ಯುವ ಮತದಾರರನ್ನು ಸೆಳೆಯಲು ಸರ್ಕಾರ ಭರ್ಜರಿ ಪ್ಲ್ಯಾನ್​: ಪ್ರತಿ ಗ್ರಾಮ ಪಂಚಾಯಿತಿಗೆ ಯುವಕರ ಸಂಘ ರಚನೆ

ರಾಜ್ಯದಲ್ಲಿ ಸ್ವಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದ ಯೋಜನೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನಾ.  

ಯುವ ಮತದಾರರನ್ನು ಸೆಳೆಯಲು ಸರ್ಕಾರ ಭರ್ಜರಿ ಪ್ಲ್ಯಾನ್​: ಪ್ರತಿ ಗ್ರಾಮ ಪಂಚಾಯಿತಿಗೆ ಯುವಕರ ಸಂಘ ರಚನೆ
ಪ್ರಾತಿನಿಧಿಕ ಚಿತ್ರImage Credit source: vijaykarnataka.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 11, 2023 | 9:47 PM

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳಂತೆ (Vivekananda self-help groups) 12 ಸಾವಿರ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ ಸರ್ಕಾರವು ಯುವ ಜನತೆಯನ್ನು ತಲುಪುವುದರೊಂದಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಯುವ ಮತದಾರರನ್ನು ಸೆಳೆಯಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಸ್ವಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೆ ತಂದ ಯೋಜನೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನಾ.

ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2013 ರಲ್ಲಿ 20 ವರ್ಷಕ್ಕಿಂತ ಕಡಿಮೆ ವಯಸ್ಸಿನ 8 ಲಕ್ಷ ಮತ್ತು 2018ರಲ್ಲಿ 15 ಲಕ್ಷ ಮತದಾರರಿದ್ದರು. ಸದ್ಯ ಈ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಈ ಬಾರಿ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿಯ ಅಂಕಿಅಂಶಗಳ ಪ್ರಕಾರ, ಸುಮಾರು 7 ಲಕ್ಷದಷ್ಟು ಮತದಾರರು ಮೊಟ್ಟ ಮೊದಲ ಬಾರಿಗೆ ಮತದಾನಕ್ಕೆ ನೋಂದಾಯಿಸಿಕೊಂಡಿದ್ದಾರೆ. 2014 ರಲ್ಲಿ ಮೊಟ್ಟಮೊದಲ ಬಾರಿಗೆ ಮತದಾನ ಮಾಡುವವರ ಸಂಖ್ಯೆ ನಾಲ್ಕು ಲಕ್ಷವಿತ್ತು. ಸದ್ಯ ರಾಜಕೀಯ ಪಕ್ಷಗಳು ಈ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಅವರನ್ನು ತಮ್ಮತ್ತ ಸೆಳೆಯಲು ಪ್ಲ್ಯಾನ್​ ರೂಪಿಸುತ್ತಿವೆ.

ಇದನ್ನೂ ಓದಿ: ನಾವು ಕ್ರೆಡಿಟ್ ವಾರ್ ಹಿಂದೆ ಬಿದ್ದಿಲ್ಲ: ಕಾಂಗ್ರೆಸ್ ನಾಯಕರಿಗೆ ಟಾಂಗ್​ ಕೊಟ್ಟ ಪ್ರಲ್ಹಾದ ಜೋಶಿ

ಕರ್ನಾಟಕದಲ್ಲಿ 6,000 ಗ್ರಾಮ ಪಂಚಾಯಿತಿಗಳಿವೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶದಂತೆ ಈ ಹಿಂದೆ ಪ್ರತಿ ಪಂಚಾಯಿತಿಗೆ ಒಂದು ವಿವೇಕಾನಂದ ಸ್ವಸಹಾಯ ಸಂಘವನ್ನು ರಚಿಸಲು ಪ್ರಸ್ತಾಪಿಸಲಾಗಿತ್ತು. ಸದ್ಯ ಪ್ರತಿ ಪಂಚಾಯಿತಿಯಲ್ಲಿ ಅಂತಹ ತಲಾ ಎರಡು ಗುಂಪುಗಳನ್ನು ಹೊಂದಲು ಹಣಕಾಸು ಇಲಾಖೆ ಅನುಮತಿ ನೀಡಿದೆ. ಹಾಗಾಗಿ ರಾಜ್ಯಾದ್ಯಂತ ಒಟ್ಟು 12,000 ವಿವೇಕಾನಂದ ಸ್ವಸಹಾಯ ಸಂಘ ಗುಂಪುಗಳು ರಚನೆಯಾಗಲಿವೆ.

ಯುವಕರಿಗೆ ಉದ್ಯೋಗ ಒದಗಿಸುವ ಗುರಿ:

ಈ ಯೋಜನೆಯಡಿ 10 ಸಾವಿರ ರೂ. ಮತ್ತು 1 ಲಕ್ಷ ರೂ.ಗಳ ಸಬ್ಸಿಡಿ ಸೇರಿದಂತೆ ಒಟ್ಟು 5 ಲಕ್ಷ ರೂ.ಗಳ ಸಾಲವನ್ನು ನೀಡಲಾಗುತ್ತದೆ. ಈ ಕುರಿತಾಗಿ ಕ್ರೀಡಾ ಮತ್ತು ಯುವಜನ ಸೇವಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಈ ಯೋಜನೆಯಿಂದ 5 ಲಕ್ಷ ಯುವಕರಿಗೆ ಉದ್ಯೋಗ ಸಿಗಲಿದೆ. ನಾವು ಈ ಯೋಜನೆಯ ಮೂಲಕ ಯುವ ಸಬಲೀಕರಣದತ್ತ ಗಮನ ಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 28,000 ಸ್ವಸಹಾಯ ಗುಂಪುಗಳನ್ನು ರಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ; ಪ್ರಧಾನಿ ಮೋದಿ

ಐದು ಲಕ್ಷ ಕುಟುಂಬಗಳನ್ನು ತಲುಪುವ ಉದ್ದೇಶ 

ಕರ್ನಾಟಕದ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ವಾಸವಾಗಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಜನಸಂಖ್ಯೆಯ ಅರ್ಧದಷ್ಟು ಯುವಕರಿದ್ದಾರೆ. ಅವರು ಉದ್ಯೋಗಗಳನ್ನು ಹುಡುಕಿಕೊಂಡು ನಗರ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಈ ಯೋಜನೆಯು ಅವರಿಗೆ ಆಯಾ ಸ್ಥಳಗಳಲ್ಲಿ ಉದ್ಯೋಗಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದರಿಂದಾಗಿ ಅವರು ತಮ್ಮ ಸ್ವಂತ ಊರು, ಹಳ್ಳಿಗಳಲ್ಲಿ ಉಳಿಯುವಂತಾಗುತ್ತದೆ. ಆ ಮೂಲಕ ಸರ್ಕಾರ ಐದು ಲಕ್ಷ ಯುವಕರನ್ನು ಗುರಿಯಾಗಿಸಿದೆ. ಅಂದರೆ, ನಾವು ಪರೋಕ್ಷವಾಗಿ ಐದು ಲಕ್ಷ ಕುಟುಂಬಗಳನ್ನು ತಲುಪುತ್ತಿದ್ದೇವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:47 pm, Sat, 11 March 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್