ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗ್ತಿದೆ ಎಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು: ಪ್ರಲ್ಹಾದ್ ಜೋಶಿ

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು. ಶಂಕಿತ ಉಗ್ರನಿಗೆ ಧಾರವಾಡ ಲಿಂಕ್​ ಇರುವುದು ತಿಳಿದುಬಂದಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವೆಂದು ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದರು. ಇದಕ್ಕೂ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗ್ತಿದೆ ಎಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡಬೇಕು: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ ಮತ್ತು ಶಾಮನೂರು ಶಿವಶಂಕರಪ್ಪ
Edited By: Rakesh Nayak Manchi

Updated on: Oct 07, 2023 | 2:21 PM

ಧಾರವಾಡ, ಅ.7: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಹಿರಿಯರು, ವೀರಶೈವ ಮಹಾಸಭಾ ಅಧ್ಯಕ್ಷರು. ಅವರು ಎಲ್ಲಾ ಎಲ್ಲ ಮಾಹಿತಿ ಇಟ್ಟುಕೊಂಡೇ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೆ ನೀಡಿರುತ್ತಾರೆ. ಹೀಗಾಗಿ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಕೆಲವು ತಾಲೂಕುಗಳು ಬರದಿಂದ ಉಳಿದಿವೆ. ಅದನ್ನು ಮೊದಲು ರಾಜ್ಯ ಸರ್ಕಾರ ಘೋಷಣೆ ಮಾಡಲಿ. ಅವರು ಇದುವರೆಗೂ ಪ್ರಸ್ತಾವನೆ ಸಲ್ಲಿಸಿಲ್ಲ. ಕಾವೇರಿ, ಬರ ವಿಷಯಕ್ಕೆ ಸ್ಪಂದಿಸಲು ಕೇಂದ್ರ ಸರ್ಕಾರ ತಯಾರಿದೆ ಎಂದರು.

ಅಧ್ಯಯನ ತಂಡ ತಡವಾಗಿ ಬಂದ ವಿಚಾರವಾಗಿ ಮಾತನಾಡಿದ ಜೋಶಿ, ರಾಜ್ಯದಿಂದ ಪ್ರಸ್ತಾಪ ಬಂದ ಬಳಿಕವೇ ಕೇಂದ್ರ ತಂಡ ಬರಬೇಕಾಗುತ್ತದೆ. ಅವರಿಂದ ಪ್ರಸ್ತಾಪ ಬಂದ ಬಳಿಕ ತಂಡ ಬಂದಿದೆ. ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರದತ್ತ ಕೈ ತೋರಿಸಬಾರದು ಎಂದರು.

ಸಂತೋಷ್ ಲಾಡ್ ಹೇಳಿಕೆಗೆ ಪ್ರಲ್ಹಾದ್ ಜೋಶಿ ತಿರುಗೇಟು

ಐಸಿಸ್ ಶಂಕಿತ ಉಗ್ರನಿಗೆ ಧಾರವಾಡ ಲಿಂಕ್​ ಇರುವುದು ಪತ್ತೆಯಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣವೆಂದು ಸಚಿವ ಸಂತೋಷ್ ಲಾಡ್ ಅವರು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಜೋಶಿ, ಎಲ್ಲಿ ರಾಜ್ಯ ಸರ್ಕಾರದ ಅನುಕಂಪ ಇರುತ್ತದೆಯೋ ಅಲ್ಲಿ ಅವರು ಈ ಕಾರ್ಯ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಇವರ ಯೋಗ್ಯತೆಗೆ ಒಬ್ಬೇ ಒಬ್ಬ ಲಿಂಗಾಯತ ಅಭ್ಯರ್ಥಿಯನ್ನು ಹಾಕಲಿಲ್ಲ, ಶಾಮನೂರು ಬಿಜೆಪಿಗೆ ಹೋಗಿದ್ದರೆ ಇಷ್ಟೊತ್ತಿಗೆ ಕೇಂದ್ರ ಮಂತ್ರಿ ಆಗ್ತಿದ್ದರು – ಎಚ್​​ ಡಿ ರೇವಣ್ಣ

ಯುಪಿಎ ಕಾಲದಲ್ಲಿ ದೆಹಲಿಯಿಂದ ಹುಬ್ಬಳ್ಳಿವರೆಗೆ ಬಾಂಬ್ ಸ್ಪೋಟ ಆಗುತ್ತಿದ್ದವು. ಆದರೆ ದೇಶದೊಳಗೆ ಈಗ ಆ ಚಟುವಟಿಕೆ ಇಲ್ಲ. ಕಾಶ್ಮೀರದಲ್ಲಿಯೂ ಬಹಳ ಕಡಿಮೆ ಆಗಿವೆ. ಆದರೆ ಕೆಲವು ಕಡೆ ಉಗ್ರ ಚಟುವಟಿಕೆ ಮಾಡುವವರು ಇದ್ದಾರೆ. ಎಲ್ಲಿ ರಾಜ್ಯ ಸರ್ಕಾರದ ಅನುಕಂಪ ಇರುತ್ತದೆಯೋ ಅಲ್ಲಿ ಅವರು ಈ ಕಾರ್ಯ ಮಾಡುತ್ತಾರೆ. ಅಂಥ ರಾಜ್ಯಗಳಲ್ಲಿ ಅಂಡರ್‌ಗ್ರೌಂಡ್ ಸೆಲ್‌ಗಳನ್ನು ಮಾಡುತ್ತಿದ್ದಾರೆ ಎಂದರು.

ಉಗ್ರರಿಗೆ ಧಾರವಾಡದ ಲಿಂಕ್ ಇರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ನಾವು ರಾಜಕೀಯವಾಗಿ ಏನೂ ಹೇಳುತ್ತಿಲ್ಲ. ರಾಜ್ಯ ಸರ್ಕಾರದ ಮಂತ್ರಿಗಳು ಬೇಜವಾಬ್ದಾರಿಯಿಂದ ಮಾತನಾಡಬಾರದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Sat, 7 October 23

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us