ಮತ್ತೆ ಬಿಜೆಪಿಗೆ ಸೇರುತ್ತಾರಾ ಜನಾರ್ದನ್ ರೆಡ್ಡಿ? ಸುಳಿವು ನೀಡಿದ ಕೆಆರ್ಪಿಪಿ ಸ್ಥಾಪಕ
ಕೆಆರ್ಪಿಪಿ ಸಂಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ಬಿಜೆಪಿಗೆ ಸೇರ್ಪಡೆಯಾಗುವ ಸ್ವತಃ ಶಾಸಕ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಜನಾರ್ದನ್ ರೆಡ್ಡಿ ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.
ಮಂಡ್ಯ, ಜನವರಿ 29: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗಳು ಆಗುತ್ತಿವೆ. ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಇದೀಗ ಕಮಲ ಮನೆಗೆ ಮರಳಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಮರಳಿ ಗೂಡಿಗೆ ಕರೆತರುವಲ್ಲಿ ರಾಜ್ಯ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಕೆಆರ್ಪಿಪಿ ಸಂಸ್ಥಾಪಕ, ಶಾಸಕ ಜನಾರ್ದನ ರೆಡ್ಡಿಯನ್ನು (Gali Janardhana Reddy) ಕೂಡ ಬಿಜೆಪಿಗೆ ಸೇರಿಸಿಕೊಳ್ಳಲು ಸದ್ದಿಲ್ಲದೇ ಆಪರೇಷನ್ ನಡೆಯುತ್ತಿದೆ. ಇನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಕೂಡ ಬಿಜೆಪಿಗೆ ಸೇರುವ ಬಗ್ಗೆ ಪರೋಕ್ಷವಾಗಿ ಹೇಳಿಕೆ ನೀಡುತ್ತಿದ್ದಾರೆ.
ಹೌದು, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ದರಿದ್ದೇವೆ ಎಂದು ಇತ್ತೀಚಿಗೆ ಹೇಳಿದ್ದ ಜನಾರ್ದಾನ ರೆಡ್ಡಿ, ಇದೀಗ ಮತ್ತೊಂದು ಸುಳಿವು ನೀಡಿದ್ದಾರೆ. ಅದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇವೆ. ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ.
ಜರ್ನಾದನ ರೆಡ್ಡಿ ಬಿಜೆಪಿ ಸೇರ್ಪಡೆ: ಯಡಿಯೂರಪ್ಪ ಸುಳಿವು
ಕೆಆರ್ಪಿಸಿ ಸಂಸ್ಥಾಪಕ, ಶಾಸಕ ಜನಾರ್ದನ ರೆಡ್ಡಿಯನ್ನ ಮರಳಿ ಬಿಜೆಪಿಗೆ ಕರೆತರಲು ತೆರೆಮರೆ ಪ್ರಯತ್ನಗಳು ನಡೆದಿದ್ದು, ಗೆಳೆಯ ಶ್ರೀರಾಮುಲು ಮೂಲಕ ರೆಡ್ಡಿ ಘರವಾಪ್ಸಿ ಮಾಡುತ್ತಾರೆ ಎನ್ನುವ ಚರ್ಚೆಗಳು ನಡೆದಿವೆ. ರೆಡ್ಡಿ ವಾಪಸ್ ಬಿಜೆಪಿಗೆ ಆಗಮನವಾಗುತ್ತಿರುವ ಬಗ್ಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ್ದರು.
ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್ಪಿಪಿ ಸ್ಥಾಪಕ?
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ವಾಪಸ್ ಆಗುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ಸಾಕಷ್ಟು ಜನ ಬಿಜೆಪಿಗೆ ಮತ್ತೆ ವಾಪಸ್ ಬರುತ್ತಿದ್ದಾರೆ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಯಾರು ಪಕ್ಷವನ್ನು ಬಿಟ್ಟು ಹೋಗಿದ್ದಾರೋ ಅವರು ಮತ್ತೆ ಪಕ್ಷ ಸೇರ್ಪಡೆಯಾಗುತ್ತಾರೆ. ಬಿಜೆಪಿಗೆ ಹೊಸಬರು ಕೂಡ ಬರುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.
ಕೊಪ್ಪಳ ಕ್ಷೇತ್ರದಿಂದ ರೆಡ್ಡಿ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಚಿಂತನೆ
ಕೆಆರ್ಪಿಪಿ ಪಕ್ಷವನ್ನು ಬಿಜೆಪಿಯ ಜೊತೆ ವಿಲೀನ ಮಾಡಿಕೊಂಡು ಕೊಪ್ಪಳ ಕ್ಷೇತ್ರದಿಂದ ರೆಡ್ಡಿ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಚಿಂತಿಸಿದೆ. ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಪರವಾದ ಅಭಿಪ್ರಾಯ ಹೊಂದಿದ್ದ ಜನಾರ್ದನ ರೆಡ್ಡಿ, ಇತ್ತೀಚೆಗೆ ಅದೇ ಅಭಿಪ್ರಾಯವನ್ನು ಉಳಿಸಿಕೊಂಡಿಲ್ಲ. ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ಅಭಿಪ್ರಾಯವನ್ನೂ ಜನಾರ್ದನ ರೆಡ್ಡಿ ವ್ಯಕ್ತಪಡಿಸಿದ್ದರು. ಅದನ್ನು ಬಹಿರಂಗವಾಗಿಯೂ ಹೇಳಿಕೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲಿ ಕೆಆರ್ ಪಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಉದ್ದೇಶಿಸಿದ್ದರು. ಅನಂತರದ ಬೆಳವಣಿಗೆಯಲ್ಲಿ ಮತ್ತೆ ಪಕ್ಷಕ್ಕೆ ಸೆಳೆಯುವ ಸಂಬಂಧ ಪ್ರಯತ್ನ ನಡೆದಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರ ಇನ್ನೂ ಜನಾರ್ದನ ರೆಡ್ಡಿ ಜೊತೆ ಚರ್ಚೆ ನಡೆಸಿಲ್ಲ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:33 am, Mon, 29 January 24