ಜನರಿಗೆ ಉಚಿತವಾಗಿ ಕೊಡುವುದು ನನ್ನ ಅನಿಸಿಕೆಯಲ್ಲಿ ಲಂಚ: ಲೋಕಾಯುಕ್ತ ನಿವೃತ್ತ ನ್ಯಾ ಸಂತೋಷ್ ಹೆಗ್ಡೆ

ಕಾಂಗ್ರೆಸ್ ಸರ್ಕಾರದಿಂದ ಉಚಿತ ಗ್ಯಾರಂಟಿ ಯೋಜನೆಯ ಪರಿಣಾಮ ಖಂಡಿತ ಮುಂದಿನ 6 ತಿಂಗಳಲ್ಲಿ ಕಾಣುತ್ತೇವೆ. ಜನರಿಗೆ ಉಚಿತವಾಗಿ ಕೊಡುವುದು ನನ್ನ ಅನಿಸಿಕೆಯಲ್ಲಿ ಲಂಚ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ಜನರಿಗೆ ಉಚಿತವಾಗಿ ಕೊಡುವುದು ನನ್ನ ಅನಿಸಿಕೆಯಲ್ಲಿ ಲಂಚ: ಲೋಕಾಯುಕ್ತ ನಿವೃತ್ತ ನ್ಯಾ ಸಂತೋಷ್ ಹೆಗ್ಡೆ
ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Edited By:

Updated on: Jul 02, 2023 | 3:52 PM

ಮಂಡ್ಯ: ಕಾಂಗ್ರೆಸ್ ಸರ್ಕಾರದಿಂದ ಉಚಿತ ಗ್ಯಾರಂಟಿ ಯೋಜನೆಯ ಪರಿಣಾಮ ಖಂಡಿತ ಮುಂದಿನ 6 ತಿಂಗಳಲ್ಲಿ ಕಾಣುತ್ತೇವೆ. ಜನರಿಗೆ ಉಚಿತವಾಗಿ ಕೊಡುವುದು ನನ್ನ ಅನಿಸಿಕೆಯಲ್ಲಿ ಲಂಚ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (Santosh Hegde) ಹೇಳಿದರು. ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಚಿತ ಗ್ಯಾರಂಟಿ ಯೋಜನೆಗಳಿಂದ ಕುಟುಂಬಗಳಲ್ಲಿ ಅತ್ತೆ ಸೊಸೆ‌ ನಡುವೆ ಜಗಳ ಆಗಬಹುದು. ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಗಂಭೀರವಾಗುತ್ತೆ ಎಂದು ಅಭಿಪ್ರಾಯಪಟ್ಟರು.

ಜನಪ್ರತಿನಿಧಿಗಳು ಲಾಭಕ್ಕಿಂತ‌ ಜನರ ಸೇವೆಯನ್ನು ಮಾಡಬೇಕು. ಮತ ಹಾಕುವವರು ಕೂಡ ದೇಶಸೇವೆ ಮಾಡುವವರಿಗೆ ಹಾಕಬೇಕು ಎಂದು ಕಿವಿಮಾತು ಹೇಳಿದರು.

ಇದ್ನೂ ಓದಿ: ಕೇಂದ್ರ ಸರ್ಕಾರ ಧಾರವಾಡ ಜಿಲ್ಲೆಗೆ 1400 ರೂ. ಅನುದಾನ ನೀಡಿದೆ: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ತನಿಖಾ ಸಂಸ್ಥೆಗಳು ಸರ್ಕಾರದ ಕಪಿಮುಷ್ಠಿಯಲ್ಲಿವೆ

ತಹಶೀಲ್ದಾರ್ ಅಜಿತ್​ ರೈ ಮನೆ ಮೇಲೆ ಲೋಕಾಯುಕ್ತ ದಾಳಿ ಕೇಸ್​ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರಗಳು ತನಿಖಾ ಸಂಸ್ಥೆಗಳನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುತ್ತವೆ. ದೊಡ್ಡ ದೊಡ್ಡ ಅಧಿಕಾರಿಗಳ ಮನೆಗಳ ಮೇಲೆ ರೇಡ್ ಮಾಡಬೇಕು ಎಂದರು.

ಮತದಾರರನ್ನ ಮಂಕುಗೊಳಿಸುವ ಒಂದು ಪ್ರಯತ್ನ

ಹಿಂದಿನ ಸರ್ಕಾರಗಳ ಹಗರಣಗಳ ತನಿಖೆ ವಿಳಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮತದಾರರನ್ನ ಮಂಕುಗೊಳಿಸುವ ಒಂದು ಪ್ರಯತ್ನ. ಆಡಿದ ಮಾತನ್ನ ಪೂರೈಸಬೇಕು. ಯಾರು ಮೋಸ ಮಾಡಿದ್ದಾರೆ ಅವರನ್ನ ಕೋರ್ಟ್ ಮೆಟ್ಟಿಲು ಹತ್ತಿಸಬೇಕು.

ಇದನ್ನೂ ಓದಿ: Gruha Lakshmi Scheme: ಜುಲೈ 14ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

ಶಿಕ್ಷಣ, ಆರೋಗ್ಯ ಇದಕ್ಕೆ ಹಣ ಕೊಡಲಿ

ಪಡಿತರ ಬದಲು ಹಣ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಇದು ಸಂಪೂರ್ಣ ತಪ್ಪು. ಮನುಷ್ಯ ಸೇವೆಯಿಂದ ಹಣ ಪಡೆದುಕೊಳ್ಳಬೇಕು. ಇದು ಸರಿಯಲ್ಲ. ಶಿಕ್ಷಣ, ಆರೋಗ್ಯ ಇದಕ್ಕೆ ಹಣ ಕೊಡಲಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us