ಬೆಂಗಳೂರು: ಮುಖ್ಯಮಂತ್ರಿ ವಿಶೇಷ ಅನುದಾನದಡಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, 23 ಶಾಸಕರ ಕ್ಷೇತ್ರಗಳಿಗೆ ಒಟ್ಟು 93.24 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 12 ಬಿಜೆಪಿ ಶಾಸಕರು, 3 ಜೆಡಿಎಸ್ ಶಾಸಕರು ಮತ್ತು 7 ಕಾಂಗ್ರೆಸ್ ಶಾಸಕರ ಕ್ಷೇತ್ರಗಳು ಸೇರಿದಂತೆ ಒಟ್ಟು 23 ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿಯ ಕ್ಷೇತ್ರಕ್ಕೆ ಒಟ್ಟು 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಅನಿತಾ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 5 ಕೋಟಿ ಅನುದಾನ ಬಿಡುಗಡೆಯಾಗಿದೆ. ಇನ್ನು ಶೃಂಗೇರಿ ಕ್ಷೇತ್ರಕ್ಕೆ 7.75 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
ಆದೇಶ ಪ್ರತಿಯಲ್ಲಿ ಶಾಸಕರು ಹೆಸರು ಬದಲಾವಣೆ
ವಿವಿಧ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ 7.75 ಕೋಟಿ ಅನುದಾನ ಬಿಡುಗಡೆಯಾದ ಶೃಂಗೇರಿ ಕ್ಷೇತ್ರದ ಶಾಸಕರ ಹೆಸರನ್ನು ಆದೇಶ ಪ್ರತಿಯಲ್ಲಿ ತಪ್ಪಾಗಿ ಬರೆಯಲಾಗಿದೆ. ಶೃಂಗೇರಿ ಶಾಸಕರ ಹೆಸರು ದೇವರಾಜ್ ಡಿ.ಎನ್. ಎಂದು ಉಲ್ಲೇಖಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಟಿ.ಡಿ. ರಾಜೇಗೌಡ ಅವರು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:22 pm, Wed, 14 September 22