AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಳಿಹಟ್ಟಿ ಶೇಖರ್ ಅವರಿಗೆ RSS ಬಗ್ಗೆ ತಪ್ಪು ಮಾಹಿತಿ ಇದೆ, ಸಂಘಕ್ಕೆ ಬರಲಿ: ಶೋಭಾ ಕರಂದ್ಲಾಜೆ

ತನಗೆ ನಾಗಪುರದ ಆರ್​ಎಸ್​ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಗಂಭೀರ ಆರೋಪ ಮಾಡಿದ್ದರಲ್ಲದೆ, ಇದಕ್ಕೆ ಕಾರಣವೇನು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ ಅವರಿಗೆ ಕೇಳಿದ ಆಡಿಯೋ ವೈರಲ್ ಆಗಿದೆ. ಆದರೆ, ಸಂಘದ ಬಗ್ಗೆ ಗೂಳಿಹಟ್ಟಿಗೆ ತಪ್ಪು ಮಾಹಿತಿ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಗೂಳಿಹಟ್ಟಿ ಶೇಖರ್ ಅವರಿಗೆ RSS ಬಗ್ಗೆ ತಪ್ಪು ಮಾಹಿತಿ ಇದೆ, ಸಂಘಕ್ಕೆ ಬರಲಿ: ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi|

Updated on: Dec 09, 2023 | 2:53 PM

Share

ಉಡುಪಿ, ಡಿ.9: ಜಾತಿಯ ಕಾರಣಕ್ಕಾಗಿ ನಾಗಪುರದ ಆರ್​ಎಸ್​ಎಸ್ (RSS) ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Goolihatti Shekhar) ಅವರಿಗೆ ಸಂಘದ ಬಗ್ಗೆ ತಪ್ಪು ಮಾಹಿತಿ ಇದೆ. ಅವರು ಸಂಘಕ್ಕೆ ಬರಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಗೂಳಿಹಟ್ಟಿ ಆರ್​ಎಸ್​ಎಸ್​ಗೆ ಯಾವಾಗ ಬಂದಿದ್ದರು? ಅವರು ಬಿಜೆಪಿಯ ಸದಸ್ಯರಾಗಿದ್ದರು, ಮಂತ್ರಿಯಾಗಿದ್ದರು. ಆರ್​ಎಸ್​ಎಸ್ ಶಾಖೆಗೆ ಹೋದವರು ಈ ರೀತಿ ಮಾತನಾಡಲು ಸಾಧ್ಯವಿಲ್ಲ. ಎಲ್ಲ ವರ್ಗದವರು ಒಟ್ಟಾಗಿ ಇರಬೇಕು ಅನ್ನೋದು ಸಂಘದ ಆಶಯವಾಗಿದೆ. ಭಾರತದ ಅಭ್ಯುದಯಕ್ಕೆ ಇದುವೇ ಮಾರ್ಗ ಎಂದು RSS ನಂಬಿದೆ. ಗೂಳಿಹಟ್ಟಿ ಅವರಿಗೆ ತಪ್ಪು ಮಾಹಿತಿ ಇದೆ, ಸಂಘಕ್ಕೆ ಬರಲಿ ಎಂದರು.

ಮಹುವಾ ಮೊಯಿತ್ರಾ ಸಂಸತ್ ಸ್ಥಾನದಿಂದ ಉಚ್ಚಾಟನೆ ವಿಚಾರವಾಗಿ ಮಾತನಾಡಿದ ಅವರು, ಆಕೆ ನಮ್ಮ ಜೊತೆಗೆ ಸಂಸದೆಯಾಗಿದ್ದವರು. ಸಂಸದರು ಎನ್ನುವ ಪದಕ್ಕೆ ಕಳಂಕ ತಂದವರು. ಪ್ರಶ್ನೆ ಕೇಳುವುದಕ್ಕೆ, ಸಂಸತ್ತಿನಲ್ಲಿ ಮಾತನಾಡುವುದಕ್ಕೆ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಕಪ್ಪು ಚುಕ್ಕೆ ಎಂದರು.

ಇದನ್ನೂ ಓದಿ: ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ನಾಗಪುರ ಕಚೇರಿಯಲ್ಲಿಲ್ಲ: ಗೂಳಿಹಟ್ಟಿ ಆರೋಪಕ್ಕೆ ಆರ್​ಎಸ್​ಎಸ್ ಸ್ಪಷ್ಟನೆ

ನಾವು ಪ್ರಶ್ನೆಗಳನ್ನು ಗುಪ್ತವಾಗಿ ಇಡಬೇಕು. ಪಾರ್ಲಿಮೆಂಟ್ ಒಳಗೆ ಬರುವ ತನಕ ಉತ್ತರ ಯಾರಿಗೂ ಗೊತ್ತಾಗುವುದಿಲ್ಲ. ಒಂದು ಪ್ರಶ್ನೆಗೆ ಒಬ್ಬ ಅಧಿಕಾರಿ 15- 20 ದಿನ ಶ್ರಮಪಡುತ್ತಾರೆ. ಅಧಿಕಾರಿಗಳ ತಂಡ ಇದಕ್ಕೆ ಕೆಲಸ ಮಾಡುತ್ತದೆ. ತಪ್ಪು ಸಂದೇಶ ಹೋಗಬಾರದು ಎಂಬ ಕಾರಣಕ್ಕೆ ಚರ್ಚೆ ಮಾಡುತ್ತಾರೆ. ಪವಿತ್ರವಾದ ಸದನವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವಂತ ಲಾಭಕ್ಕಾಗಿ, ಸ್ವಾರ್ಥಕಾಗಿ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಮತ್ತು ಕೆಟ್ಟ ಸಂದೇಶ ಎಂದರು.

ಮುಂದೆ ವಿಧಾನಸಭೆಗಳಲ್ಲೂ ಕೂಡ ಹೀಗೆ ಆಗಬಹುದು. ಲೋಕಸಭೆಯಲ್ಲಿ ವಿಚಾರ ಪ್ರಸ್ತಾಪ ಮಾಡುವ ಬಗ್ಗೆ ಗಂಭೀರತೆ ಬೇಕು. ಪಾವಿತ್ರತೆ ಕಡೆಗಣಿಸಿದ್ದಕ್ಕೆ ಶಿಕ್ಷೆ ಆಗಬೇಕು. ಸಮಿತಿ ನೀಡಿರುವ ವರದಿಗೆ ತಕ್ಕಂತ ಶಿಕ್ಷೆ ಆಗಲೇಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸಮಾಜ ಸೇವೆ, ಪ್ರಾಣಿಗಳ ಸೇವೆಯಲ್ಲಿ ತೊಡಗಿಸಿಕೊಂಡ ನಟಿ ಲೀಲಾವತಿ

ಹಿರಿಯ ನಟಿ ಲೀಲಾವತಿ ನಿಧನದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಚಿತ್ರರಂಗದ ಹಿರಿ ತಲೆ, ಶ್ರೇಷ್ಠ ಕಲಾವಿದೆ ಲೀಲಾವತಿ ನಮ್ಮನ್ನು ಅಗಲಿದ್ದಾರೆ. ನಮ್ಮೂರಿನವರು ಸಿಕ್ಕಾಗೆಲ್ಲ ತುಳು ಭಾಷೆಯಲ್ಲಿ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲೇ ನೆಲೆಸಿದ್ದ ಲೀಲಾವತಿ ಚಿತ್ರರಂಗಕ್ಕೆ ಅಪಾರ ಸೇವೆ ನೀಡಿದ್ದರು. ಸಮಾಜ ಸೇವೆ, ಪ್ರಾಣಿಗಳ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಲೀಲಾವತಿಯವರು ಕೊನೆಯ ದಿನದವರೆಗೂ ಕಷ್ಟದ ಜೀವನ ಸಾಗಿಸಿದ್ದರು. ವಿನೋದ್ ರಾಜ್, ಕುಟುಂಬಕ್ಕೆ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದರು.

ಎಲ್ಲಾ ಅವಮಾನವನ್ನು ಸಹಿಸಿಕೊಂಡು ದುಃಖದಲ್ಲೇ ಜೀವನ ಸಾಗಿಸಿದರು. ಸಮಾಜಕ್ಕೆ ಏನಾದರೂ ಮಾಡಬೇಕೆಂದು ಬೆಂಗಳೂರಿನಿಂದ ದೂರ ನೆಲೆಸಿದರು. ಬಣ್ಣದ ಬದುಕು ಕಷ್ಟ, ಲೀಲಾವತಿಯವರ ಬದುಕು ಇನ್ನೂ ಕಷ್ಟಕರವಾಗಿತ್ತು. ಸಮಾಜ ಸೇವೆ ಮೂಲಕ ಕೊನೆಯ ದಿನಗಳನ್ನು ಖುಷಿಯಾಗಿ ಕಳೆದರು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ