ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ವಿಪಕ್ಷಗಳ ಮನವಿ ನಿರಾಕರಿಸಿದ ಗೋಪಾಲಕೃಷ್ಣ ಗಾಂಧಿ

TV9kannada Web Team

TV9kannada Web Team | Edited By: Rashmi Kallakatta

Updated on: Jun 20, 2022 | 6:46 PM

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿಯವರ ಹೇಳಿಕೆ ಬಂದಿದೆ. ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ವಿಪಕ್ಷಗಳ ಮನವಿ ನಿರಾಕರಿಸಿದ ಗೋಪಾಲಕೃಷ್ಣ ಗಾಂಧಿ
ಗೋಪಾಲಕೃಷ್ಣ ಗಾಂಧಿ

ದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ (Presidential election) ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ (Gopalkrishna Gandhi) ಸೋಮವಾರ ತಿರಸ್ಕರಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ (Sharad Pawar) ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನಂತರ ಜುಲೈನಲ್ಲಿ ನಡೆಯುವ ರಾಷ್ಟ್ರಪತಿ ಚುನಾವಣೆಗೆ ಸಂಭಾವ್ಯ ವಿರೋಧ ಪಕ್ಷದ ಅಭ್ಯರ್ಥಿಯಾ 77ರ ಹರೆಯದ ಗಾಂಧಿ ಹೆಸರನ್ನು ಸೂಚಿಸಲಾಗಿತ್ತು. ಆದರೆ ಗೋಪಾಲಕೃಷ್ಣ ಗಾಂಧಿ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ವಿಪಕ್ಷದ ಹಲವಾರು ಗೌರವಾನ್ವಿತ ನಾಯಕರು ರಾಷ್ಟ್ರಪತಿ ಹುದ್ದೆಗೆ ಮುಂಬರುವ ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಲು ಹೇಳಿರುವುದಾಗಿ ಗಾಂಧಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಷಯವನ್ನು ಆಳವಾಗಿ ಪರಿಗಣಿಸಿದ ನಂತರ, ವಿರೋಧ ಪಕ್ಷದ ಅಭ್ಯರ್ಥಿಯು ರಾಷ್ಟ್ರೀಯ ಒಮ್ಮತವನ್ನು ಮತ್ತು ವಿರೋಧ ಪಕ್ಷದ ಏಕತೆಯ ಜೊತೆಗೆ ರಾಷ್ಟ್ರೀಯ ವಾತಾವರಣವನ್ನು ಸೃಷ್ಟಿಸುವವರಾಗಿರಬೇಕು ಎಂದು ನಾನು ನೋಡುತ್ತೇನೆ. ನನಗಿಂತ ಉತ್ತಮವಾಗಿ ಇದನ್ನು ಮಾಡುವವರು ಇದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಗಾಂಧಿ ಹೇಳಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿಯವರ ಹೇಳಿಕೆ ಬಂದಿದೆ. ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದರು.

77 ವರ್ಷದ ಮಾಜಿ ಅಧಿಕಾರಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾಕ್ಕೆ ಭಾರತದ ಹೈಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದರು. ಇವರು ಮಹಾತ್ಮಾ ಗಾಂಧಿ ಮತ್ತು ಸಿ ರಾಜಗೋಪಾಲಾಚಾರಿಯವರ ಮೊಮ್ಮಗ. ಜೂನ್ 15 ರಂದು ನೂತನ ರಾಷ್ಟ್ರಪತಿಯ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 29 ಕೊನೆಯ ದಿನವಾಗಿದೆ. ಜುಲೈ 18 ರಂದು ಚುನಾವಣೆ ಮತ್ತು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada