ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ, ಸಿದ್ದರಾಮಯ್ಯ ಹೇಳಿಕೆಗೆ ಗೋವಿಂದ ಕಾರಜೋಳ ಆಕ್ಷೇಪ
ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಬಜೆಟ್ ಕುರಿತು ಚರ್ಚೆ ಮಾಡಿದ್ದು, ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ ಎಂದರು, ಈ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆಕ್ಷೇಪ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಕುರಿತು ಚರ್ಚೆ ಮಾಡುತ್ತಾ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಸಚಿವ ಗೋವಿಂದ ಕಾರಜೋಳ ಆಕ್ಷೇಪ ವ್ಯಕ್ತಪಡಿಸಿ, ಕೇಂದ್ರ ಬಜೆಟ್ನಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಣೆಯಾಗಿದೆ ಎಂದರು. ಈ ಹೇಳಿಕೆಗೆ ಒಪ್ಪದ ಸಿದ್ದರಾಮಯ್ಯ ಆದೇಶ ತೋರಿಸಿ ಎಂದು ಸವಾಲು ಹಾಕಿದರು. ಇದಕ್ಕೆ ಪ್ರತ್ಯುತ್ತರವಾಗಿ ತಕ್ಷಣ ಕೇಳಿದರೆ ಹೇಗೆ ಕೊಡಲಿ, ಉತ್ತರ ನೀಡುವಾಗ ಆದೇಶ ಕಾಪಿ ತಂದು ತೋರಿಸುತ್ತೇನೆ ಎಂದು ಸದನದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಮೇಕೆದಾಟು ಯೋಜನೆಯನ್ನೂ ನಾವೇ ಪೂರ್ಣಗೊಳಿಸುತ್ತೇವೆ, ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಮುಗಿದ ಕೂಡಲೇ ಯೋಜನೆಯನ್ನ ಆರಂಭಿಸುತ್ತೇವೆ. ಈಗಾಗಲೇ ಮಹದಾಯಿ ಯೋಜನೆಯ ಡಿಪಿಆರ್ ಸಿದ್ಧವಾಗಿದೆ, ಬೆಳಗಾವಿ ಅಧಿವೇಶನದಲ್ಲಿ ಕಾಪಿ ಕೊಟ್ಟಿದ್ದೇವೆ. ಈಗ ತಕ್ಷಣ ಕೇಳಿದರೆ ಹೇಗೆ ಕೊಡಲಿ, ಉತ್ತರ ನೀಡುವಾಗ ಎಲ್ಲವನ್ನೂ ಕೊಡುತ್ತೇವೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ