ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಡಿಕೆ ಶಿವಕುಮಾರ್​ ಹೇಳಿಕೆಯ ವಿರುದ್ದ ಮುಗಿಬಿದ್ದ ಬಿಜೆಪಿ ನಾಯಕರು

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿಕೆ ವಿರುದ್ದ ಬಿಜೆಪಿಯ ಘಟಾನುಘಟಿ ನಾಯಕರು ಕಿಡಿಕಾರಿದ್ದಾರೆ. ಯಾರ್ಯಾರು ಏನೆಂದರು ಇಲ್ಲಿದೆ ನೋಡಿ.

ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ಡಿಕೆ ಶಿವಕುಮಾರ್​ ಹೇಳಿಕೆಯ ವಿರುದ್ದ ಮುಗಿಬಿದ್ದ ಬಿಜೆಪಿ ನಾಯಕರು
ಡಿಕೆ ಶಿವಕುಮಾರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 24, 2023 | 12:05 PM

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಉನ್ನತ ಪೊಲೀಸ್ ಅಧಿಕಾರಿಗಳನ್ನು (Police Officials) ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ‘ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿ ಹೆಸರುವಾಸಿಯಾಗಿದೆ. ಅವರ ಮೇಲೆ ಸಂಶಯಪಡುವ ರೀತಿಯಲ್ಲಿ ಮಾತಾಡ್ತಾರೆ ಎಂದು ಡಿಕೆ ಶಿವಕುಮಾರ್​ ಅವರ ವಿರುದ್ದ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮೇ.24) ಮಾತನಾಡಿದ ಅವರು ‘ ನಮ್ಮ ಪೊಲೀಸರು ಯಾವತ್ತೂ ಕೇಸರೀಕರಣ ಮಾಡಿಲ್ಲ. ಕಾಂಗ್ರೆಸ್ ತಮ್ಮ ಅಜೆಂಡಾ ಮುಂದುವರಿಸಲು ಹೇಳಿದ್ದಾರೆ. ಎಸ್​ಡಿಪಿಐ, ಪಿಎಫ್​ಐ, ಸಮಾಜ ವಿರೋಧಿಗಳ ವಿರುದ್ಧ ಕಾನೂನು ಕ್ರಮ ಜರುಗಿಸ್ತೀವಿ ಅಂತಾ ಹೇಳಬೇಕಿತ್ತು. ಆದ್ರೆ, ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ರಾಜಕೀಯ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಒಳಗಾಗಬೇಡಿ. ನಿಷ್ಪಕ್ಷಪಾತವಾಗಿ ನ್ಯಾಯಯುತವಾಗಿ ಕರ್ತವ್ಯವನ್ನು ನಿಭಾಯಿಸಿ, ನೈತಿಕ ಪೊಲೀಸ್​​ಗಿರಿ ಎಂದೂ ಯಾವು ಜಿಲ್ಲೆಯಲ್ಲೂ ನಡೆದಿಲ್ಲ ಎಂದರು.

ಇದನ್ನೂ ಓದಿ:ವಿಧಾನಸಭೆಯಲ್ಲಿ ಎದುರಗಿ ಸಿಕ್ಕ ಎಂಬಿ ಪಾಟೀಲ್​ಗೆ ಗುರಾಯಿಸಿ ವಾರ್ನ್ ಮಾಡಿದ ಡಿಕೆ ಸುರೇಶ್: ಏನ್ರೀ ಇದು ರೌಡಿಸಂ ಎಂದ ಶಾಸಕರು

ಭಾರತದ ತ್ರಿವರ್ಣ ಧ್ವಜ ಕೇಸರಿಯಿಂದಲೇ ಆರಂಭವಾಗುವುದು; ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ

ಇನ್ನು ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಕೆಶಿ ಎಚ್ಚರಿಕೆ ವಿಚಾರ ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ‘ ಭಾರತದ ತ್ರಿವರ್ಣ ಧ್ವಜ ಕೇಸರಿಯಿಂದಲೇ ಆರಂಭವಾಗುವುದು, ಹನುಮಾನ್​ನ ಸಂಕೇತ ಕೇಸರಿ, ಸ್ವಾಮೀಜಿಗಳ ಸಂಕೇತ ಕೇಸರಿ. ಕಾಂಗ್ರೆಸ್​ನವರಿಗೆ ಏಕೆ ಕೇಸರಿ ಮೇಲೆ ಕೋಪವೋ ಗೊತ್ತಿಲ್ಲ. ಈ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಭ್ರಮೆಯಲ್ಲಿ ಕಾಂಗ್ರೆಸ್ಸಿಗರಿದ್ದಾರೆ. ಲೋಕಾಸಭಾ ಚುನಾವಣೆಯಲ್ಲಿ ಇದಕ್ಕೆ ಜನ ಉತ್ತರ ಕೊಡ್ತಾರೆ. 5 ವರ್ಷ ಮುಖ್ಯಮಂತ್ರಿಗಳು ಇರ್ತಾರೆ ಅಂತ ಗ್ಯಾರಂಟಿ ಇಲ್ಲ. ಈ ಬಗ್ಗೆ ಸಚಿವರುಗಳೇ ಹೇಳುತ್ತಿದ್ದಾರೆ ಎಂದರು. ಕಾಂಗ್ರೆಸ್​ ಚುನಾವಣೆಗೆ ಮುನ್ನಾ, ಚುನಾವಣೆ ನಂತರ ಒಂದು ರೀತಿಯಲ್ಲಿ ಹೇಳುತ್ತಿದೆ. ದಾರಿಯಲ್ಲಿ ಹೋಗುವವರಿಗೆಲ್ಲಾ ಮತಯಾಚನೆ ಮಾಡಿದ್ದಾರೆ. ಆದ್ರೆ, ಚುನಾವಣೆಯಲ್ಲಿ ಗೆದ್ದು ಬಂದು ಕಂಡಿಷನ್ ಹಾಕುತ್ತಿದ್ದಾರೆ. ಇದು ಡಂಬಲ್ ಸ್ಟೇರಿಂಗ್ ಸರ್ಕಾರ, ಬಸ್ ಯಾವ ದಿಕ್ಕಿನಲ್ಲಿ ಸಾಗುತ್ತೆ ದೇವರೇ ಕಾಪಾಡಬೇಕು ಎನ್ನುವ ಮೂಲಕ ಕಾಂಗ್ರೆಸ್​ ವಿರುದ್ದ ವಾಗ್ದಾಳಿ ನಡೆಸಿದರು.

ರಾಜ್ಯದ ಪೊಲೀಸ್ ವ್ಯವಸ್ಥೆ ತುಂಬಾ ಚೆನ್ನಾಗಿದೆ; ಆರಗ ಜ್ಞಾನೇಂದ್ರ

ಇದೇ ವಿಷಯವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ‘ಪೊಲೀಸರನ್ನು ಕಾಂಗ್ರೆಸ್ಸೀಕರಣ ಮಾಡುವ ಪ್ರಯತ್ನವನ್ನು ನಿನ್ನೆಯ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಾಡಿದ್ದಾರೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ತುಂಬಾ ಚೆನ್ನಾಗಿದೆ. ಧರ್ಮ, ಜಾತಿ ಆಧಾರದ ಮೇಲೆ ಯಾರೂ ಏನೂ ಮಾಡುವುದಿಲ್ಲ. ನಿನ್ನೆ ಹೀಗೆಯೇ ಇರಬೇಕು, ನಾವು ಹೇಳಿದಂತೆ ಮಾಡಬೇಕು ಅಂತಾ ಪೊಲೀಸರಿಗೆ ಒಂದು ತರಹ ಧಮ್ಕಿ ಹಾಕಿದ್ದಾರೆ. ಇವರು ಕಾನೂನು ಮೀರಿ ಹೇಳಿದವರ ಮೇಲೆ ಕೇಸ್ ಹಾಕಬೇಕು, ಇವರ ಹೇಳಿದವರನ್ನು ಬಿಡಬೇಕು. ಈ ಹಿಂದೆಯೂ ಕೂಡ ಇವರು ಈ ರೀತಿ ಮಾಡಿದ್ದರು. ಪಿಎಫ್ಐ ಸಂಘಟನೆಯನ್ನು ಸಾಕಿ ಬೃಹದಾಕಾರವಾಗಿ ಬೆಳೆಸಿದರು ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ

ಇನ್ನು ಇಂತಹ ಸಂಘಟನೆ ಬೆಳಸಿದ ಪರಿಣಾಮ ಇಡೀ ದೇಶ, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿತ್ತು. ಯಾವ ಸಮುದಾಯವನ್ನು ತುಷ್ಟೀಕರಣ ಮಾಡಲು ನಿನ್ನೆ ಈ ರೀತಿ ಮಾತಾಡಿದರು ಅಂತಾ ಜನಕ್ಕೆ ಗೊತ್ತಾಗುತ್ತಿದೆ. ಮುಂದೆಯೂ ಕೂಡ ಈ ರೀತಿ ಇವರು ಮಾತಾಡ್ತಾರೆ, ಇದು ಅಶ್ಚರ್ಯ ಏನಲ್ಲ. ಇನ್ನು ಪೊಲೀಸರು ಕೇಸರಿ ಶಾಲು ಹಾಕಿದ ಬಗ್ಗೆ ಡಿಸಿಎಂ ಎಚ್ಚರಿಕೆ ವಿಚಾರ‘ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪೂಜೆ ಪುನಸ್ಕಾರಗಳಲ್ಲಿ ಕೇಸರಿ ಶಲ್ಯನೋ ಏನೋ ಹಾಕ್ತಾರೆ. ಇವರಿಗೆ ಕೇಸರಿ ಅಲರ್ಜಿ ಇದೆ ಅಂತಾ ಹೇಳಿದರೆ, ಇವರು ಕೇಸರಿಯನ್ನೇ ನಿಷೇಧ ಮಾಡಲಿ, ಕೇಸರೀಕರಣ ಅನ್ನುವಂತಹದ್ದು ಎಲ್ಲಿದೆ ಎಂದಿದ್ದಾರೆ.

ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ ಎಂಬ ಸಿಎಂ ಎಚ್ಚರಿಕೆ ವಿಚಾರ ‘ಕಾನೂನಿನಲ್ಲಿ ತಪ್ಪು ನಡೆದರೆ ಕ್ರಮ ಕೈಗೊಳ್ಳಬೇಕು. ಇದು ಯಾವ ಸಮುದಾಯದ ತುಷ್ಟೀಕರಣ, ಯಾವ ಸಮುದಾಯವನ್ನು‌ ತುಳಿಯಲು ಅಂತಾ ಗೊತ್ತಾಗುತ್ತದೆ. ಬಜರಂಗದಳ ರಾಷ್ಟ್ರ ವಿರೋಧಿ ಕೃತ್ಯ ಮಾಡಲಿಲ್ಲ, ಕೊಲೆ ಸುಲಿಗೆ ಮಾಡಲಿಲ್ಲ, ಪಿಎಫ್ ಐ ಅದನ್ನೆಲ್ಲಾ ಮಾಡಿತ್ತು, ಅದಕ್ಕೆ ಕೇಂದ್ರ ಸರ್ಕಾರ ನಿಷೇಧ ಮಾಡಿತ್ತು. ಇದರ ಬಗ್ಗೆ ಬಜರಂಗದಳದ ಹಿರಿಯರು ಕುಳಿತು ಮಾತಾಡುತ್ತಾರೆ ಎಂದರು.

ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೀತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಕಾಂಗ್ರೆಸ್ ನ ಹೀನಾ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸೀಕತೆ ಬಯಲಾಗಿದೆ.ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ಆತನ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದರು.  ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನ ಕೆಲವು ಇಲಾಖೆಗಳಲ್ಲಿ ಮಾಡ್ತಾರೆ. ಇಂಥಹ ಪೂಜೆಗಳನ್ನ ನಿಷೇಧಿಸುವ, ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ. ಪೂಜೆ ಮಾಡುವ ಪೊಲೀಸರನ್ನ ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್ ನಿಂದ ಆಗ್ತಿದೆ. ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಭಜರಂಗದಳ ನಿಷೇಧವನ್ನು ಉಲ್ಲೇಖ ಮಾಡ್ತಾ ಇದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನೋದನ್ನ ತೋರಿಸಿದೆ. ಹಿಂದೂ ಆಚರಣೆ ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನೊದನ್ನ ತೋರಿಸಿದೆ. ಇಂಥದ್ದರ ವಿರುದ್ದ ಹೋರಾಟ ಮಾಡಿ ಉತ್ತರ ಕೊಡೋ ಶಕ್ತಿ ಬಿಜೆಪಿಗಿದೆ ಎಂದರು.

ಇದನ್ನೂ ಓದಿ:Praveen Sood: ಸಿಬಿಐನ ನೂತನ ಸಾರಥಿ ಪ್ರವೀಣ್ ಸೂದ್ ಯಾರು? ಡಿಕೆ ಶಿವಕುಮಾರ್​ ಕಿರಿಕ್ ಏನು?

ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ನ ಮಾನಸಿಕತೆಯನ್ನ ವಿರೋಧಿಸ್ತೇನೆ, ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ, ನಾವು ಉತ್ತರ ಕೊಡ್ತೇವೆ. ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಈ ಮೂಲಕ ಅಧಿಕಾರಿಗಳನ್ನ ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡ್ತಿದೆ. ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿಯಾಗಿದೆ. ಇವತ್ತು ಅಂಥಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆ ಸಿದ್ದರಾಮಯ್ಯ ಮಾಡ್ತಿದಾರೆ ಎನ್ನುವ ಮೂಲಕ ಹರಿಹಾಯ್ದರು.ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನ ಪ್ರಕಟಿಸಿಯೇ ಪ್ರಕಟಿಸುತ್ತೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡ್ತೇವೆ. ನಾವು ಹಿಂದೂಗಳ ಪರವಾಗಿದ್ದೇವೆ, ಗೋಹತ್ಯೆ ನಿಷೇಧ, ಮತಾಂತರ ನಿಷೇಧದ ಪರವಾಗಿದ್ದೇವೆ ಎಂದರು.

ಹಿಂದೂ ಸಮಾಜಕ್ಕೆ ತೊಂದರೆಯಾದ್ರೆ ಬಿಜೆಪಿ ಹೋರಾಟ ಮಾಡಲಿದೆ. ಕಾಂಗ್ರೆಸ್ ಗೆ ಬಹುಮತ ಕೊಟ್ಟರೂ ಗಲಾಟೆ ಮಾಡ್ತಾ ಇದಾರೆ. ಇವರು ಸರ್ಕಾರ ಬರುವ ಮೊದಲೇ ಜಗಳ ಮಾಡಿಕೊಂಡು ಬಂದವರು. ಜನಾಶೀರ್ವಾದ ಸಿಕ್ಕರೂ ಇವರ ಬೀದಿ ಜಗಳ ಜೋರಾಗಿದೆ. ಇನ್ನೂ ಮಂತ್ರಿ ಮಂಡಲ ರಚನೆಯಾಗಿಲ್ಲ. ಇದು ರಚನೆ ಆದ್ರೆ, ಕಾಂಗ್ರೆಸ್ ನ ಸ್ಥಿತಿ ಏನಾಗುತ್ತೆ ಕಾದು ನೋಡಿ. ನಮ್ಮ 40% ಕಮಿಷನ್ ವಿರುದ್ದ ಇವರು ತನಿಖೆ ಮಾಡಲಿ ಜೊತೆಗೆ ಸಿದ್ದರಾಮಯ್ಯ ವಿರುದ್ದ ನಾವು ಲೋಕಾಯುಕ್ತಕ್ಕೆ ಕೊಟ್ಟ ದೂರಿನ ತನಿಖೆಯೂ ಆಗಲಿ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Wed, 24 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ