Gruha Jyothi Scheme: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಇರುವವರಿಗೆ ವಿದ್ಯುತ್​​ ಫ್ರೀ ಇದೆಯೇ?

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Jun 02, 2023 | 4:56 PM

ಬೆಂಗಳೂರು: ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದ ಐದು ಘೋಷಣೆಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಪೈಕಿ ಗೃಹಜ್ಯೋತಿ ಯೋಜನೆ (Gruha Jyothi Scheme) ಒಂದು. ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಸಿಎಂ ಹೇಳಿದ್ದಾರೆ. ಈ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್​ನ್ನು ಕಾಂಗ್ರೆಸ್​ ಸರ್ಕಾರ ಉಚಿತ ನೀಡುತ್ತಿದೆ. ಹಾಗಾದ್ರೆ ಬಾಡಿಗೆದಾರರಿಗೂ ಈ ಯೋಜನೆ ಅನ್ವಯಿಸುತ್ತಾ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ಹೀಗಿದೆ. ​​    ​

ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್​ ನೀಡುತ್ತೇವೆ. ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್ ನಂಬರ್ ಇದ್ದರೆ ಹೊಂದಿದ್ದರೆ ಅದನ್ನು ಕಮರ್ಷಿಯಲ್​ ಎಂದು ಪರಿಗಣಿಸಲಾಗುವುದು. ಹಾಗಾಗಿ ಬಾಡಿಗೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯವಾಗಲ್ಲ ಎಂದಿದ್ದಾರೆ.

ಇದನ್ನೂ ಓದಿ: Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ

ಸಿಂಗಲ್ ಬಿಲ್ಡಿಂಗ್​ನಲ್ಲಿ ಬಾಡಿಗೆದಾರರಿದ್ದರೆ ಮಾತ್ರ ಉಚಿತವಿರುತ್ತದೆ. ಒಂದು ಬಿಲ್ಡಿಂಗ್​ನಲ್ಲಿ ಒಂದು ಮನೆ RR ನಂಬರ್​ ಮಾತ್ರ ಪರಿಗಣನೆ ಮಾಡಲಾಗುತ್ತಿದೆ. ಒಂದು ಬಿಲ್ಡಿಂಗ್​ನಲ್ಲಿ ಒಂದಕ್ಕಿಂತ ಹೆಚ್ಚು ಆರ್​ಆರ್​ ನಂಬರ್​ಯಿದ್ದರೆ, ಅದರ ಲಾಭವನ್ನು ಬಿಲ್ಡಿಂಗ್ ಮಾಲೀಕರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

12 ತಿಂಗಳ ಸರಾಸರಿ ವಿದ್ಯುತ್​ ಬಿಲ್​ ಪರಿಗಣೆ

12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡಲಾಗುವುದು. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಗೃಹಜ್ಯೋತಿ ಸೇರಿದಂತೆ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಗಳನ್ನು ಸಹ ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:43 pm, Fri, 2 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ