ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಹೆಚ್ಚಿನ ಪ್ರೋತ್ಸಾಹ ಕೊಡುತ್ತದೆ: ಪರಮೇಶ್ವರ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾಂಪ್ರದಾಯಿಕ ಮತಬ್ಯಾಂಕ್ ಆಗಿರುವ ಅಲ್ಪಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದ್ದು, ಅಲ್ಪಸಂಖ್ಯಾತರಿಗೆ ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರವಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಟೀಕಿಸಿದ್ದರು. ಈ ಬಗ್ಗೆ ಮಾತನಾಡಿದ ರಾಜ್ಯ ಗೃಹ ಸಚಿವ ಪರಮೇಶ್ವರ್, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದವರು ಹೆಚ್ಚಿನ ಪ್ರೋತ್ಸಾಹ ಕೊಡುತ್ತೇವೆ ಎಂದಿದ್ದಾರೆ.

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಹೆಚ್ಚಿನ ಪ್ರೋತ್ಸಾಹ ಕೊಡುತ್ತದೆ: ಪರಮೇಶ್ವರ್
ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಹೆಚ್ಚಿನ ಪ್ರೋತ್ಸಾಹ ಕೊಡುತ್ತದೆ ಎಂದ ಪರಮೇಶ್ವರ್
Edited By:

Updated on: Feb 18, 2024 | 6:36 PM

ಹಾವೇರಿ, ಫೆ.18: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದವರು ಹೆಚ್ಚಿನ ಪ್ರೋತ್ಸಾಹ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwar) ಹೇಳಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾಂಪ್ರದಾಯಿಕ ಮತಬ್ಯಾಂಕ್ ಆಗಿರುವ ಅಲ್ಪಸಂಖ್ಯಾತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದ್ದು, ಅಲ್ಪಸಂಖ್ಯಾತರಿಗೆ ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರವಿದೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಇದನ್ನು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಟೀಕಿಸಿದ್ದರು.

ಈ ಬಗ್ಗೆ ಹಾವೇರಿಯಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ಜನರು ಈ ದೇಶದ ಮೂಲ ನಿವಾಸಿಗಳ ಬಗ್ಗೆ ಮಾತನಾಡಿದ್ದಾರೆ. ದಲಿತರು, ಹಿಂದುಳಿದವರು, ಮೂಲ‌ನಿವಾಸಿಗಳು ಅಂತಾ ವ್ಯಾಖ್ಯಾನಿಸಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದೆ ಇರುವವರು ಹಿಂದುಳಿದವರು. ದೇಶದಲ್ಲಿ 16% ರಿಂದ 18% ಅಲ್ಪಸಂಖ್ಯಾತರಿದ್ದಾರೆ, ಅವರು ಹಿಂದುಳಿದವರು ಎಂದರು.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ: ಸಂತೋಷ್ ಲಾಡ್

ಅಲ್ಲದೆ, ಸಂವಿಧಾನದ ಆಶಯಗಳಂತೆ ಅವಕಾಶ ಸಿಗಬೇಕೆಂಬುದು ಕಾಂಗ್ರೆಸ್​ನ ನೀತಿಯಾಗಿದೆ. 1885ರಲ್ಲಿ ರಚಿಸಿರುವ ನಮ್ಮ ನೀತಿಗಳು ಇನ್ನೂ ಬದಲಾಗಿಲ್ಲ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದವರು ಹೆಚ್ಚಿನ ಪ್ರೋತ್ಸಾಹ ಕೊಡುತ್ತೇವೆ. ಆ ಸಮುದಾಯಗಳಿಗೆ ಹೆಚ್ಚು ಪ್ರೋತ್ಸಾಹ ಕೊಡುತ್ತೇವೆ ಎಂದರು.

ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ಸಂತೋಷ್ ಲಾಡ್ ಹೇಳಿಕೆಯನ್ನು ಆರೋಪ ಅಂತಾ ಯಾಕೆ ಅಂತೀರಿ? ಸಚಿವ ಸಂತೋಷ್ ಲಾಡ್ ವಸ್ತುಸ್ಥಿತಿ ಹೇಳಿದ್ದಾರೆ. ಹೀಗಾಗಿ ಕಾರ್ಮಿಕ ಸಚಿವರ ಹೇಳಿಕೆ ಆರೋಪ ಅನ್ನೋದು ಸರಿಯಲ್ಲ ಎಂದು ಹೇಳುವ ಮೂಲಕ ಸಂತೋಷ್ ಲಾಡ್ ಹೇಳಿಕೆಯನ್ನು ಸಮರ್ಧಿಸಿಕೊಂಡರು.

ಶಿರಾಳ್ ಕೊಪ್ಪದಲ್ಲಿ ಬಸ್​ನಲ್ಲಿ ಸ್ಫೋಟ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದರು. ಹಾನಗಲ್ ಗ್ಯಾಂಗ್ ರೇಪ್ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಾಕಷ್ಟು ಚರ್ಚೆ ಆಗಿದ್ದಾವೆ. ಸದನಲ್ಲಿಯೂ ಚರ್ಚೆ ಆಗಿದೆ. ಉತ್ತರ ಕೊಡುತ್ತೇನೆ. ಪೊಲೀಸರು ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಸುಪ್ರೀಂ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲ: ಸಂತೋಷ್ ಲಾಡ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಕಾಂಗ್ರೆಸ್​ನಲ್ಲಿ ಡಿಸಿಎಂ ಹುದ್ದೆಗಾಗಿ ಪೈಫೋಟಿ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ಈ ಬ್ಗೆ ಹೈಕಮಾಂಡ್​ಗೆ ಗೊತ್ತಿದೆ. ಗೊತ್ತಿಲ್ಲದೇನಿಲ್ಲ. ಹೈಕಮಾಂಡ್ ತಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಿರಬೇಕು ಎಂದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ವಿಚಾರವಾತಿ ಮಾತನಾಡಿದ ಪರಮೇಶ್ವರ್, ಹಗಲು ಗನಸು ಅಂತ ಕೇಳಿದೀರಾ? ಅದಕ್ಕೆ ಡೇ ಡ್ರೀಮಿಂಗ್ ಅಂತಾರೆ. ಕನಸು ಕಾಣಲಿ ನಾವು ಆಡಳಿತ ಮಾಡುತ್ತಾ ಇರುತ್ತೇವೆ. ಕಾಂಗ್ರೆಸ್​ನಲ್ಲಿಯೂ ಬೇಕಾದಷ್ಟು ಜನ ಅಭ್ಯರ್ಥಿ ಇದ್ದಾರೆ. ಅಭ್ಯರ್ಥಿ ಕೊರತೆ ಇಲ್ಲ. ಸ್ಪರ್ಧೆಗೆ ಯಾರೂ ಹಿಂದೇಟು ಹಾಕುತ್ತಿಲ್ಲ ಎಂದರು.

ವರದಿ: ಅಣ್ಣಪ್ಪ ಬರ್ಕಿ, ಟಿವಿ9 ಹಾವೇರಿ

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ