ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ (KPCC President DK Shivakumar) ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಗ್ಲೀಷ್ ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಟ್ವಿಟರ್ನಲ್ಲಿ ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಸಾರಾಂಶ ಹೀಗಿದೆ:
BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.
Government agencies filing cases against me just because I’m not joining BJP. I’m not so easy to intimidate. The answer to this political vendetta will come from the people of Karnataka, who are fed up of the BJP’s 40% commission government.
BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.
— DK Shivakumar (@DKShivakumar) May 26, 2022
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:33 pm, Thu, 26 May 22