Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿದಾರರಿಂದ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ ಪುಜಾ ಪ್ರತಿನಿಧಿಗಳನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ
ಪ್ರಾತಿನಿಧಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jul 14, 2023 | 9:28 PM

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ (Citizen Volunteer) ನೇಮಕಕ್ಕೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಓರ್ವ ಮಹಿಳೆ ಸೇರಿದಂತೆ ಪ್ರತಿ 1 ಸಾವಿರ ಜನರಿಗೆ ಅಥವಾ 1 ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿ ನೇಮಕ ಮಾಡಲಾಗುತ್ತಿದೆ. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಕೇಂದ್ರಗಳಲ್ಲಿ ಉಂಟಾಗಬಹುದಾಗ ಒತ್ತಡವನ್ನು ತಪ್ಪಿಸುವ ಸಲುವಾಗಿ ಮೊಬೈಲ್​ ಆ್ಯಪ್​ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡುವುದಾಗಿ ಈ ಹಿಂದೆ ತಿಳಿಸಲಾಗಿತ್ತು. ಅದರಂತೆಯೇ ಇಂದು ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಇದನ್ನೂ ಓದಿ: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೂಚನೆ

ಪ್ರಜಾ ಪ್ರತಿನಿಧಿಗಳ ಆಯ್ಕೆ ಹೇಗೆ?

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. 1000 ಜನಸಂಖ್ಯೆಗಿಂತ ಕಡಿಮೆ ಅಥವಾ ಅದಕ್ಕೆ ಸಮನಾದ ಪ್ರತಿ ಗ್ರಾಮಕ್ಕೆ 2 ಪುಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗೆ, ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ನಗರ ಪುದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ವಾರ್ಡ್​ನಲ್ಲಿ 1000 ಜನಸಂಖ್ಯೆಗೆ ಇಬ್ಬರು ಪುಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಪ್ರತಿ ಹೆಚ್ಚುವರಿ 500 ಜನ ಸಂಖ್ಯೆಗ ಒಂದು ಹೆಚ್ಚುವರಿ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರಜಾ ಪ್ರತಿನಿಧಿಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಿಜಿಟೈಸ್​​ ಮಾಡಲಾಗುತ್ತದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ರಿಂದ ನಾಳೆ ಸುದ್ದಿಗೋಷ್ಠಿ

ಗೃಹಲಕ್ಷ್ಮೀ ಯೋಜನೆ ಜಾರಿ ವಿಚಾರವಾಗಿ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸುದ್ದಿಗೋಷ್ಠಿ ಮಾಡಲಿದ್ದು, ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ವಿವರಣೆ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್