿಸಿದರು.

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯನವರ ಸಲಹೆಗಾರರಾಗಿ ಚುನಾವಣಾ ಚಾಣಾಕ್ಷ ಸುನೀಲ್ ಕನುಗೋಲು ನೇಮಕ: ಯಾರು ಇವರು?

ಜುಬಿಲಿಯಂಟ್ ಫುಡ್ ವರ್ಕ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್ ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್ ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿದ್ದರು.

ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಇದ್ದರು. ಕಂಪನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Thu, 1 June 23

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ